ಪೊಗರು ಸಿನಿಮಾ ವಿವಾದಕ್ಕೆ ಸಂಬಂಧಿಸಿದಂತೆ ಧ್ರುವ ಸರ್ಜಾ ಸೋಷಿಯಲ್ ಮೀಡಿಯಾ ಮೂಲಕ ಬೇಷರತ್ ಕ್ಷಮೆ ಕೋರಿದ್ದಾರೆ. ಪೊಗರು ಸಿನಿಮಾದಲ್ಲಿ ಬ್ರಾಹ್ಮಣ ಸಮುದಾಯಕ್ಕೆ ಅವಮಾನವಾಗುವಂತಹ ಚಿತ್ರಸಲಾಗಿದೆ ಎಂದು ಬ್ರಾಹ್ಮಣ ಮಹಾಸಭಾ ಮಂಡಳಿ ಸದಸ್ಯರು ಆರೋಪಿಸಿದ್ದರು. ಬಳಿಕ ಫಿಲ್ಮಂ ಛೇಂಬರ್ ನಲ್ಲಿ ಈ ಬಗ್ಗೆ ಮಾತುಕತೆ ನಡೆಸಿ ಆ ದೃಶ್ಯಗಳನ್ನು ತೆಗೆದು ಹಾಕುವುದಾಗಿ ನಿರ್ದೇಶಕ ನಂದಕಿಶೋರ್ ಹೇಳಿದ್ದರು. ಅದರಂತೆ ಆ ಎಲ್ಲಾ ಸೀನ್ಸ್ ಗಳನ್ನು ತೆಗೆದು ಹಾಕಲಾಗಿದ್ದು, ಬ್ರಾಹ್ಮಣ ಸಭಾ ಸದಸ್ಯರು ಬಳಿಕ ಸಿನಿಮಾ ನೋಡಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಇದೀಗ ಧ್ರುವ ಸರ್ಜಾ ಬೇಷರತ್ ಕ್ಷಮೆಯಾಚಿಸಿದ್ದಾರೆ. ತಾತನವರ ಕಾಲದಿಂದಲೂ ಹಿಂದೂತ್ವದ ಪ್ರತಿಪಾದಕರಾಗಿಯೇ ಬದುಕಿದ್ದೇವೆ. ಕಲೆಯೇ ಧರ್ಮ.. ನಾವು ಎಲ್ಲ ಧರ್ಮಗಳನ್ನು ಗೌರವಿಸಿದ್ದೇವೆ. ಯಾವುದೇ ಸಮುದಾಯಕ್ಕೆ ನೋವಾಗಿದ್ದಾರೆ ಬೇಷರತ್ ಕ್ಷಮೆ ಕೇಳುತ್ತೇನೆ ಎಂದು ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.