State News : ಡಿಸಿಎಂ ಡಿಕೆ ಶಿವಕುಮಾರ್ ಗೆ ಬಿಗ್ ರಿಲೀಫ್ ಸಿಕ್ಕಿದೆ. ಹೈಕೋರ್ಟ್ ನೀಡಿರುವ ಮಧ್ಯಂತರ ತಡೆಯನ್ನು ರದ್ದು ಮಾಡಲು ಸುಪ್ರೀಂ ಕೋರ್ಟ್ ನಿರಾಕರಣೆ ಮಾಡಿದೆ. ಡಿಕೆ ಶಿವಕುಮಾರ್ ವಿರುದ್ಧದ ತನಿಖೆಗೆ ತಡೆಯಾಜ್ಞೆ ತೆರವು ಕೋರಿ ಸಿಬಿಐ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ವಜಾಗೊಳಿಸಿದೆ.
ಡಿಕೆ ಶಿವಕುಮಾರ್ ವಿರುದ್ಧದ ಆದಾಯಕ್ಕೂ ಮೀರಿ ಆಸ್ತಿಗಳಿಕೆ ಪ್ರಕರಣದ ತನಿಖೆಗೆ ಕರ್ನಾಟಕ ಹೈಕೋರ್ಟ್ ತಡೆಯಾಜ್ಞೆ ನೀಡಿತ್ತು. ಇದನ್ನು ಪ್ರಶ್ನಿಸಿ ಸಿಬಿಐ ಸುಪ್ರೀಂಕೋರ್ಟ್ನಲ್ಲಿ ಮೇಲ್ಮನವಿ ಸಲ್ಲಿತ್ತು. ಆದ್ರೆ, ಸುಪ್ರೀಂಕೋರ್ಟ್ ಇಂದು ಅಂದರೆ ಜುಲೈ 31ರಂದು ಸಿಬಿಐ ಅರ್ಜಿಯನ್ನು ವಜಾಗೊಳಿಸಿ ಆದೇಶ ಹೊರಡಿಸಿದೆ ಎನ್ನಲಾಗಿದೆ.
ಈ ಬಗ್ಗೆ ಮಾಧ್ಯಮದ ಮುಂದೆ ಮಾತನಾಡಿದ ಡಿಸಿಎಂ ಡಿಕೆಶಿ ಅದರ ಬಗ್ಗೆ ನನಗೆ ಗೊತ್ತಿಲ್ಲನನಗೆ ಯಾರೂ ಮಾಹಿತಿ ನೀಡಿಲ್ಲ, ಏನೇ ಸುಳ್ಳು ಕೇಸು ಹಾಕಿದರೂ ನ್ಯಾಯಾಲಯದಲ್ಲಿ ನ್ಯಾಯ ಸಿಗೋ ಭರವಸೆ ಇದೆ. ನ್ಯಾಯಾಲಯದ ಮೇಲೆ ನಂಬಿಕೆ ಇದೆ ಎಂದು ಹೇಳಿದ್ದಾರೆ.
DK Shivakumar : ಡಿಸಿಎಂ ಡಿಕೆಶಿಗೆ ಬಿಗ್ ರಿಲೀಫ್ : ಸಿಬಿಐ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

