Saturday, December 7, 2024

Latest Posts

Dharwad News: ಕ್ಷುಲ್ಲಕ ಕಾರಣಕ್ಕೆ ತಲೆ ಮೇಲೆ ಕಲ್ಲು ಹೊತ್ತು ಹಾಕಿ ಕೊ*ಲೆ

- Advertisement -

Dharwad News: ಧಾರವಾಡ: ಕ್ಷುಲ್ಲಕ ಕಾರಣಕ್ಕೆ ವ್ಯಕ್ತಿಯ ತಲೆ ಮೇಲೆ ಕಲ್ಲು ಹಾಕಿ ಕೊಲೆ ಮಾಡಿರುವ ಘಟನೆ ಧಾರವಾಡದಲ್ಲಿ ನಡೆದಿದೆ. ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನ ತಲೆಮೊರಬ ಗ್ರಾಮದಲ್ಲಿ ಈ ಭೀಕರ ಕೊಲೆ ನಡೆದಿದ್ದು, ಹೊಂಚು ಹಾಕಿ ಕೊಲೆ ಮಾಡಿದ್ದಾರೆ.

ರಾತ್ರಿ ವೇಳೆ ಕರೆಂಟ್ ಕನೆಕ್ಷನ್ ತೆಗೆದು, ಮನೆಯ ಮೇಲೆ ದಾಳಿ ಮಾಡಿ, 55 ವರ್ಷದ ಅಡಿವೆಪ್ಪ ತಡಕೋಡ ಎಂಬ ವ್ಯಕ್ತಿಯ ತಲೆ ಮೇಲೆ ಕಲ್ಲು ಹೊತ್ತು ಹಾಕಿ ಕೊಲೆ ಮಾಡಲಾಗಿದೆ. ಘಟನಾ ಸ್ಥಳಕ್ಕೆ ನವಲಗುಂದ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಧಾರವಾಡ ಎಸ್ಪಿ ಗೋಪಾಲ ಬ್ಯಾಕೋಡ ಸ್ಥಳಕ್ಕೆ ಬಂದು, ಶ್ಬಾನದಳದಿಂದ ಆರೋಪಿಗಳನ್ನ ಪತ್ತೆ ಹಚ್ಚಲು ಮುಂದಾಗಿದ್ದಾರೆ. ಇನ್ನು ನವಲಗುಂದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Latest Posts

Don't Miss