Political News: ಇಂದು ದೇವದುರ್ಗದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಕಾಂಗ್ರೆಸ್ ಪಕ್ಷ ಜಾತ್ಯಾತೀತ ತತ್ವದಲ್ಲಿ ನಂಬಿಕೆ ಇಟ್ಟಿದೆ. ಸಮಾಜದಲ್ಲಿನ ಎಲ್ಲಾ ಜಾತಿ, ಧರ್ಮದ ಪರವಾಗಿ ನಾವಿದ್ದೇವೆ. ಕೇವಲ ಒಂದು ಜಾತಿ, ಧರ್ಮದ ಪರವಾಗಿರಲು ನಾವು ಬಿಜೆಪಿ ಅಲ್ಲ. ಧರ್ಮದ ಆಧಾರದ ಮೇಲೆ ಸಮಜವನ್ನು ಒಡೆಯುವವರಲ್ಲ. ನಾವು ಜಾತ್ಯಾತೀತ ತತ್ವ ಹಾಗೂ ಧರ್ಮನಿರಪೇಕ್ಷತೆಯಲ್ಲಿ ನಂಬಿಕೆಯುಳ್ಳವರು. ಕಾಂಗ್ರೆಸ್ ಜಾತ್ಯಾತೀತ ಪಕ್ಷ. ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟ ಪಕ್ಷ ನಮ್ಮದು ಎಂದಿದ್ದಾರೆ.
ಲೋಕಸಭಾ ಚುನಾವಣೆಯಲ್ಲಿ ಮೈಸೂರು ಕ್ಷೇತ್ರದಿಂದ ಮಾಜಿ ಶಾಸಕ ಯತೀಂದ್ರ ಅವರನ್ನು ಕಣಕ್ಕಿಳಿಸಿದರೆ ಸ್ವಾಗತಿಸುವುದಾಗಿ ಸಂಸದ ಪ್ರತಾಪ್ ಸಿಂಹ ಹೇಳಿದ್ದಾರೆ. ನಾನಾಗಲಿ, ಯತೀಂದ್ರ ಆಗಲಿ ಈ ರೀತಿ ಹೇಳಿಲ್ಲ. ಪ್ರತಾಪ್ ಸಿಂಹ ಅವರಿಗೆ ಸೋಲುತ್ತೇನೆ ಎಂದು ಹೆದರಿಕೆ ಶುರುವಾಗಿದೆ ಹಾಗಾಗಿ ಏನೇನೋ ಹೇಳಿಕೆ ನೀಡುತ್ತಾರೆ. ಇವೆಲ್ಲ ಊಹಾಪೋಹಗಳು ಅಷ್ಟೇ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ನಗರಾಭಿವೃದ್ಧಿ ಸಚಿವ ಚುನಾವಣಾ ವೀಕ್ಷಕರಾಗಿ ಹೋಗಿದ್ದರು. ಅವರು ನೀಡಿರುವ ವರದಿ ಆಧಾರದ ಮೇಲೆ ನಾವು ನಿರ್ಧಾರ ಕೈಗೊಳ್ಳುತ್ತೇವೆ. ಕ್ಷೇತ್ರದಲ್ಲಿ ಶಾಸಕರು, ಮಾಜಿ ಶಾಸಕರು, ಸಂಸದರು, ಅಭ್ಯರ್ಥಿಯಾಗಿದ್ದವರು, ಬ್ಲಾಕ್ ಸಮಿತಿ ಅಧ್ಯಕ್ಷ, ಜಿಲ್ಲಾಧ್ಯಕ್ಷರು, ಪ್ರಮುಖ ಕಾರ್ಯಕರ್ತರ ಅಭಿಪ್ರಾಯ ಪಡೆದು ಅವರು ಹೇಳಿದವರಿಗೆ ಟಿಕೇಟ್ ನೀಡಲಾಗುವುದು ಎಂದು ಸಿಎಂ ಹೇಳಿದರು.
