Tuesday, May 28, 2024

Latest Posts

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ಗ್ರಹಿಕೆಯಾಗಿದೆ. ಜೋಶಿಯವರಿಂದ ಅನ್ಯಾಯವಾಗಿಲ್ಲ: ಮಹೇಶ್ ಟೆಂಗಿನಕಾಯಿ

- Advertisement -

Hubli News: ಹುಬ್ಬಳ್ಳಿ: ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರಿಂದ ಯಾವುದೇ ರೀತಿಯ ಅನ್ಯಾಯ ಆಗಿಲ್ಲ. ಶಿರಹಟ್ಟಿ ಶ್ರೀ ಫಕೀರ ದಿಂಗಾಲೇಶ್ವರ ಸ್ವಾಮೀಜಿ ಅವರಿಗೆ ತಪ್ಪು ಗ್ರಹಿಕೆ ಆಗಿದೆ ಎಂದು ಹುಬ್ಬಳ್ಳಿ ಧಾರವಾಡ ಸೆಂಟ್ರಲ್ ವಿಧಾನ ಸಭಾ ಕ್ಷೇತ್ರದ ಶಾಸಕ ಮಹೇಶ ಟೆಂಗಿನಕಾಯಿ ಹೇಳಿದರು.

ನಗರದಲ್ಲಿಂದು ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು, ಶಿರಹಟ್ಟಿ ಶ್ರೀ ಫಕೀರ ದಿಂಗಾಲೇಶ್ವರ ಸ್ವಾಮೀಜಿ ಅವರಿಗೆ ತಪ್ಪು ಮಾಹಿತಿ ಇದೆ ಯಾವುದೇ ರೀತಿಯ ಅನ್ಯಾಯ ಆಗಿಲ್ಲ ಲಿಂಗಾಯತ ನಾಯಕರಿಗೆ ಒಂದು ವೇಳೆ ಅಗತ್ಯವಿದ್ದರೇ ಶಿರಹಟ್ಟಿ ಶ್ರೀ ಫಕೀರ ದಿಂಗಾಲೇಶ್ವರ ಸ್ವಾಮೀಜಿ ಜೊತೆಗೆ ಮಾತನಾಡುವೆ ಎಂದರು.

ಇನ್ನೂ ಕಾಂಗ್ರೆಸ್ ನಾಯಕರಿಗೆ ಆದಾಯ ತೆರಿಗೆ ಅಧಿಕಾರಿಗಳಿಂದ ನೋಟೀಸ್ ಜಾರಿ ಮಾಡಿದ ಕುರಿತು ಪ್ರತಿಕ್ರಿಯೆ ನೀಡಿರುವ ಅವರು ಆದಾಯ ತೆರಿಗೆ ಇಲಾಖೆ ಸ್ವತಂತ್ರವಾಗಿದ್ದು, ಯಾವುದೇ ರೀತಿಯ ಭಾರತೀಯ ಜನತಾ ಪಕ್ಷದ ನಾಯಕರ ಹಸ್ತಕ್ಷೇಪ ಇಲ್ಲ. ಇದು ದಾವಣಗೆರೆ ಸಂಸದ ಸಿದ್ದೇಶ್ವರ ಮೇಲೆಯೂ ಸಹ ಐಟಿ ದಾಳಿ ಆಯಿತು ಆವಾಗ ಅದರಲ್ಲಿ ಯಾರ ಕೈವಾಡ ಇದೆ ಎಂದು ಅವರು ಹೇಳಿದರು.

ಶಾಮನೂರು ಶಿವಶಂಕರಪ್ಪ ಹೇಳಿಕೆಗೆ ತಿರುಗೇಟು ನೀಡಿದ ಬ್ಯಾಡ್ಮಿಂಟನ್ ತಾರೆ ಸೈನಾ

ಇದ್ರು ,ಹೋದ್ರು ನನಗೆ ಮಂಡ್ಯ ಸಾಕು. ಸ್ವಾರ್ಥ ಅನ್ನೋದು ಇದ್ರೆ ಮಂಡ್ಯ ಮಾತ್ರ: ಸಂಸದೆ ಸುಮಲತಾ ಅಂಬರೀಷ್

ಹಾಸನದಲ್ಲಿ ಹಿಟ್ ಅಂಡ್ ರನ್‌ಗೆ ಮಾವ-ಅಳಿಯ ಬಲಿ

- Advertisement -

Latest Posts

Don't Miss