Wednesday, October 22, 2025

Latest Posts

HDK ಭೇಟಿಯಾಗಿದ್ದೇಕೆ BYV? ಮೈತ್ರಿಗಾಗಿ ಹೊಸ ಸೂತ್ರ!

- Advertisement -

ದೀಪಾವಳಿ ಹಬ್ಬದ ದಿನದಲ್ಲೇ ರಾಜ್ಯ ರಾಜಕೀಯದಲ್ಲಿ ಹೊಸ ಬೆಳವಣಿಗೆ ಕಂಡುಬಂದಿದೆ. ಬಿಜೆಪಿ ಮತ್ತು ಜೆಡಿಎಸ್ ನಾಯಕರು ಮಹತ್ವದ ಸಭೆ ನಡೆಸಿದ್ದು, ಕಾಂಗ್ರೆಸ್ ಸರ್ಕಾರದ ವಿರುದ್ಧ ಹೋರಾಟವನ್ನು ಬಲಪಡಿಸಲು ಎರಡು ಪಕ್ಷಗಳ ಸಂಯುಕ್ತ ಸಮನ್ವಯ ಸಮಿತಿ ರಚಿಸುವ ಯೋಜನೆ ರೂಪಿಸಲಾಗಿದೆ. ಸಭೆಯ ನಂತರ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು, ಪಕ್ಷದ ನಾಯಕರೊಂದಿಗೆ ಚರ್ಚಿಸಿ ಸಮಿತಿಯನ್ನು ಶೀಘ್ರದಲ್ಲೇ ಪ್ರಕಟಿಸಲಾಗುವುದು ಎಂದು ತಿಳಿಸಿದ್ದಾರೆ.

ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಮತ್ತು ನಿಖಿಲ್ ಕುಮಾರಸ್ವಾಮಿ ಅವರನ್ನು ಬಿಜೆಪಿ ನಿಯೋಗ ಭೇಟಿ ಮಾಡಿ, ರಾಜ್ಯದ ರಾಜಕೀಯ ಪರಿಸ್ಥಿತಿ ಕುರಿತು ಚರ್ಚೆ ನಡೆಸಿದೆ. ಕುಮಾರಸ್ವಾಮಿ ಅವರು 8-10 ದಿನಗಳಲ್ಲಿ ಸಮನ್ವಯ ಸಮಿತಿಗೆ ತಮ್ಮ ಹೆಸರುಗಳ ಪಟ್ಟಿಯನ್ನು ಕಳುಹಿಸುವುದಾಗಿ ತಿಳಿಸಿರುವುದಾಗಿ ವರದಿಯಾಗಿದೆ. ಇದೇ ವೇಳೆ, ಬೆಂಗಳೂರಿಗೆ ಸೀಮಿತವಾಗಿ ಒಂದು ಸಮನ್ವಯ ಸಮಿತಿ ಹಾಗೂ ರಾಜ್ಯ ಮಟ್ಟಕ್ಕೆ ಮತ್ತೊಂದು ಸಮಿತಿ ರಚಿಸುವ ಸಲಹೆ ಕುಮಾರಸ್ವಾಮಿಯಿಂದ ಬಂದಿದೆ ಎಂದು ವಿಜಯೇಂದ್ರ ತಿಳಿಸಿದ್ದಾರೆ.

ವಿಜಯೇಂದ್ರ ಅವರು ರಾಜ್ಯ ಸರ್ಕಾರದ ವಿರುದ್ಧ ತೀವ್ರ ಟೀಕೆ ನಡೆಸುತ್ತಾ, ಕಾಂಗ್ರೆಸ್ ಸರ್ಕಾರದ ಆಡಳಿತ ಹದಗೆಟ್ಟಿದೆ. ಅಭಿವೃದ್ಧಿ ಸ್ಥಗಿತಗೊಂಡಿದ್ದು, ಜನರು ಬೇಸರಗೊಂಡಿದ್ದಾರೆ ಎಂದರು. ಮೋಹನ್‍ದಾಸ್ ಪೈ ಹಾಗೂ ಕಿರಣ್ ಮಜುಂದಾರ್ ಷಾ ಅವರಂತಹ ಹಿರಿಯರ ಸಲಹೆಗಳನ್ನು ಸರಕಾರ ನಿರ್ಲಕ್ಷಿಸುತ್ತಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು. ಹಿಂದೆ ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದಾಗ ಟೀಕೆಗಳನ್ನು ಸಕಾರಾತ್ಮಕವಾಗಿ ಸ್ವೀಕರಿಸಿ, ಸಲಹೆಗಾರರನ್ನು ಆತ್ಮೀಯವಾಗಿ ಕರೆದುಕೊಂಡು ಮಾತನಾಡುತ್ತಿದ್ದರು ಎಂದು ವಿಜಯೇಂದ್ರ ಉದಾಹರಣೆ ನೀಡಿದರು.

ವರದಿ: ರಂಜಿತ ರೇವಣ್ಣ ನಾಟನಹಳ್ಳಿ
- Advertisement -

Latest Posts

Don't Miss