Dehali News:
ಈ ವರ್ಷದ ದೀಪಾವಳಿಗೆ ರಾಜಧಾನಿ ದೆಹಲಿ ಬೃಹತ್ತರವಾದ ನಿರ್ಧಾರವನ್ನು ಕೈಗೊಂಡಿದೆ. ದೀಪದ ಹಬ್ಬಕ್ಕೆ ಪಟಾಕಿಯನ್ನು ನಿಷೇಧಿಸಿದೆ. ಪಟಾಕಿ ಸಿಡಿಸುವುದಷ್ಟೇ ಅಲ್ಲದೆ ಉತ್ಪಾದನೆ ಸಂಗ್ರಹಣೆ ಮಾರಾಟವನ್ನು ನಿಷೇಧಿಸಲಾಗಿದೆ. ಈ ಬಗ್ಗೆ ದೆಹಲಿ ಪರಿಸರ ಸಚಿವ ಗೋಪಾಲ್ ರೈ ಘೋಷಿಸಿದ್ದಾರೆ.
ಈ ನಿಷೇಧವು ಜನವರಿ 1, 2023 ರವರೆಗೆ ಜಾರಿಯಲ್ಲಿರುತ್ತದೆ ಎಂದು ಸಚಿವರು ಹೇಳಿದ್ದಾರೆ. ಜನರ ಜೀವವನ್ನು ಉಳಿಸಲು ಎಲ್ಲಾ ರೀತಿಯ ಪಟಾಕಿಗಳ ಉತ್ಪಾದನೆ, ಸಂಗ್ರಹಣೆ, ಮಾರಾಟ ಮತ್ತು ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ಸಚಿವರು ಟ್ವೀಟ್ ಮೂಲಕ ತಿಳಿಸಿದ್ದಾರೆ.
ಅಷ್ಟೇ ಅಲ್ಲದೆ ಆನ್‌ಲೈನ್‌ನಲ್ಲಿ ಪಟಾಕಿ ಮಾರಾಟದ ಮೇಲೂ ನಿಷೇಧವಿರುತ್ತದೆ ,ನಿಷೇಧವನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವುದನ್ನು ಖಚಿತಪಡಿಸಿಕೊಳ್ಳಲು ದೆಹಲಿ ಪೊಲೀಸರು, ದೆಹಲಿ ಮಾಲಿನ್ಯ ನಿಯಂತ್ರಣ ಸಮಿತಿ ಮತ್ತು ಕಂದಾಯ ಇಲಾಖೆಯೊಂದಿಗೆ ಚರ್ಚಿಸಿದ ನಂತರ ಕ್ರಿಯಾ ಯೋಜನೆಯನ್ನು ರೂಪಿಸಲಾಗುವುದು ಎಂದು ಸಚಿವ ಗೋಪಾಲ ರೈ ಹೇಳಿದ್ದಾರೆ.
ಕೇಂದ್ರ, ರಾಜ್ಯ ಸರ್ಕಾರದ ಪ್ರಾಯೋಜಿತ ಕಾರ್ಯಕ್ರಮಗಳಲ್ಲಿ ಕನ್ನಡ ಬಳಕೆ ಕಡ್ಡಾಯಗೊಳಿಸಿ ಸರ್ಕಾರ ಆದೇಶ