Dharwad: ಮದ್ಯಪ್ರಿಯರಿಗೆ ಶಾಕ್ ಮೇಲೆ ಶಾಕ್ – ಮೂರು ದಿನ ಎಣ್ಣೆ ಸಿಗಲ್ಲ

Dharwad: ಧಾರವಾಡ: ಮದ್ಯಪ್ರಿಯರಿಗೆ ಶಾಕ್ ಮೇಲೆ ಶಾಕ್ ಎದುರಾಗಿದೆ. ಇಂದಿನಿಂದ ಮೂರು ದಿನಗಳ ಕಾಲ ಧಾರವಾಡ ಜಿಲ್ಲೆಯಾದ್ಯಂತ ಮದ್ಯ ಮಾರಾಟ ಬಂದ್ ಆಗಿದೆ.

ಇಂದು 9 ದಿನದ ಗಣೇಶನ ಮೂರ್ತಿಗಳು ವಿಸರ್ಜನೆಯಾಗುವುದರಿಂದ ಮದ್ಯ ಮಾರಾಟ ಬಂದ್ ಮಾಡಲಾಗಿದೆ. ನಾಳೆ ಈದ್ ಮಿಲಾದ್ ಹಬ್ಬ ಇರುವುದರಿಂದ ನಾಳೆಯೂ ಕೂಡ ಮದ್ಯ ಮಾರಾಟ ಬಂದ್ ಆಗಲಿದೆ. ನಾಡಿದ್ದು, 11 ದಿನದ ಗಣೇಶನ ಮೂರ್ತಿಗಳು ವಿಸರ್ಜನೆಯಾಗುವುದರಿಂದ ನಾಡಿದ್ದು ಕೂಡ ಮದ್ಯ ಮಾರಾಟ ಬಂದ್ ಇರಲಿದೆ.

ಒಟ್ಟು ಮೂರು ದಿನಗಳ ಕಾಲ ಮದ್ಯ ಮಾರಾಟ ಬಂದ್ ಆಗಿರುವುದರಿಂದ ಮದ್ಯಪ್ರಿಯರಿಗೆ ಶಾಕ್ ಕೊಟ್ಟಂತಾಗಿದೆ.

About The Author