Thursday, February 6, 2025

Latest Posts

ಧಾರವಾಡ ಜಿಲ್ಲಾ ಆಸ್ಪತ್ರೆಗೆ ಹಿರಿಯ ಸಿವಿಲ್ ನ್ಯಾಯಾಧೀಶರ ಧಿಡೀರ್ ಭೇಟಿ

- Advertisement -

Dharwad News: ಧಾರವಾಡ : ಧಾರವಾಡದ ಜಿಲ್ಲಾ ಆಸ್ಪತ್ರೆಗೆ ಹಿರಿಯ ಸಿವಿಲ್ ನ್ಯಾಯಾಧೀಶರಾದ ಪರಶುರಾಮ್ ದೊಡ್ಡಮನಿ ಅವರು ಮಂಗಳವಾರ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಜಿಲ್ಲಾ ಆಸ್ಪತ್ರೆ ಬಡವರ ಪಾಲಿನ ಸಂಜೀವಿನಿ. ಎಲ್ಲಾ ಸೌಕರ್ಯಗಳನ್ನೊಳಗೊಂಡಿರುವ ಜಿಲ್ಲಾ ಆಸ್ಪತ್ರೆಯಲ್ಲಿ ಜನರಿಗೆ ಉತ್ತಮವಾಗಿ ಚಿಕಿತ್ಸೆ ಸಿಗುತ್ತಿದೆಯಾ ಹಾಗೂ ಎಲ್ಲಾ ಸೌಕರ್ಯಗಳನ್ನು ಜನರಿಗೆ ಉತ್ತಮವಾಗಿ ನೀಡಲಾಗುತ್ತಿದೆಯಾ ಎಂಬುದನ್ನು ಪರಿಶೀಲನೆ ಮಾಡುವ ಉದ್ದೇಶದಿಂದ ನ್ಯಾಯಾಧೀಶರು ಆಸ್ಪತ್ರೆಗೆ ಭೇಟಿ ನೀಡಿ ನೋಂದಣಿ ವಿಭಾಗ, ತುರ್ತು ಚಿಕಿತ್ಸಾ ವಿಭಾಗಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಆಸ್ಪತ್ರೆಗೆ ಪ್ರತಿನಿತ್ಯ ಸಾವಿರಾರು ಜನ ಬಡವರು ಬರುತ್ತಿರುವುದರಿಂದ ಆಸ್ಪತ್ರೆ ಆವರಣ ಚಿಕ್ಕದಾಗಿದೆ. ಈ ಬಗ್ಗೆ ಸರ್ಕಾರಕ್ಕೂ ಜಿಲ್ಲಾ ಶಸ್ತ್ರ ಚಿಕಿತ್ಸಕರು ಪ್ರಸ್ತಾವನೆ ಸಲ್ಲಿಸಿದ್ದಾರೆ. ಜಿಲ್ಲಾ ಆಸ್ಪತ್ರೆಯಲ್ಲಿ ಜನರಿಂದ ದೂರುಗಳು ಕೇಳಿ ಬರಲಾರದ ರೀತಿಯಲ್ಲಿ ಕೆಲಸ ಮಾಡಬೇಕು ಎಂದು ನ್ಯಾಯಾಧೀಶರು ಸೂಚನೆ ನೀಡಿದರು.

ಹೊರಗಡೆಯಿಂದ ಬಂದ ರೋಗಿಗಳಿಗೆ ಸರಿಯಾದ ಮಾರ್ಗದರ್ಶನ ನೀಡಲಾಗುತ್ತಿಲ್ಲ ಎಂಬ ಆರೋಪವಿದೆ. ಇದನ್ನು ಸ್ವತಃ ನ್ಯಾಯಾಧೀಶರು ನಮ್ಮ ಗಮನಕ್ಕೆ ತಂದಿದ್ದು, ಅದನ್ನು ಸರಿಪಡಿಸುವಂತೆ ಹೇಳಿದ್ದಾರೆ. ಕೂಡಲೇ ಆ ಬಗ್ಗೆ ಕ್ರಮವಹಿಸಲಾಗುವುದು. ಜಿಲ್ಲಾ ಆಸ್ಪತ್ರೆಯಲ್ಲಿ ಎಲ್ಲರೂ ಚೆನ್ನಾಗಿ ಕೆಲಸ ಮಾಡುತ್ತಿದ್ದಾರೆ. ಸಣ್ಣಪುಟ್ಟ ತಪ್ಪುಗಳಿದ್ದರೂ ಅವುಗಳನ್ನು ಸರಿಪಡಿಸಿಕೊಳ್ಳಲಾಗುವುದು ಎಂದು ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಸಂಗಪ್ಪ ಗಾಬಿ ತಿಳಿಸಿದರು.

ರೋಗಿಗಳ ನೋಂದಣಿ ಕಾರ್ಯ ಚುರುಕುಗೊಳ್ಳಬೇಕು. ಬಹಳ ಹೊತ್ತು ಜನ ಹೊರಗಡೆ ನಿಲ್ಲುವಂತಾಗಿದೆ. ಹೊರಗಡೆ ಜನರನ್ನು ಬಹಳ ಹೊತ್ತು ನಿಲ್ಲಿಸಬೇಡಿ ಎಂದು ನ್ಯಾಯಾಧೀಶರು ಆಸ್ಪತ್ರೆಗೆ ಸಿಬ್ಬಂದಿಗೆ ಸೂಚನೆ ನೀಡಿದರು.

‘ಪ್ರಧಾನಿ ನರೇಂದ್ರ ಮೋದಿ ಅವರ ಜನಪ್ರಿಯತೆಯ ಎಕ್ಸ್ ಪೈರಿ ಡೇಟ್ ಮುಗಿದಿದೆ’

- Advertisement -

Latest Posts

Don't Miss