Thursday, December 12, 2024

Latest Posts

ಮನುಷ್ಯರನ್ನು ಜಾತಿ-ಧರ್ಮದ ಹೆಸರಲ್ಲಿ ವಿಂಗಡಿಸೋದು ದೇವರ ಕೆಲಸ ಅಲ್ಲ: ಎಲ್ಲ ಮಾಡಿದ್ದು ಮನುಸ್ಮೃತಿ: ಸಿಎಂ

- Advertisement -

Political News: ಕೆಪಿಸಿಸಿ ಕಚೇರಿಯಲ್ಲಿ ನಡೆದ ಸಂವಿಧಾನ ಜಾರಿಯ 75ನೇ ವರ್ಷಾಚರಣೆ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಭಾಗವಹಿಸಿದ್ದು, ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು.

ಆರ್.ಎಸ್.ಎಸ್ ನ ಒಬ್ಬರೂ ದೇಶಕ್ಕಾಗಿ ಹೋರಾಡಿಲ್ಲ, ಒಬ್ಬನೂ ದೇಶಕ್ಕಾಗಿ ಪ್ರಾಣಕೊಟ್ಟಿಲ್ಲ. ಮನುಷ್ಯರನ್ನು ಜಾತಿ-ಧರ್ಮದ ಹೆಸರಲ್ಲಿ ವಿಂಗಡಿಸಿದ್ದು ದೇವರು ಅಲ್ಲ: ಎಲ್ಲ ಮಾಡಿದ್ದು ಮನುಸ್ಮೃತಿ. ಆರ್.ಎಸ್.ಎಸ್ ನವರು ಮನುಸ್ಮೃತಿ ಪರವಾಗಿರುವುದರಿಂದಲೇ ನಮ್ಮ ಸಂವಿಧಾನ ವಿರೋಧಿಸುತ್ತಾರೆ. ಬಸವಣ್ಣನವರು 850 ವರ್ಷಗಳ ಹಿಂದೆ ಜಾತಿ ವ್ಯವಸ್ಥೆಯನ್ನು, ಜಾತಿ ಅಸಮಾನತೆಯನ್ನು ವಿರೋಧಿಸಿದ್ದರು. ಆದರೆ ಇವತ್ತಿಗೂ ಜಾತಿ ವ್ಯವಸ್ಥೆ ಹೋಗಿಲ್ಲ. ಬಾಯಲ್ಲಿ ಬಸವಾದಿ ಶರಣರ ವಚನ ಹೇಳೋದು. ಆಮೇಲೆ, ನೀನು ಯಾವ ಜಾತಿ ಅಂತ ಕೇಳ್ತಾರೆ. ಈಗಲೂ ಇವನಾರವ, ಇವನಾರವ ಅಂತಲೇ ಕೇಳುತ್ತಿದ್ದಾರೆ ಹೊರತು, ಇವ ನಮ್ಮವ ಅಂತ ಹೇಳುತ್ತಲೇ ಇಲ್ಲ ಎಂದು ಬಿಜೆಪಿ ವಿರುದ್ಧ ವ್ಯಂಗ್ಯವಾಡಿದ್ದಾರೆ.

