- Advertisement -
ದೆಹಲಿ : ಟೂಲ್ ಕಿಟ್ ಹಂಚಿಕೊಂಡ ಆರೋಪದ ಮೇಲೆ ಬಂಧಿಸಲಾಗಿದ್ದ ಪರಿಸರ ಕಾರ್ಯಕರ್ತೆ ದಿಶಾ ರವಿ ಅವರಿಗೆ ದೆಹಲಿಯ ಪಟಿಯಾಲ ಗೃಹ ನ್ಯಾಯಾಲಯ ಮಂಗಳವಾರ ಜಾಮೀನು ಮಂಜೂರು ಮಾಡಿದೆ.
ಟೂಲ್ ಕಿಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಫೆಬ್ರವರಿ 13 ರಂದು ದಿಶಾ ರವಿ ಅವರನ್ನು ಬೆಂಗಳೂರಿನಲ್ಲಿ ದೆಹಲಿ ಪೊಲೀಸರು ಬಂಧಿಸಿದ್ದರು. ದಿಶಾ ರವಿಗೆ ಷರತ್ತು ಬದ್ಧ ಜಾಮೀನು ನೀಡಿರುವ ದೆಹಲಿಯ ಪಟಿಯಾಲ ಗೃಹ ನ್ಯಾಯಾಲಯ 1 ಲಕ್ಷ ಬಾಂಡ್ ಮತ್ತು ಇಬ್ಬರನ್ನು ಶುರಿಟಿ ನೀಡಲು ಹೇಳಿದೆ.
- Advertisement -