ಕೆಪಿಸಿಸಿ ಕಾರ್ಯಾಧ್ಯಕ್ಷ ದಿ.ಧ್ರುವನಾರಾಯಣ್ ಪತ್ನಿ ನಿಧನ..

ನಂಜನಗೂಡು: ಕೆಲ ದಿನಗಳ ಹಿಂದಷ್ಟೇ ನಿಧನರಾಗಿದ್ದ ಕಾಂಗ್ರೆಸ್‌ನ ಧ್ರುವನಾರಾಯಣ್ ಪತ್ನಿ ವೀಣಾ ಧ್ರುವನಾರಾಯಣ್(50) ಅನಾರೋಗ್ಯದಿಂದ ನಿಧನರಾಗಿದ್ದಾರೆ. ಮೈಸೂರಿನಲ್ಲಿಂದು ಬೆಳಿಗ್ಗೆ ಕೊನೆಯುಸಿರೆಳೆದಿದ್ದು, ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ. ವೀಣಾ ಹಲವು ತಿಂಗಳಿನಿಂದ ಅನಾರೋಗ್ಯದಿಂದ ಬಳಲುತ್ತಿದ್ದು, ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಇಂದು ಚಿಕಿತ್ಸೆ ಫಲಕಾರಿಯಾಗದೇ, ವೀಣಾ ಸಾವನ್ನಪ್ಪಿದ್ದಾರೆ. ಕೆಲ ದಿನಗಳ ಹಿಂದಷ್ಟೇ ತಂದೆಯನ್ನು ಕಳೆದುಕೊಂಡಿದ್ದ ದರ್ಶನ್, ಈಗ ಅಮ್ಮನನ್ನೂ ಕಳೆದುಕೊಂಡಿದ್ದಾರೆ. ಧ್ರುವ ನಾರಾಯಣ್ ನಿಧನದ ಬಳಿಕ, ಅವರ ಮಗ ದರ್ಶನ್‌ಗೆ ಟಿಕೇಟ್ ಸಿಗುತ್ತದೆ ಎಂದು ಹೇಳಲಾಗಿತ್ತು. ಅದಕ್ಕಾಗಿ ದರ್ಶನ್ ಪ್ರಚಾರ … Continue reading ಕೆಪಿಸಿಸಿ ಕಾರ್ಯಾಧ್ಯಕ್ಷ ದಿ.ಧ್ರುವನಾರಾಯಣ್ ಪತ್ನಿ ನಿಧನ..