ಡಿಂಪಲ್ ಕ್ವೀನ್ ರಚಿತಾ ರಾಮ್ ಮದುವೆ ರಹಸ್ಯ ಬಿಚ್ಚಿಟ್ಟಿದ್ದಾರೆ. ಅನುಶ್ರೀ ಅವರ ಮದುವೆ ಕುರಿತು ಹಲವು ವರ್ಷಗಳಿಂದ ಕೇಳಿಬರುತ್ತಿದ್ದ ಪ್ರಶ್ನೆಗೆ ಆಗಸ್ಟ್ 28ರಂದು ಕೊನೆಗೂ ಉತ್ತರ ಸಿಕ್ಕಿತು. ಅವರು ವೈವಾಹಿಕ ಜೀವನಕ್ಕೆ ಕಾಲಿಟ್ಟರು. ಈಗ ಇದೇ ರೀತಿಯಾಗಿ, ರಚಿತಾ ರಾಮ್ ಅವರ ವಿವಾಹ ಕುರಿತು ಬಿಗ್ ಅಪ್ಡೇಟ್ ಹೊರಬಿದ್ದಿದೆ. ತಮ್ಮ ಜನ್ಮದಿನದ ಸಂದರ್ಭದಲ್ಲೇ ಅವರು ಮದುವೆಯ ಕುರಿತಂತೆ ಮಹತ್ವದ ಮಾಹಿತಿಯನ್ನು ಹಂಚಿಕೊಂಡಿದ್ದಾರೆ. ಇದರಿಂದ ಫ್ಯಾನ್ಸ್ ವಲಯದಲ್ಲಿ ಕುತೂಹಲ ಹೆಚ್ಚಾಗಿದೆ.
ಈಗ 33 ವರ್ಷದ ರಚಿತಾ ರಾಮ್ ತಮ್ಮ ವೃತ್ತಿಜೀವನದಲ್ಲಿ ನಿರಂತರವಾಗಿ ಸಿನಿಮಾ ಅವಕಾಶಗಳನ್ನು ಸ್ವೀಕರಿಸಿ ಬ್ಯುಸಿಯಾಗಿದ್ದಾರೆ. ಆದರೆ ಇದೀಗ ಅವರು ಮದುವೆಯ ವಿಷಯದಲ್ಲಿ ಗಂಭೀರವಾಗಿ ಯೋಚನೆ ಪ್ರಾರಂಭಿಸಿದ್ದಾರೆ. ಜನ್ಮದಿನದಂದು ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಅವರು, “ವಿವಾಹ ಆಗಬೇಕು ಎಂಬ ನಿರ್ಧಾರ ಮಾಡಿಕೊಂಡಿದ್ದೇನೆ. ಸಾಧ್ಯವಾದಷ್ಟು ಬೇಗ ಮದುವೆಯಾಗುತ್ತೇನೆ. ಮನೆಯಲ್ಲಿ ಹುಡುಗನ ಹುಡುಕಾಟ ನಡೆಯುತ್ತಿದೆ. ನಾನು ಅರೇಂಜ್ಡ್ ಮ್ಯಾರೇಜ್ ಮಾಡಿಕೊಳ್ಳುತ್ತೇನೆ ಎಂದು ಸ್ಪಷ್ಟಪಡಿಸಿದ್ದಾರೆ.
ಈ ಹೇಳಿಕೆ ಅಭಿಮಾನಿಗಳಲ್ಲಿ ಹೊಸ ಚರ್ಚೆಗೆ ಕಾರಣವಾಗಿದೆ. ಹಿಂದಿನಂತೆ ಅನುಶ್ರೀ ಕೂಡ ಅರೇಂಜ್ಡ್ ಮ್ಯಾರೇಜ್ ಬಗ್ಗೆ ಹೇಳಿ ನಂತರ ಲವ್ ಮ್ಯಾರೇಜ್ ಮಾಡಿಕೊಂಡಿದ್ದರು. ಇದೇ ರೀತಿಯಾಗಿ, ರಚಿತಾ ಅವರ ಸಂಗಾತಿಯನ್ನು ಮನೆಯವರೇ ಆಯ್ಕೆ ಮಾಡುತ್ತಾರಾ ಅಥವಾ ಅವರು ಸ್ವತಃ ಆಯ್ಕೆ ಮಾಡಿಕೊಳ್ಳುತ್ತಾರಾ ಎಂಬ ಕುತೂಹಲ ಮೂಡಿದೆ.
ಹರಿಪ್ರಿಯಾ ಅವರು ವಿವಾಹದ ಬಳಿಕ ಸಿನಿಮಾರಂಗದಲ್ಲಿ ಅಷ್ಟಾಗಿ ಸಕ್ರಿಯರಾಗಿರಲಿಲ್ಲ. ಮಗನ ಆರೈಕೆಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದಾರೆ. ಇದೇ ಪರಿಸ್ಥಿತಿ ರಚಿತಾ ರಾಮ್ ಅವರಿಗೂ ಎದುರಾಗಬಹುದೇ ಎಂಬ ಆತಂಕ ಅಭಿಮಾನಿಗಳಲ್ಲಿ ವ್ಯಕ್ತವಾಗಿದೆ. ಆದರೆ ರಚಿತಾ ವಿವಾಹವಾದರೂ ಚಿತ್ರರಂಗ ತೊರೆಯಬಾರದು ಎಂಬುದು ಎಲ್ಲರ ಆಶೆಯಾಗಿದೆ. ಇತ್ತೀಚೆಗೆ ತಮಿಳು ಚಿತ್ರರಂಗದಲ್ಲೂ ಅವರಿಗೆ ಬೇಡಿಕೆ ಹೆಚ್ಚಾಗಿದೆ. ರಜಿನಿಕಾಂತ್ ಅಭಿನಯದ ಕೂಲಿ ಚಿತ್ರದಲ್ಲಿ ವಿಲನ್ ಪಾತ್ರದಲ್ಲಿ ನಟಿಸಿದ್ದ ಅವರು, ಈಗ ಲೋಕೇಶ್ ಕನಗರಾಜ್ ಹೀರೋ ಆಗಿ ನಟಿಸುತ್ತಿರುವ ತಮಿಳು ಚಿತ್ರದಲ್ಲಿ ನಾಯಕಿಯಾಗಿ ಕಾಣಿಸಿಕೊಳ್ಳುವ ಮಾತುಗಳು ಕೇಳಿ ಬರುತ್ತಿವೆ.
ವರದಿ: ರಂಜಿತ ರೇವಣ್ಣ ನಾಟನಹಳ್ಳಿ