ನಾನು ಅಯೋಧ್ಯೆಗೆ ಹೋಗಲ್ಲ ಎಂದು ಎಲ್ಲಿಯೂ ಹೇಳಿಲ್ಲ. ಬಿಜೆಪಿಯವರು ರಾಜಕೀಯ ಮಾಡುತ್ತಿದ್ದಾರೆ. ಅಯೋಧ್ಯೆಯಲ್ಲಿ ಶ್ರೀ ರಾಮಚಂದ್ರನ ಪ್ರತಿಮೆ ಸ್ಥಾಪನೆಗೆ ನಮ್ಮದೇನೂ ವಿರೋಧವಿಲ್ಲ. ಆದರೆ ರಾಜಕೀಯ ಮಾಡಬಾರದು. 22ರಂದು ದೇವಾಲಯದ ಉದ್ಘಾಟನಾ ಕಾರ್ಯಕ್ರಮವನ್ನು ರಾಜಕೀಯವಾಗಿ ಬಳಸಲು ಹೊರಟಿದ್ದಾರೆ. ಅದನ್ನು ನಾವು ವಿರೋಧಿಸುತ್ತೇವೆಯೇ ಹೊರತು ಶ್ರೀ ರಾಮಚಂದ್ರನ ವಿರೋಧಿಗಳಲ್ಲ. ನಾನು ಎಲ್ಲಿಯೂ ಅಯೋಧ್ಯೆಗೆ ಹೋಗುತ್ತೇನೆ ಅಥವಾ ಹೋಗುವುದಿಲ್ಲ ಎಂದು ಹೇಳಿಲ್ಲ ಎಂದು ಸಿಎಂ ಹೇಳಿದ್ದಾರೆ.
ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಗೃಹ ಲಕ್ಷ್ಮೀ ಯೋಜನೆಯಡಿ ಕೊಡುವ 2,000 ರೂ.ಯಾವುದಕ್ಕೂ ಸಾಲುವುದಿಲ್ಲ ಎಂದಿದ್ದಾರೆ. ಅವರು ಅಧಿಕಾರದಲ್ಲಿದ್ದಾಗ ಮಹಿಳೆಯರಿಗೆ ನೂರು ರೂ.ಗಳನ್ನಾದರೂ ಕೊಟ್ಟಿದ್ದರ? ಎಂದು ಸಿಎಂ ಪ್ರಶ್ನಿಸಿದ್ದಾರೆ.
ದೇವದುರ್ಗದಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದೆ.
ಕಾಂಗ್ರೆಸ್ ಪಕ್ಷ ಜಾತ್ಯಾತೀತ ತತ್ವದಲ್ಲಿ ನಂಬಿಕೆ ಇಟ್ಟಿದೆ. ಸಮಾಜದಲ್ಲಿನ ಎಲ್ಲಾ ಜಾತಿ, ಧರ್ಮದ ಪರವಾಗಿ ನಾವಿದ್ದೇವೆ. ಕೇವಲ ಒಂದು ಜಾತಿ, ಧರ್ಮದ ಪರವಾಗಿರಲು ನಾವು ಬಿಜೆಪಿ ಅಲ್ಲ. ಧರ್ಮದ ಆಧಾರದ ಮೇಲೆ ಸಮಜವನ್ನು ಒಡೆಯುವವರಲ್ಲ. ನಾವು ಜಾತ್ಯಾತೀತ ತತ್ವ ಹಾಗೂ ಧರ್ಮನಿರಪೇಕ್ಷತೆಯಲ್ಲಿ… pic.twitter.com/5HC2egcXR4
— Siddaramaiah (@siddaramaiah) January 13, 2024
‘ರಾಮ ಬಿಜೆಪಿಯವರಿಂದಲೇ ಹುಟ್ಟಿದನೇನೋ ಅನ್ನೋ ರೀತಿ ಆಡ್ತಿದ್ದಾರೆ ಈ ಬಿಜೆಪಿಗರು’
ನಾನು ಈಗ ಸ್ಪೀಕರ್. ರಾಜಕೀಯದ ಬಗ್ಗೆ ಕೇಳು ಪ್ರಶ್ನೆಗೆ ನಾನು ಉತ್ತರಿಸುವುದಿಲ್ಲ: ಯು.ಟಿ.ಖಾದರ್
ಇದೆಲ್ಲ ಬರೀ ಲೋಕಸಭೆ ಚುನಾವಣೆಗಾಗಿ ಮಾತ್ರ: ರಾಮಮಂದಿರ ಉದ್ಘಾಟನೆ ಬಗ್ಗೆ ಲಾಡ್ ಮಾತು