www.karnatakatv.net : ಮೈಶುಗರ್ ಕಾರ್ಖಾನೆಯನ್ನು ಬಿಜೆಪಿ ನಾಯಕ ಹಾಗೂ ಉದ್ಯಮಿ ಮುರುಗೇಶ್ ನಿರಾಣಿ ಅವರಿಗೆ ಮಾರುವ ವಿಚಾರವಾಗಿ ಹಳೇ ಮೈಸೂರು ಭಾಗದ ನಾಯಕರಾಗಿ ನಿಮ್ಮ ಅಭಿಪ್ರಾಯ ಏನು ಎಂದು ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಶಿವಕುಮಾರ್, ‘ನಾನು ಅಖಂಡ ಕರ್ನಾಟಕದ ನಾಯಕ. ಕೇವಲ ಹಳೇ ಮೈಸೂರು ಭಾಗದ ನಾಯಕ ಅಲ್ಲ. ಕಾರ್ಖಾನೆಯನ್ನು ಅವರದೇ ಪಕ್ಷದ ನಾಯಕರಿಗೆ ನೀಡುವ ಬಗ್ಗೆ ನನಗೆ ಮಾಹಿತಿ ಇಲ್ಲ. ಮಂಡ್ಯ ಜನರಿಗೂ ಮೈಶುಗರ್ ಕಾರ್ಖಾನೆಗೂ ಭಾವನಾತ್ಮಕ ಸಂಬಂಧವಿದೆ. ಅದು ವ್ಯಾಪಾರ ವಸ್ತುವಾಗಲು ಸಾಧ್ಯವಿಲ್ಲ. ಖಾಸಗಿಯವರು ಕಾರ್ಖಾನೆ ನಡೆಸಬಹುದು ಸರ್ಕಾರ ನಡೆಸಲು ಸಾಧ್ಯವಿಲ್ಲವೇ? ಏನೇನು ನ್ಯೂನ್ಯತೆ ಇದೆಯೋ ಅದನ್ನು ಸರಿಪಡಿಸಿಕೊಂಡರೆ ಸಾಕು. ಕಾರ್ಖಾನೆಗೆ ದೊಡ್ಡ ಪ್ರಮಾಣದ ಆಸ್ತಿ ಇದೆ. ಸರ್ಕಾರಕ್ಕೆ ಕಾರ್ಖಾನೆ ನಡೆಸಲು ಆಗದಿದ್ದರೆ ಹೇಳಲಿ, ಅದನ್ನು ಹೇಗೆ ನಡೆಸುವುದು ಅಂತಾ ನಾವು ತೋರಿಸುತ್ತೇವೆ ಅಂತ ಡಿಕೆ ಶಿವಕುಮಾರ್ ಹೇಳಿದ್ರು.
5 ಸಿದ್ದರಾಮಯ್ಯ ಇದ್ದಾಗ, ದೋಸ್ತಿ ಸರ್ಕಾರ ಇದ್ದಾಗ – ಡಿಕೆಶಿ ಏನ್ ಮಾಡ್ತಿದ್ರು..?
ಇನ್ನು ಡಿಕೆ ಶಿವಕುಮಾರ್ ನಾವು ಮೈಷುಗರ್ ಹೇಗೆ ನಡೆಸಬೇಕು ಅಂತ ನಾವು ತೋರಿಸ್ತೀವಿ ಅನ್ನುವ ಮಾತಿಗೆ ಸೋಷಿಯಲ್ ಮೀಡಿಯಾದಲ್ಲಿ ಡಿಕೆಶಿ ಕಾಲೆಳೆದಿದ್ದಾರೆ. 5 ವರ್ಷ ಸಿದ್ದರಾಮಯ್ಯ ಸಿಎಂ ಆಗಿದ್ದಾರೆ. ದೋಸ್ತಿ ಸರ್ಕಾರದಲ್ಲಿ ಭಾಗಿಯಾಗಿದ್ದಾಗ ಡಿಕೆ ಶಿವಕುಮಾರ್ ಮೈಷುಗರ್ ನಡೆಸಿ ತೋರಿಸ್ಬೇಕಿತ್ತು. ಈಗ ರಾಜಕಾರಣ ಮಾಡೋದಲ್ಲ. ರೈತರಿಗೆ ಕಬ್ಬ ಕಟಾವಾಗಬೇಕು, ಸರಿಯಾದ ಬೆಲೆ, ಸರಿಯಾದ ವೇಳೆಗೆ ಹಣ ಸಿಗಬೇಕು ಅಂತ ಡಿಕೆಶಿ ಹೇಳಿಕೆಯನ್ನ ಟೀಕಿಸಿದ್ದಾರೆ..
ನ್ಯೂಸ್ ಡೆಸ್ಕ್, ಕರ್ನಾಟಕ ಟಿವಿ