ಡಿಕೆ ಶಿವಕುಮಾರ್ ಮುಖ್ಯಮಂತ್ರಿ ಆಗಬೇಕು ಎಂಬುದು ನನ್ನ ಅಭಿಲಾಷೆ ಎಂದು ರಾಮನಗರ ಗ್ರಾಮೀಣ ಕ್ಷೇತ್ರದ ಶಾಸಕ ಇಕ್ಬಾಲ್ ಹುಸೇನ್ ಮತ್ತೆ ಸ್ಪಷ್ಟಪಡಿಸಿದ್ದಾರೆ.
ಕೊಪ್ಪಳದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಮ್ಮ ಸ್ಪಷ್ಟ ಅಭಿಪ್ರಾಯವನ್ನು ನಾನು ಹೈಕಮಾಂಡ್‌ಗೆ ಈಗಾಗಲೇ ತಿಳಿಸಿದ್ದೇನೆ ಮತ್ತು ಅದಕ್ಕೆ ನಾನು ಬದ್ಧನಾಗಿದ್ದೇನೆ. ಕಾಂಗ್ರೆಸ್ ಒಂದು ಶಿಸ್ತಿನ ಪಕ್ಷ, ಈ ವಿಷಯದಲ್ಲಿ ಅಂತಿಮ ತೀರ್ಮಾನವನ್ನು ಹೈಕಮಾಂಡ್ ತೆಗೆದುಕೊಳ್ಳುತ್ತದೆ. ಮಲ್ಲಿಕಾರ್ಜುನ ಖರ್ಗೆ, ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ಅವರೇ ನಿರ್ಧಾರ ಮಾಡುತ್ತಾರೆ ಎಂದರು.
ಅವರು ಮುಂದುವರಿದು, ನಾನು ನನ್ನ ಅನಿಸಿಕೆ, ಆಸೆ ಮತ್ತು ಅಭಿಲಾಷೆಯನ್ನು ಸ್ಪಷ್ಟವಾಗಿ ಹೇಳಿದ್ದೇನೆ. ಹಿಂದೆಲೂ ಡಿಕೆ ಶಿವಕುಮಾರ್ ಸಿಎಂ ಆಗಬೇಕು ಎಂದು ಹೇಳಿದ್ದೆ, ಈಗಲೂ ಅದೇ ನಿಲುವನ್ನು ಮರುಉಚ್ಚರಿಸುತ್ತಿದ್ದೇನೆ ಎಂದು ಹೇಳಿದರು.
ವರದಿ: ರಂಜಿತ ರೇವಣ್ಣ ನಾಟನಹಳ್ಳಿ