ಆನಂದ್ ಸಿಂಗ್ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎಂಬ ಸುದ್ದಿ ಮಾಧ್ಯಮಗಳಲ್ಲಿ ನೋಡಿ ನನಗೆ ದೊಡ್ಡ ಶಾಕ್ ಆಗಿದೆ . ಇದನ್ನು ನಂಬಲು ಸಾಧ್ಯವಾಗುತ್ತಿಲ್ಲ ಎಂದು ಜಲಸಂಪನ್ಮೂಲ, ಕನ್ನಡ ಮತ್ತು ಸಂಸ್ಕೃತಿ ಸಚಿವ ಡಿಕೆ ಶಿವಕುಮಾರ್ ತಿಳಿಸಿದ್ದಾರೆ.
ಹೊಸಪೇಟೆ ಶಾಸಕ ಆನಂದ್ ಸಿಂಗ್ ರಾಜೀನಾಮೆ ನೀಡಿರುವ ವಿಚಾರವಾಗಿ ಬೆಂಗಳೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿರುವ ಬಳ್ಳಾರಿ ಉಸ್ತುವಾರಿ ಸಚಿವರೂ ಆಗಿರುವ ಡಿಕೆ ಶಿವಕುಮಾರ್, ‘ಆನಂದ್ ಸಿಂಗ್ ರಾಜೀನಾಮೆ ಕೊಟ್ಟಿರುವ ಬಗ್ಗೆ ಮಾಧ್ಯಮಗಳಲ್ಲಿ ಸುದ್ದಿ ನೋಡಿದೆ. ನಂಬಲು ಸಾಧ್ಯವಾಗುತ್ತಿಲ್ಲ. ಅವರು ನಮ್ಮ ಪಕ್ಷ ಬಿಟ್ಟು ಹೋಗುವುದಿಲ್ಲ ಅಂತಾ ಹೇಳಿದ್ದರು. ಆದರೆ ವೈಯಕ್ತಿಕವಾಗಿ ಏನೇನು ಸಮಸ್ಯೆ ಇದ್ದವೋ ಗೊತ್ತಿಲ್ಲ. ಈ ಸಮಸ್ಯೆಗಳ ಬಗ್ಗೆ ಹೇಳುತ್ತಿಲ್ಲ.ಅವರನ್ನು ಸಂಪರ್ಕಿಸಲು ಪ್ರಯತ್ನಿಸುತ್ತಿದ್ದೇನೆ. ಆದರೆ ಸಿಗುತ್ತಿಲ್ಲ. ಇತ್ತೀಚಿನ ದಿನಗಳಲ್ಲಿ ನಾನು ಅವರನ್ನು ಭೇಟಿಯಾಗಿಲ್ಲ. ಇನ್ನು ನನಗೆ ಆರೋಗ್ಯ ಸಮಸ್ಯೆ ಇದ್ದಿದ್ದರಿಂದ ಚಿಕಿತ್ಸೆಗೆ ಆಸ್ಪತ್ರೆಯಲ್ಲಿದ್ದೆ. ರಾಜೀನಾಮೆ ವಿಚಾರ ನನಗೆ ಶಾಕ್. ಈಗಲೂ ಇದನ್ನು ನಂಬಲಿಕ್ಕೆ ಸಾಧ್ಯವಾಗುತ್ತಿಲ್ಲ. ಅವರೊಂದಿಗೆ ಮಾತನಾಡಲು ಸಿಗುತ್ತಿಲ್ಲ. ಬೇರೆಯವರೊಂದಿಗೆ ಮಾತನಾಡುತ್ತಿದ್ದೇನೆ’ ಅಂತ ಹೇಳಿದ್ರು.
ಜೆಡಿಎಸ್ ಪಾದಯಾತ್ರೆ ಜವಾಬ್ದಾರಿ ನಿಖಿಲ್ ಹೆಗಲಿಗೆ…!ಮಿಸ್ ಮಾಡದೇ ಈ ವಿಡಿಯೋ ನೋಡಿ