Monday, April 14, 2025

Latest Posts

ಹೆಚ್ಚುವರಿ ಡಿಸಿಎಂ ಬಗ್ಗೆ ಮಾತನಾಡಿದ್ರೆ ನೋಟಿಸ್, ಬಾಯಿಗೆ ಬೀಗ ಹಾಕೊಂಡಿರಿ: ಡಿಕೆಶಿ

- Advertisement -

ಬೆಂಗಳೂರು: ಹೆಚ್ಚುವರಿ ಡಿಸಿಎಂ ಹುದ್ದೆ ಸೃಷ್ಟಿಸುವ ವಿಚಾರವಾಗಿ ಕಾಂಗ್ರೆಸ್ ನಾಯಕರು, ಸಚಿವರು, ಶಾಸಕರು ದಿನಕ್ಕೊಂದು ಹೇಳಿಕೆ ನೀಡುತ್ತಿದ್ದಾರೆ. ಇದ್ರ ಬೆನ್ನಲ್ಲೇ ಕ್ರಮಕ್ಕೆ ಮುಂದಾಗಿರುವ ಕೆಪಿಸಿಸಿ ಅಧ್ಯಕ್ಷ, ಡಿಸಿಎಂ ಡಿ.ಕೆ. ಶಿವಕುಮಾರ್​ಎಚ್ಚರಿಕೆ ಸಂದೇಶ ರವಾನಿಸಿದ್ದಾರೆ. ಹೆಚ್ಚುವರಿ ಡಿಸಿಎಂ ಬಗ್ಗೆ ಯಾರೂ ಮಾತನಾಡುವಂತಿಲ್ಲ. ಒಂದು ವೇಳೆ ಮಾತನಾಡಿದರೆ ಅಂಥವರಿಗೆ ನೋಟಿಸ್ ನೀಡಲಾಗುವುದು. ಬಾಯಿಗೆ ಬೀಗ ಹಾಕೊಂಡು ತೆಪ್ಪಗೆ ಇರಿ ಎಂದು ಅವರು ಖಡಕ್ ವಾರ್ನಿಂಗ್ ನೀಡಿದ್ದಾರೆ.

ಬೆಂಗಳೂರಿನ ಸದಾಶಿವನಗರದ ನಿವಾಸದ ಬಳಿ ಮಾತನಾಡಿದ ಅವರು, ಯಾವ ಡಿಸಿಎಂ ಚರ್ಚೆಯೂ ಇಲ್ಲ, ಸಿಎಂ ಪ್ರಶ್ನೆಯೂ ಇಲ್ಲ. ಯಾರ ಶಿಫಾರಸು ಸಹ ಅವಶ್ಯಕತೆ ಇಲ್ಲ. ನಾನು, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಿಎಂ ಸಿದ್ದರಾಮಯ್ಯ ಒಂದು ತೀರ್ಮಾನಕ್ಕೆ ಬಂದಿದ್ದೇವೆ. ಯಾವ ಶಾಸಕರು ಕೂಡ ಮಾತನಾಡುವ ಅವಶ್ಯಕತೆ ಇಲ್ಲ. ಒಂದು ವೇಳೆ ಮಾತನಾಡಿದರೆ, ಎಐಸಿಸಿ ಹಾಗೂ ನಾನು ವಿಧಿಯಿಲ್ಲದೇ ನೊಟೀಸ್ ನೀಡಬೇಕಾಗುತ್ತದೆ. ಪಕ್ಷದ ಶಿಸ್ತು ಕಾಪಾಡಲು ಅನಿವಾರ್ಯವಾಗಿ ನೋಟಿಸ್​ ನೀಡುತ್ತೇವೆ ಎಂದು ಹೇಳಿದ್ದಾರೆ..

ಪಕ್ಷ ಕಟ್ಟಲು ಬಹಳ ಕಷ್ಟಪಟ್ಟಿದ್ದೇವೆ. ಪಕ್ಷವನ್ನು ಅಧಿಕಾರಕ್ಕೆ ತರಲು ಎಷ್ಟು ಕಷ್ಟಪಟ್ಟಿದ್ದೇವೆ ಎಂಬುದು ನಮಗೇ ಗೊತ್ತು. ಪಕ್ಷದ ಹಿತದೃಷ್ಟಿಯಿಂದ ಬಾಯಿಗೆ ಬೀಗ ಹಾಕಿಕೊಂಡಿದ್ದರೆ ಒಳ್ಳೆಯದು. ಯಾವ ಸ್ವಾಮೀಜಿಗಳೂ ಮಾತಾಡಿಲ್ಲ. ಎಲ್ಲರಿಗೂ ಕೈ ಮುಗಿಯುತ್ತೇನೆ. ನಮ್ಮ ರಾಜಕಾರಣದ ಸುದ್ದಿಗೆ ನೀವು ಬರಬೇಡಿ. ಸ್ವಾಮೀಜಿ ನನ್ನ ಮೇಲಿನ ಅಭಿಮಾನದಿಂದ ಮಾತಾಡಿದ್ದಾರೆ ಎಂದು ಅವರು ಹೇಳಿದ್ದಾರೆ.

ಡಿಕೆ ಶಿವಕುಮಾರ್​​​ಗೆ ಮುಖ್ಯಮಂತ್ರಿ ಸ್ಥಾನ ಬಿಟ್ಟು ಕೊಡಬೇಕೆಂದು ಸಿದ್ದರಾಮಯ್ಯನವರನ್ನು ಒಕ್ಕಲಿಗ ಸ್ವಾಮೀಜಿ ಆಗ್ರಹಿಸಿದ್ದು ಬಹಳಷ್ಟು ಚರ್ಚೆಗೆ ಗ್ರಾಸವಾಗಿತ್ತು. ಮತ್ತೊಂದೆಡೆ, ಆಡಳಿತ ಪಕ್ಷದ ಸಚಿವರು ಮತ್ತು ಶಾಸಕರು ಹೇಳಿಕೆಗಳನ್ನು ಬಿಜೆಪಿ ಪ್ರಮುಖ ಅಸ್ತ್ರ ಮಾಡಿಕೊಂಡಿತ್ತು. .

- Advertisement -

Latest Posts

Don't Miss