Dharawad News: ಧಾರವಾಡ: ಕಾರ್ಮಿಕ ಇಲಾಖೆ ಹಾಗೂ ಧಾರವಾಡ ಜಿಲ್ಲಾಡಳಿತದ ಆಶ್ರಯದಲ್ಲಿ ಧಾರವಾಡ ಜಿಲ್ಲೆಯ ವಿಶೇಷ ಚೇತನರಿಗೆ ಮೋಟಾರ್ ಚಾಲಿತ ತ್ರಿಚಕ್ರ ವಾಹನಗಳ ವಿತರಣೆ, ನೋಂದಾಯಿತ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಮಕ್ಕಳಿಗೆ ಲ್ಯಾಪ್‌ಟಾಪ್ ವಿತರಣೆ ಸಮಾರಂಭ ಹಾಗೂ ಗಿಗ್ ಕಾರ್ಮಿಕರ ನೋಂದಣಿ ಹಾಗೂ ದಿನಪತ್ರಿಕೆ ವಿತರಣೆ ಕಾರ್ಮಿಕರ ವಿಮಾ ಯೋಜನೆ ಚಾಲನಾ ಸಮಾರಂಭವನ್ನು ಧಾರವಾಡದ ಕೆಸಿಡಿ ಕಾಲೇಜು ಮೈದಾನದಲ್ಲಿ ಇದೇ ಡಿಸೆಂಬರ್ 16 ರ ಶನಿವಾರ ಹಮ್ಮಿಕೊಳ್ಳಲಾಗಿದೆ.
ಇದೇ ಸಮಾರಂಭದಲ್ಲಿ ನಮ್ಮ ಸಂತೋಷ್ ಲಾಡ್ ಫೌಂಡೇಶನ್ ವತಿಯಿಂದ ಸಹ 25 ತ್ರಿಚಕ್ರ ವಾಹನಗಳನ್ನು ಸಹ ವಿತರಿಸಲಾಗುತ್ತಿದೆ. ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯ ಅವರು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದು, ಮಾನ್ಯ ಉಪ ಮುಖ್ಯಮಂತ್ರಿಗಳಾದ ಶ್ರೀ ಡಿ ಕೆ ಶಿವಕುಮಾರ್ ಅವರು, ಪರಿಷತ್ ನ ಸಭಾಪತಿ ಶ್ರೀ ಬಸವರಾಜ ಹೊರಟ್ಟಿ ಅವರು ಹಾಗೂ ಹಲವು ಸಚಿವರು, ಜಿಲ್ಲೆಯ ಜನಪ್ರತಿನಿಧಿಗಳು ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸುತ್ತಿದ್ದಾರೆ.
ಈ ಹಿನ್ನೆಲೆಯಲ್ಲಿ ಇಂದು ಕಾರ್ಯಕ್ರಮದ ಪೂರ್ವ ಸಿದ್ಧತೆಗಳನ್ನು ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್ ಲಾಡ್ ಅವರು ಪರಿಶೀಲಿಸಿದರು. ಈ ಸಂದರ್ಭದಲ್ಲಿ ಹುಬ್ಬಳ್ಳಿ ಧಾರವಾಡ ಪೊಲೀಸ್ ಆಯುಕ್ತೆ ರೇಣುಕಾ ಸುಕುಮಾರ್, ಕಾರ್ಮಿಕ ಆಯುಕ್ತ ಡಾ. ಗೋಪಾಲಕೃಷ್ಣ, ಜಿಪಂ ಸಿಇಓ ಸ್ವರೂಪ ಟಿಕೆ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಶನಿವಾರ ಸಂಜೆ 5 ಗಂಟೆಗೆ ಕಾರ್ಯಕ್ರಮ ಆರಂಭಗೊಳ್ಳಲಿದ್ದು, ರಾಜ್ಯದ ವಿವಿಧ ಕಲಾ ತಂಡಗಳಿಂದ ಹಲವು ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ.
‘ತಮ್ಮ ಎಲೆಯಲ್ಲಿ ಆನೆ ಸತ್ತು ಬಿದ್ದಿರುವಾಗ, ನಮ್ಮ ಎಲೆಯಲ್ಲಿ ನೊಣವನ್ನು ಹುಡುಕಿದಂತಿದೆ ಬಿಜೆಪಿಗರ ದುಸ್ಥಿತಿ’
‘ಮುಟ್ಟು ಅನ್ನೋದು ಅಂಗವೈಕಲ್ಯವಲ್ಲ. ಹೆಣ್ಣು ಮಕ್ಕಳಿಗೆ ವೇತನ ಸಹಿತ ರಜೆಯ ಅಗತ್ಯವಿಲ್ಲ’