Political News: ಇಂದು ಬೆಂಗಳೂರಿನಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಜಿ.ಪರಮೇಶ್ವರ್, ರಾಜ್ಯದಲ್ಲಿ ಅಧಿಕಾರ ಹಂಚಿಕೆ ವಿಚಾರವಾಗಿ ಒಪ್ಪಂದವಾಗಿಲ್ಲ. ಹಾಗೇನಾದರೂ ಅವರೇ ರಾಜಕೀಯ ಮಾಡಿಕೊಳ್ಳಲಿ. ನಾವ್ಯಾಕೆ..? ಅಧಿಕಾರ ಹಂಚಿಕೆ ಬಗ್ಗೆ ಒಪ್ಪಂದವಾಗಲು ಸಾಧ್ಯವೇ ಇಲ್ಲ ಎಂದು ಜಿ.ಪರಮೇಶ್ವರ್ ಹೇಳಿದ್ದಾರೆ.
ಸಿಎಂ ಹುದ್ದೆ ಒಪ್ಪಂದದ ಬಗ್ಗೆ ಪರಮೇಶ್ವರ್ ಮಾತನಾಡಿದ್ದು, ಹೈಕಮಾಂಡ್ ನಿರ್ಧಾರಕ್ಕೆ ನಾವು ತಲೆ ಬಾಗುತ್ತೇವೆ. ಹೈಕಮಾಂಡ್ ಬಿಟ್ಟು ನಾವು ಹೋಗುವುದಿಲ್ಲ. ಒಪ್ಪಂದ ಆಗಿದ್ದೇ ಆದಲ್ಲಿ, ಬೇರೆ ನಾಯಕರ ಅವಶ್ಯಕತೆ ಇಲ್ಲವೇ..? ನಾನು ಈ ಬಗ್ಗೆ ಹೈಕಮಾಂಡ್‌ನಲ್ಲಿ ಕೇಳಿದ್ದೇನೆ. ಅಲ್ಲಿ ಯಾರೂ ರಾಜ್ಯದಲ್ಲಿ ಸಿಎಂ ಸ್ಥಾನದ ಬಗ್ಗೆ ಒಪ್ಪಿಗೆಯಾಗಿದೆ ಎಂದು ಹೇಳಲಿಲ್ಲ. ಡಿಕೆಶಿಯವರು ಯಾವ ಅರ್ಥದಲ್ಲಿ ಹೇಳಿದ್ದಾರೋ ನನಗೆ ಗೊತ್ತಿಲ್ಲ. ಸಿಎಂ ಸಿದ್ದರಾಮಯ್ಯ ಯಾವ ಒಪ್ಪಿಗೆಯೂ ಆಗಿಲ್ಲವೆಂದು ಈಗಾಗಲೇ ಸ್ಪಷ್ಟನೆ ನೀಡಿದ್ದಾರೆ ಎಂದು ಪರಮೇಶ್ವರ್ ಹೇಳಿದ್ದಾರೆ.
ಅಲ್ಲದೇ ಸರ್ಕಾರಿ ಸಮಾರಂಭದಲ್ಲಿ ರಾಜಕೀಯದ ಬಗ್ಗೆ ಮಾತನಾಡಲು ಆಗುವುದಿಲ್ಲ. ಹಾಗಾಗಿ ರಾಜಕೀಯ ಸಮಾವೇಶ ಮಾಡಿ, ರಾಜಕಾರಣದ ಬಗ್ಗೆ ಮಾತನಾಡಬೇಕಾಗುತ್ತದೆ. ಈ ವಿಷಯದ ಬಗ್ಗೆ ವಿರೋಧ ಪಕ್ಷದವರು ಮಾಡುವ ಆರೋಪಕ್ಕೆ, ರಾಜಕೀಯವಾಗಿ ಪ್ರತಿಕ್ರಿಯೆ ನೀಡುತ್ತೇವೆ ಎಂದು ಜಿ.ಪರಮೇಶ್ವರ್ ಹೇಳಿದ್ದಾರೆ.

