Dharwad : ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರು ಅಪ್ರಾಪ್ತ ಬಾಲಕರ ಬಂಧನ..!

ಧಾರವಾಡ :  ಜಿಲ್ಲೆಯಲ್ಲಿ 15 ವರ್ಷದ ಬಾಲಕಿ ಮೇಲೆ ಅತ್ಯಾಚಾರ ನಡೆದಿದೆ. ಈ ಸಂಬಂಧ ಪೊಲೀಸರು ಆರು ಅಪ್ರಾಪ್ತ ಬಾಲಕರನ್ನು ಬಂಧಿಸಿದ್ದಾರೆ. ಸದ್ಯ ಬಂಧಿತರನ್ನು ನ್ಯಾಯಾಂಗ ಬಂಧನದಲ್ಲಿ ಇರಿಸಲಾಗಿದೆ. ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ್ದ ಆರೋಪದಡಿ ಪೊಲೀಸರು ಆರು ಅಪ್ರಾಪ್ತ ಬಾಲಕರನ್ನು ಧಾರವಾಡದ ಪೊಲೀಸರು ಬಂಧಿಸಿದ್ದು, ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

ಮೂರು ತಿಂಗಳ ಅವಧಿಯಲ್ಲಿ ವಿವಿಧ ಸ್ಥಳಗಳಲ್ಲಿ ಬಾಲಕಿಯ ಮೇಲೆ ಅತ್ಯಾಚಾರ ನಡೆದಿದೆ. ದೂರಿನ ಅನ್ವಯ ಆರು ಬಾಲಕರನ್ನ ಬಂಧಿಸಲಾಗಿದೆ. ಅತ್ಯಾಚಾರದ ಬಳಿಕ ವಿಷಯ ಬಹಿರಂಗಪಡಿಸಿದ್ರೆ ಗಂಭೀರ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಬಾಲಕರು ಬೆದರಿಕೆ ಸಹ ಹಾಕಿದ್ರು ಎಂದು ಸಹಾಯಕ ಪೊಲೀಸ್ ಕಮಿಷನರ್ ಅನುಷಾ ಜಿ ಹೇಳಿದ್ದಾರೆ. ಸದ್ಯ ಬಾಲಕಿಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದೆ. ಇತ್ತ ಬಂಧಿತ ಆರು ಬಾಲಕರನ್ನು ನ್ಯಾಯಾಂಗ ಬಂಧನದಲ್ಲಿ ಇರಿಸಲಾಗಿದೆ.

About The Author