ಕರ್ನಾಟಕ ಟಿವಿ : ಕೆಪಿಸಿಸಿ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸುವ ‘ಪ್ರತಿಜ್ಞೆ’ ಕಾರ್ಯಕ್ರಮಕ್ಕೆ ಜೂನ್ 14ರಂದು ಅವಕಾಶ ನೀಡಬೇಕು ಎಂದು ಸರ್ಕಾರಕ್ಕೆ ಮನವಿ ಮಾಡಿರುವುದಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ನಾನು ಕೆಪಿಸಿಸಿ ಅಧ್ಯಕ್ಷನಾಗಿ ಅಧಿಕಾರ ಸ್ವೀಕರಿಸುವ ‘ಪ್ರತಿಜ್ಞೆ’ ಕಾರ್ಯಕ್ರಮವನ್ನು ಜೂನ್ 14ರಂದು ನಡೆಸಲು ಅನುಮತಿ ನೀಡಬೇಕು ಎಂದು ಮುಖ್ಯ ಕಾರ್ಯದರ್ಶಿ ಹಾಗೂ ಪೊಲೀಸ್ ಆಯುಕ್ತರಿಗೆ ಮನವಿ ಮಾಡಿದ್ದೇನೆ. ಜೂನ್ 8ರ ನಂತರ ಲಾಕ್ ಡೌನ್ ಸಡಿಲ ಮಾಡುವ ನಿರೀಕ್ಷೆ ಇದ್ದು, ನನ್ನ ಕಾರ್ಯಕ್ರಮಕ್ಕೆ ಅನುಮತಿ ನೀಡುವ ವಿಶ್ವಾಸವಿದೆ. ಹೀಗಾಗಿ 14ರಂದು ಕಾರ್ಯಕ್ರಮ ಮಾಡಲು ಸಿದ್ಧತೆ ಮಾಡಿಕೊಳ್ಳುತ್ತಿದ್ದೇನೆ. ಅವರು ನನಗೆ ಈವರೆಗೆ ಅನುಮತಿ ನಿರಾಕರಿಸಿಲ್ಲ. ಒಂದುವೇಳೆ ನಿರಾಕರಿಸಿದರೆ ಆಮೇಲೆ ಅವರ ವರ್ಚುವಲ್ ಕಾರ್ಯಕ್ರಮದ ಬಗ್ಗೆ ಮಾತನಾಡುತ್ತೇನೆ ಅಂಡಿ ಡಿಕೆ ಶಿವಕುಮಾರ್ ಹೇಳಿದ್ರು.

ಶಿವಕುಮಾರ್ ಬೆಸಗರಹಳ್ಳಿ, ಕರ್ನಾಟಕ ಟಿವಿ