Sunday, December 22, 2024

Latest Posts

5 ಕೋಟಿಗೆ ಉಪಕುಲಪತಿ ಹುದ್ದೆ ಮಾರಾಟ : ತನಿಖೆಗೆ ಡಿ.ಕೆ.ಶಿವಕುಮಾರ್ ಒತ್ತಾಯ

- Advertisement -

ಬೆಳಗಾವಿ: ಉಪಕುಲಪತಿ ಹುದ್ದೆ 5 ಕೋಟಿಗೆ ಮಾರಾಟ ಆಗುತ್ತಿದೆ ಎಂಬ ಸಂಸದ ಪ್ರತಾಪ್‌ ಸಿಂಹ ಅವರ ಹೇಳಿಕೆಗೆ ಸಂಬಂಧಿಸಿದಂತೆ ಸೂಕ್ತ ತನಿಖೆ ಆಗಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಒತ್ತಾಯಿಸಿದ್ದಾರೆ. ಉಪಕುಲಪತಿ ಹುದ್ದೆಗೆ ಲಂಚ ನೀಡಬೇಕು ಎಂದು ಹೇಳಿಕೆ ನೀಡಿರುವ ಬಿಜೆಪಿ ನಾಯಕರು ಬಹಳ ಅನುಭವ ಹೊಂದಿರುವ ವಿದ್ಯಾವಂತರು. ಉಪಕುಲಪತಿಗಳ ಹುದ್ದೆಗೆ 5 ಕೋಟಿ ರು. ನೀಡಬೇಕು ಎಂದು ಈ ಸಂಸದರು ಹೇಳಿದ್ದಾರೆ. ಇಡಿ, ಐಟಿ, ಸಿಬಿಐ, ಲೋಕಾಯುಕ್ತ ಸಂಸ್ಥೆಗಳು ಏನು ಮಾಡುತ್ತಿವೆ. ಈ ಸಂದರ್ಭದಲ್ಲಿ ರಾಜ್ಯಪಾಲರು ಹಾಗೂ ಅವರ ಕಚೇರಿ ಮೇಲೆ ಆರೋಪ ಮಾಡಲು ಆಗುವುದಿಲ್ಲ. ಉಪಕುಲಪತಿಗಳ ಹೆಸರನ್ನು ಸರ್ಕಾರ ಶಿಫಾರಸ್ಸು ಮಾಡಿದರೆ ರಾಜ್ಯಪಾಲರು ನೇಮಕ ಮಾಡುತ್ತಾರೆ ಎಂದು ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.

ಚರ್ಮಗಂಟು ರೋಗ ನಿಯಂತ್ರಣಕ್ಕೆ 37.5 ಲಕ್ಷ ಲಸಿಕೆಗಳನ್ನು ಖರೀದಿಸಿ ಜಿಲ್ಲೆಗಳಿಗೆ ವಿತರಿಸಲು ಕ್ರಮವಹಿಸಲಾಗಿದೆ : ಸಚಿವ ಪ್ರಭು ಚವ್ಹಾಣ್

ಸರ್ಕಾರದಲ್ಲಿ ಯಾರಿಗೆ ಈ ಹಣ ತಲುಪಿದೆ? ಮಂತ್ರಿಗಳಿಗೆ ತಲುಪಿದೆಯೋ? ಅಧಿಕಾರಿಗಳಿಗೆ ತಲುಪಿದೆಯೋ? ಎಂಬುದು ಚರ್ಚೆ ಆಗಬೇಕು. ಅದಕ್ಕಾಗಿ ವಿಧಾನ ಪರಿಷತ್ ನಲ್ಲಿ ಈ ವಿಚಾರ ಪ್ರಸ್ತಾಪ ಮಾಡಲಾಗಿದೆ. ಕೂಡಲೇ ಲೋಕಾಯುಕ್ತ, ಇಡಿ ಈ ವಿಚಾರದಲ್ಲಿ ಮಧ್ಯಪ್ರವೇಶ ಮಾಡಬೇಕು. ನಮ್ಮ ಮೇಲೆ ದಾಳಿ ಮಾಡಿ ತನಿಖೆ ಮಾಡುವವರು ಇವರ ಹೇಳಿಕೆ ವಿಚಾರದಲ್ಲೂ ತನಿಖೆ ಮಾಡಬೇಕು. ಸಿಬಿಐನವರು ನನ್ನ ಜತೆ ವ್ಯವಹಾರ ಇಟ್ಟುಕೊಂಡವರಿಗೆಲ್ಲ ನೊಟೀಸ್ ನೀಡಿ ವಿಚಾರಣೆ ಮಾಡಿದ್ದಾರೆ. ಹೀಗಾಗಿ ಈ ವಿಚಾರದಲ್ಲಿ ಚರ್ಚೆ ಆಗಬೇಕು ಎಂದು ಕಾಂಗ್ರೆಸ್ ಆಗ್ರಹಿಸುತ್ತದೆ. ಶಿಕ್ಷಣ ವ್ಯವಸ್ಥೆಯ ಹುದ್ದೆ ಮಾರಾಟ ಭ್ರಷ್ಟಾಚಾರದ ವಿಚಾರವಾಗಿದ್ದು, ಬಿಜೆಪಿ ಸಂಸದರು ಹೇಳಿರುವ ವಿಚಾರವನ್ನು ನಾವು ಚರ್ಚೆ ಮಾಡದಿದ್ದರೆ ನಮ್ಮ ಕರ್ತವ್ಯದಲ್ಲಿ ಲೋಪ ಆಗಲಿದೆ. ಹೀಗಾಗಿ ಈ ವಿಚಾರ ತನಿಖೆ ಆಗಬೇಕು, ಜನರಿಗೆ ವಿಚಾರ ತಿಳಿಯಬೇಕು ಎಂದು ಒತ್ತಾಯಿಸಿದರು.

ಶಾಮನೂರು ಶಿವಶಂಕರಪ್ಪ ಪುತ್ರ ಮತ್ತು ಮಾಜಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ ಅವರ ರೈಸ್ ಮಿಲ್ ನಲ್ಲಿ 29 ವನ್ಯಜೀವಿಗಳು ಪತ್ತೆ

ಉಕ್ರೇನ್ ಜೀವಂತವಾಗಿದೆ ಮತ್ತು ಹೋರಾಡುತ್ತಿದೆ, ರಷ್ಯಾಕ್ಕೆ ಎಂದಿಗೂ ಶರಣಾಗುವುದಿಲ್ಲ: ವೊಲೊಡಿಮಿರ್ ಝೆಲೆನ್ಸ್ಕಿ

- Advertisement -

Latest Posts

Don't Miss