Dharwad News: ಧಾರವಾಡವನ್ನು ಬರಪೀಡಿತ ಜಿಲ್ಲೆ ಎಂದು ಘೋಷಿಸದ ಕಾರಣ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ

Dharwad News: ರಾಜ್ಯ ಸರ್ಕಾರ ಬರಗಾಲ ಘೋಷಣೆ ಮಾಡುವ ವಿಚಾರದಲ್ಲಿ ಧಾರವಾಡ ಜಿಲ್ಲೆಯನ್ನು ಕೈಬಿಟ್ಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಜಿಲ್ಲೆಯಲ್ಲೂ ಮಳೆ ಕೊರತೆಯಿಂದ ರೈತರು ಸಂಕಷ್ಟ ಅನುಭವಿಸುತ್ತಿದ್ದರೂ ಬರಪೀಡಿತ ಜಿಲ್ಲೆಗಳ ಪಟ್ಟಿಯಲ್ಲಿ ಧಾರವಾಡಕ್ಕೆ ಸ್ಥಾನ ನೀಡದಿರುವುದನ್ನು ರೈತರು ತಾರತಮ್ಯ ಎಂದು ಆರೋಪಿಸುತ್ತಿದ್ದಾರೆ.

ಮಳೆ ಕೊರತೆ… ಬೆಳೆ ನಷ್ಟದ ಆತಂಕ… ಒಂದೆಡೆ ರೈತರ ಸಂಕಷ್ಟ ಮುಂದುವರಿದಿದೆ. ಮತ್ತೊಂದೆಡೆ ರಾಜ್ಯ ಸರ್ಕಾರದ ಬರಪೀಡಿತ ಜಿಲ್ಲೆಗಳ ಪಟ್ಟಿಯಲ್ಲಿ ಧಾರವಾಡ ಜಿಲ್ಲೆ ಇಲ್ಲದಿರುವುದು ರೈತರ ಆಕ್ರೋಶಕ್ಕೆ ಕಾರಣವಾಗಿದೆ.

ಜಿಲ್ಲೆಯ ಹಲವು ಭಾಗಗಳಲ್ಲಿ ಮಳೆ ಕೊರತೆಯ ಪರಿಣಾಮ ಕೃಷಿ ಚಟುವಟಿಕೆಗಳ ಮೇಲೂ ಬೀರುತ್ತಿದೆ. ರೈತರು ಸರ್ಕಾರದಿಂದ ನೆರವಿನ ನಿರೀಕ್ಷೆಯಲ್ಲಿದ್ದರೂ ಬರದ ಪಟ್ಟಿಯಿಂದ ಜಿಲ್ಲೆಯನ್ನು ಕೈಬಿಟ್ಟಿರುವುದಕ್ಕೆ ರೈತ ಸಂಘಟನೆಗಳು ಆಕ್ಷೇಪ ವ್ಯಕ್ತಪಡಿಸಿವೆ.

ಧಾರವಾಡ ಜಿಲ್ಲೆಯ ವಾಸ್ತವ ಪರಿಸ್ಥಿತಿಯನ್ನು ಪರಿಶೀಲಿಸಿ, ಜಿಲ್ಲೆಯನ್ನು ಕೂಡ ಬರಪೀಡಿತ ಎಂದು ಘೋಷಿಸಬೇಕು. ರೈತರಿಗೆ ಅಗತ್ಯ ಪರಿಹಾರ ಮತ್ತು ನೆರವು ನೀಡಬೇಕು ಎಂಬುದು ರೈತ ಮುಖಂಡರ ಒತ್ತಾಯವಾಗಿದೆ.

ಒಟ್ಟಿನಲ್ಲಿ ಮಳೆ ಕೊರತೆಯಿಂದ ರೈತರು ಸಂಕಷ್ಟ ಎದುರಿಸುತ್ತಿರುವಾಗ ಧಾರವಾಡ ಜಿಲ್ಲೆಯನ್ನು ಬರಪೀಡಿತ ಪಟ್ಟಿಯಿಂದ ಕೈಬಿಟ್ಟಿರುವುದು ಇದೀಗ ಚರ್ಚೆಗೆ ಗ್ರಾಸವಾಗಿದೆ. ರೈತರ ಆಕ್ರೋಶದ ಬಳಿಕ ಸರ್ಕಾರ ಯಾವ ಕ್ರಮ ಕೈಗೊಳ್ಳಲಿದೆ ಎಂಬುದನ್ನು ಕಾದು ನೋಡಬೇಕಿದೆ.

ಕ್ಯಾಮೆರಾ ಪರ್ಸನ ಹೇಮಂತ್ ಜೊತೆ ಸಂಗಮೇಶ್ ಸತ್ತಿಗೇರಿ, ಕರ್ನಾಟಕ ಟಿವಿ, ಹುಬ್ಬಳ್ಳಿ

About The Author