Tuesday, October 14, 2025

Latest Posts

ಪ್ರತಿ ಮನೆಗೂ ದೀಪಾವಳಿ – ಮೋದಿಗೆ HDK ಅಭಿನಂದನೆ

- Advertisement -

ಜಿಎಸ್‌ಟಿ ದರ ಇಳಿಕೆ ಬಗ್ಗೆ, ಪ್ರಧಾನಿ ನರೇಂದ್ರ ಮೋದಿ ಟ್ವೀಟ್‌ ಮೂಲಕ ಪ್ರತಿಕ್ರಿಯೆ ನೀಡಿದ್ದಾರೆ. ಸ್ವಾತಂತ್ರ್ಯೋತ್ಸವ ದಿನ ನನ್ನ ಭಾಷಣದ ಮಧ್ಯೆ, ಮುಂದಿನ ಪೀಳಿಗೆಗಾಗಿ ಜಿಎಸ್‌ಟಿಯಲ್ಲಿ ಸುಧಾರಣೆ ತರುವ ಅಗತ್ಯವಿದೆ ಅಂತಾ ಹೇಳಿದ್ದೆ.

ಸಾಮಾನ್ಯ ಜನರಿಗೆ ಜೀವನವನ್ನು ಸುಲಭಗೊಳಿಸುವ ಮತ್ತು ಆರ್ಥಿಕತೆಯನ್ನು ಬಲಪಡಿಸುವ ಗುರಿಯನ್ನು ಹೊಂದಿರುವ, ವಿಶಾಲ ಆಧಾರಿತ GST ದರ ತರ್ಕಬದ್ಧಗೊಳಿಸುವಿಕೆ ಮತ್ತು ಪ್ರಕ್ರಿಯೆಯ ಸುಧಾರಣೆಗಳಿಗಾಗಿ ಕೇಂದ್ರ ಸರ್ಕಾರವು ವಿವರವಾದ ಪ್ರಸ್ತಾವನೆಯನ್ನು ಸಿದ್ಧಪಡಿಸಿತ್ತು.

ಸಾಮಾನ್ಯ ಜನರು, ರೈತರು, MSMEಗಳು, ಮಧ್ಯಮ ವರ್ಗ, ಮಹಿಳೆಯರು ಮತ್ತು ಯುವಕರಿಗೆ ಪ್ರಯೋಜನ ಸಿಗಲಿದೆ. GST ದರ ಕಡಿತ ಮತ್ತು ಸುಧಾರಣೆಗಳ ಕುರಿತು, ಕೇಂದ್ರ ಸರ್ಕಾರ ಸಲ್ಲಿಸಿದ ಪ್ರಸ್ತಾವನೆಗಳಿಗೆ, ಕೇಂದ್ರ ಮತ್ತು ರಾಜ್ಯಗಳನ್ನು ಒಳಗೊಂಡ ಜಿಎಸ್‌ಟಿ ಕೌನ್ಸಿಲ್‌ ಸಾಮೂಹಿಕವಾಗಿ ಒಪ್ಪಿಗೆ ನೀಡಿದೆ ಎಂದು ಹೇಳಲು ಸಂತೋಷವಾಗಿದೆ.

ವ್ಯಾಪಕ ಶ್ರೇಣಿಯ ಸುಧಾರಣೆಗಳು ನಮ್ಮ ನಾಗರಿಕರ ಜೀವನವನ್ನು ಸುಧಾರಿಸುತ್ತದೆ. ವಿಶೇಷವಾಗಿ ಸಣ್ಣ ವ್ಯಾಪಾರಿಗಳು ಮತ್ತು ವ್ಯವಹಾರಗಳಿಗೆ ವ್ಯಾಪಾರ ಮಾಡುವ ಸುಲಭತೆಯನ್ನು ಖಚಿತಪಡಿಸುತ್ತದೆ. ಹೀಗಂತ ಪ್ರಧಾನಮಂತ್ರಿ ನರೇಂದ್ರ ಮೋದಿ ಟ್ವೀಟ್‌ ಮಾಡಿದ್ದಾರೆ.

ಕೇಂದ್ರ ಸಚಿವ ಹೆಚ್‌.ಡಿ. ಕುಮಾರಸ್ವಾಮಿ ಕೂಡ ಈ ಬಗ್ಗೆ ಟ್ವೀಟ್‌ ಮಾಡಿದ್ದು, ಕೇಂದ್ರ ಸರ್ಕಾರ ಸರಕು ಮತ್ತು ಸೇವಾ ತೆರಿಗೆ ವ್ಯವಸ್ಥೆಯಲ್ಲಿ ಕ್ರಾಂತಿಕಾರಿ ಬದಲಾವಣೆಗಳನ್ನು ಜಾರಿಗೆ ತಂದಿದೆ. ರಾಷ್ಟ್ರಕ್ಕೆ ಐತಿಹಾಸಿಕ ದೀಪಾವಳಿ ಉಡುಗೊರೆ ನೀಡಿದೆ ಎಂದು ಬಣ್ಣಿಸಿದ್ದಾರೆ.

ಗೌರವಾನ್ವಿತ ಪ್ರಧಾನಮಂತ್ರಿಗಳಾದ ನರೇಂದ್ರ ಮೋದಿಯವರು, ಅವರ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯು, ಮುಂದಿನ ಪೀಳಿಗೆಯ GST ಸುಧಾರಣೆಯನ್ನು ಅನುಮೋದಿಸಿದೆ. ಇದು ಜನಜೀವನ ಸುಲಭಗೊಳಿಸುವುದು ಮತ್ತು ಆತ್ಮನಿರ್ಭರ ಭಾರತ್ ಅನ್ನು ಬಲಪಡಿಸುವ ಒಂದು ಪರಿವರ್ತನಾತ್ಮಕ ಹೆಜ್ಜೆಯಾಗಿದೆ.

ಹೊಸ ಸುಧಾರಣೆಯೊಂದಿಗೆ GST ಈಗ ಕೇವಲ ಎರಡು ಸ್ಲ್ಯಾಬ್‌ಗಳನ್ನು ಹೊಂದಿದ್ದು, ಅದು 5% ಮತ್ತು 18% ಆಗಿರುತ್ತದೆ. ದೈನಂದಿನ ಜೀವನದ ಅಗತ್ಯ ವಸ್ತುಗಳು, ಆರೋಗ್ಯ ರಕ್ಷಣೆ, ಶಿಕ್ಷಣ, ಕೃಷಿ ಮತ್ತು ವಾಹನಗಳು ಸಹ ಸುಲಭವಾಗಿ ಕೈಗೆಟಕುವಂತೆ ಆಗುತ್ತವೆ. ಜತೆಗೆ, ಉದ್ಯಮಗಳು ಹಾಗೂ MSMEಗಳು ಭಾರೀ ಉತ್ತೇಜನವನ್ನು ಪಡೆಯುತ್ತವೆ.

ವ್ಯವಸ್ಥೆಯನ್ನು ಸರಳಗೊಳಿಸಿ ಮತ್ತಷ್ಟು ಸುಲಭಗೊಳಿಸುವ ಮತ್ತು ಭಾರತದಾದ್ಯಂತ ಪ್ರತೀ ಮನೆಗೂ ಸಂತೋಷ ಉಂಟು ಮಾಡುವ ನೈಜ ಜನಕೇಂದ್ರಿತ ಸುಧಾರಣೆ ಇದಾಗಿದೆ ಅಂತಾ, ಹೆಚ್‌ಡಿಕೆ ಪೋಸ್ಟ್‌ ಮಾಡಿದ್ದಾರೆ.

- Advertisement -

Latest Posts

Don't Miss