ಸಂವಿಧಾನದ ಧ್ಯೇಯೋದ್ದೇಶಗಳು ಎಷ್ಟರ ಮಟ್ಟಿಗೆ ಜಾರಿಯಾಗಿವೆ, ಏಕಿನ್ನೂ ಸಮಾನತೆಯ ಸಮಾಜ ನಿರ್ಮಾಣ ಆಗಿಲ್ಲ ಎನ್ನುವುದನ್ನು ಅವಲೋಕನ ಮಾಡಿಕೊಳ್ಳಬೇಕಿದೆ. ಸಂವಿಧಾನ ಜಾರಿ ಸಭೆಯಲ್ಲಿ ಅಂಬೇಡ್ಕರ್ ಅವರು ಆಡಿದ ಎಚ್ಚರಿಕೆಯ ಮಾತುಗಳನ್ನು ನಾವು ಮರೆಯಬಾರದು. ಪ್ರತಿಯೊಬ್ಬರಿಗೂ ಒಂದು ಓಟು, ಒಂದು ಮೌಲ್ಯ ಸಿಕ್ಕಿದೆ. ಆದರೆ ಎಲ್ಲರಿಗೂ ಆರ್ಥಿಕ ಸ್ವಾತಂತ್ರ್ಯ ಸಿಕ್ಕಿಲ್ಲ. ನಾವು ವೈರುಧ್ಯತೆ ಇರುವ ಸಮಾಜಕ್ಕೆ ಕಾಲಿಡುತ್ತಿದ್ದೇವೆ. ಸಾಮಾಜಿಕ, ಆರ್ಥಿಕ ಅಸಮಾನತೆ ಹೋಗಲಾಡಿಸದಿದ್ದರೆ ರಾಜಕೀಯ ಪ್ರಜಾಪ್ರಭುತ್ವ ಯಶಸ್ವಿ ಆಗಲ್ಲ ಎನ್ನುವ ಎಚ್ಚರಿಕೆಯನ್ನು ಬಾಬಾ ಸಾಹೇಬರು ನೀಡಿದ್ದರು ಎಂದು ಸಿಎಂ ಹೇಳಿದರು.

ಅಂಬೇಡ್ಕರ್ ಅವರಿಗೆ ದೂರದೃಷ್ಟಿ ಇತ್ತು. ಆದ್ದರಿಂದಲೇ, ಸಂವಿಧಾನ ಎಷ್ಟೇ ಶ್ರೇಷ್ಠವಾಗಿದ್ದರೂ ಒಳ್ಳೆಯವರ ಕೈಯಲ್ಲಿ ಇರಬೇಕು. ಕೆಟ್ಟವರ ಕೈಗೆ ಹೋದರೆ ಮೌಲ್ಯಗಳು ಸಾಯುತ್ತವೆ ಎಂದು ಎಚ್ಚರಿಸಿದ್ದರು. ಆರ್.ಎಸ್.ಎಸ್ ಬಿಜೆಪಿಯ ಮಾತೃಸಂಸ್ಥೆ. ಇದರ ಅಧ್ಯಕ್ಷನಾಗಿದ್ದ ಗೋಳ್ವಾಳ್ಕರ್ ಅಂಬೇಡ್ಕರ್ ಅವರ ಸಂವಿಧಾನ ಜಾರಿಯನ್ನು ವಿರೋಧಿಸಿದ್ದರು. ಬ್ರಿಟೀಷರ ಅವಧಿಯಲ್ಲೇ ಹುಟ್ಟಿದ ಆರ್.ಎಸ್.ಎಸ್ ಭಾರತದ ಸ್ವಾತಂತ್ರ್ಯ ಹೋರಾಟದಲ್ಲೇ ಭಾಗವಹಿಸಲಿಲ್ಲ. ಈಗ ಈ ಆರ್.ಎಸ್.ಎಸ್ ದೇಶಭಕ್ತಿಯ ಪಾಠ ಮಾಡುತ್ತಿದೆ. ಆರ್.ಎಸ್.ಎಸ್ ನ ಒಬ್ಬರೂ ದೇಶಕ್ಕಾಗಿ ಹೋರಾಡಿಲ್ಲ, ಒಬ್ಬನೂ ದೇಶಕ್ಕಾಗಿ ಪ್ರಾಣಕೊಟ್ಟಿಲ್ಲ. ಬಿಜೆಪಿ ಮನುಸ್ಮೃತಿಯಲ್ಲಿ ನಂಬಿಕೆ ಇಟ್ಟುಕೊಂಡಿದೆ. ಕಾಂಗ್ರೆಸ್ ಸಂವಿಧಾನದಲ್ಲಿ ನಂಬಿಕೆ ಇಟ್ಟುಕೊಂಡಿದೆ. ಇದೇ ಎರಡೂ ಪಕ್ಷಕ್ಕೂ ಇರುವ ವ್ಯತ್ಯಾಸ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

- Advertisement -

Latest Posts

Don't Miss