Monday, April 29, 2024

Latest Posts

ಪೊಲೀಸ್‌ ಕಾನ್ಸ್‌ಟೇಬಲ್ ಪರೀಕ್ಷೆಗೆ ವಸ್ತ್ರ ಸಂಹಿತೆ ಜಾರಿ ಮಾಡಿದ ಧಾರವಾಡ ಎಸ್‌ಪಿ

- Advertisement -

Dharwad News: ಧಾರವಾಡ: ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಸಶಸ್ತ್ರ ಪೊಲೀಸ್ ಕಾನ್ಸ್‌ಟೇಬಲ್‌ ಸಿಎಆ‌ರ್ ಮತ್ತು ಡಿಎಆರ್ ವಿಭಾಗದ ಪುರುಷ ಮತ್ತು ತೃತೀಯ ಲಿಂಗ ಪುರುಷ 3,064 ಹುದ್ದೆಗಳಿಗೆ ಲಿಖಿತ ಪರೀಕ್ಷೆಯನ್ನು ಜನೆವರಿ 28 ರಂದು ಬೆಳಿಗ್ಗೆ 11 ರಿಂದ 12-30 ಗಂಟೆಯವರೆಗೆ ರಾಜ್ಯಾದ್ಯಂತ ನಡೆಸಲಾಗುವುದು. ಈ ಪರೀಕ್ಷೆಗೆ ಧಾರವಾಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಗೋಪಾಲ ಬ್ಯಾಕೋಡ ಅವರು ವಸ್ತ್ರ ಸಂಹಿತೆ ಜಾರಿ ಮಾಡಿದ್ದಾರೆ.

ಲಿಖಿತ ಪರೀಕ್ಷೆಗೆ ಅರ್ಹರಿರುವ ಅಭ್ಯರ್ಥಿಗಳಿಗೆ ಪ್ರವೇಶ ಪತ್ರದ ಬಗ್ಗೆ ಎಸ್.ಎಂ.ಎಸ್ ಮೂಲಕ ಮಾಹಿತಿಯನ್ನು ಮತ್ತು ಪ್ರವೇಶ ಪತ್ರದ ಲಿಂಕ್‌ನ್ನು ಕಳುಹಿಸಲಾಗುವುದು. ಅಭ್ಯರ್ಥಿಗಳು ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿಕೊಂಡು ನಿಗದಿಪಡಿಸಿದ ದಿನಾಂಕದಂದು ಲಿಖಿತ ಪರೀಕ್ಷೆಗೆ ಹಾಜರಾಗಬೇಕು.

ಪುರುಷ ಮತ್ತು ತೃತೀಯ ಲಿಂಗ ಪುರುಷ ಅಭ್ಯರ್ಥಿಗಳು ಕಡ್ಡಾಯವಾಗಿ ಅರ್ಧ ತೋಳಿನ ಶರ್ಟ್‌ಗಳನ್ನು ಧರಿಸಬೇಕು ಹಾಗೂ ಸಾಧ್ಯವಾದಷ್ಟು ಕಾಲರ್ ರಹಿತ ಶರ್ಟ್‌ಗಳನ್ನು ಧರಿಸುವುದು, ಜೀಪ್ ಪ್ಯಾಕೆಟಗಳು, ದೊಡ್ಡ ಬಟನ್‌ಗಳು ಇರುವ ಶರ್ಟ್‌ಗಳನ್ನು ಧರಿಸತಕ್ಕದ್ದಲ್ಲ. ಜೀನ್ಸ್ ಪ್ಯಾಂಟ್ ಮತ್ತು ಹೆಚ್ಚಿನ ಜೇಬುಗಳಿರುವ ಪ್ಯಾಂಟ್‌ಗಳನ್ನು ಧರಿಸತಕ್ಕದ್ದಲ್ಲ.

ಪರೀಕ್ಷಾ ಕೇಂದ್ರದೊಳಗೆ ಶೂ ಗಳನ್ನು ನಿಷೇಧಿಸಲಾಗಿದ್ದು, ಅಭ್ಯರ್ಥಿಗಳು ತೆಳುವಾದ ಅಡಿ ಭಾಗವಿರುವ ಪಾದರಕ್ಷೆಗಳನ್ನು (ಚಪ್ಪಲಿ) ಧರಿಸಬೇಕು. ಕುತ್ತಿಗೆ ಸುತ್ತ ಯಾವುದೇ ಲೋಹದ ಆಭರಣಗಳನ್ನು ಅಥವಾ ಉಂಗುರ ಮತ್ತು ಕಡಗಗಳನ್ನು ಧರಿಸುವುದನ್ನು ನಿಷೇಧಿಸಲಾಗಿದೆ ಎಂದು ಎಸ್‌ಪಿ ತಿಳಿಸಿದ್ದಾರೆ.

ಇಸ್ಲಾಮಿಕ್ ಪವರ್ ಎಂದವನ ಮನೆಗೆ ಹೋಗಿ ರಾಮಮಂದಿರಕ್ಕೆ ಆಹ್ವಾನ ನೀಡಲು ನಿರ್ಧರಿಸಿದ ಶ್ರೀರಾಮಸೇನೆ

“ಮಿಸ್ಟರ್ ಪ್ರತಾಪ್ ಸಿಂಹ ಏಕೆ ಒಂದೇ ಒಂದು ರೂಪಾಯಿ ತರಲಿಲ್ಲ. ಇಷ್ಟು ಎಂಪಿಗಳಿದ್ದು ನಾಚಿಕೆ ಆಗುವುದಿಲ್ಲವೇ?”

ಬಿಜೆಪಿಗೆ ವಾಪಸ್ ಆಗುವಂತೆ ಜಗದೀಶ್ ಶೆಟ್ಟರ್‌ಗೆ ಬಂಪರ್ ಆಫರ್.. ಏನದು ಆಫರ್?

- Advertisement -

Latest Posts

Don't Miss