ರಾಜ್ಯದ ಸಿಎಂ ಅವ್ರು ಆಗ್ತಾರೆ. ಇವ್ರು ಆಗ್ತಾರೆ ಅಂತ ಸಿಎಂ ಆಗುವ ಬಗ್ಗೆ ರಾಜ್ಯ ರಾಜಕೀಯ ವಲಯದಲ್ಲಿ ಭಾರಿ ಚರ್ಚೆ ಆಗ್ತಾಯಿತ್ತು. ಸಿಎಂ ರೇಸ್ ನಲ್ಲಿ ಸಿದ್ದರಾಮಯ್ಯ, ಡಿಕೆಶಿ, ಸಚಿವ ಸತೀಶ್ ಜಾರಕಿಹೊಳಿ ಹೆಸರುಗಳು ಕೇಳಿಬರ್ತಾಯಿತ್ತು. ಆದ್ರೆ ಈಗ ಕರ್ನಾಟಕ ರಾಜಕೀಯದಲ್ಲಿ ಪ್ರಮುಖ ಬೆಳವಣಿಗೆಯೊಂದು ಸಾಧ್ಯವಿದೆ ಎಂದು ಮಾಜಿ ಸಂಸದ ಹಾಗೂ ರಾಜ್ಯ ಕಾಂಗ್ರೆಸ್ ಮಾಧ್ಯಮ ವಕ್ತಾರ L.R. ಶಿವರಾಮೇಗೌಡ ಭವಿಷ್ಯ ನುಡಿದಿದ್ದಾರೆ.
ಮುಂಬರುವ ನವೆಂಬರ್ ತಿಂಗಳಲ್ಲಿ ಡಿ.ಕೆ. ಶಿವಕುಮಾರ್ ಅವರು ಮುಖ್ಯಮಂತ್ರಿ ಆಗುವುದು ಗ್ಯಾರಂಟಿ ಎಂದು ಸ್ಪಷ್ಟವಾಗಿ ಹೇಳಿದ್ದಾರೆ. ಹೈಕಮಾಂಡ್ ತೀರ್ಮಾನವೇ ಅಂತಿಮ ಎಂದಿದ್ದಾರೆ. L.R. ಶಿವರಾಮೇಗೌಡ ಅವರು ಮಂಡ್ಯದ ನಾಗಮಂಗಲ ಪಟ್ಟಣದ ತಮ್ಮ ನಿವಾಸದ ಕಚೇರಿಯಲ್ಲಿ ಮಂಗಳವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ್ದಾರೆ. ಕಾಂಗ್ರೆಸ್ ಹೈಕಮಾಂಡ್ ನಿಂದ ಈಗಾಗಲೇ ಅಧಿಕಾರ ಹಂಚಿಕೆ ಕುರಿತು ಸೂತ್ರ ನಿಗದಿಯಾಗಿದೆ.
ಹಾಗೆಯೆ ನವೆಂಬರ್ ಅಥವಾ ಡಿಸೆಂಬರ್ ತಿಂಗಳಲ್ಲಿ ಡಿ.ಕೆ. ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಳ್ಳುವುದು ಖಚಿತ ಪಕ್ಷವನ್ನು ಅಧಿಕಾರಕ್ಕೆ ತರೋಕೆ ಡಿ.ಕೆ. ಶಿವಕುಮಾರ್ ಅವರು ಕಾಂಗ್ರೆಸ್ ಅಧ್ಯಕ್ಷರಾಗಿ ಅಪಾರ ಶ್ರಮ ಪಟ್ಟಿದ್ದಾರೆ. ಅವರ ಮೇಲೆ ಪಕ್ಷದ ಒಳಗೂ ಹಾಗು ಜನರಲ್ಲಿ ಅಪಾರ ವಿಶ್ವಾಸವಿದೆ. ರಾಜ್ಯದ ಜನತೆಯ ಆಶಯ ಕೂಡ ಡಿ.ಕೆ. ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಬೇಕು ಅನ್ನೊದಾಗಿದೆ.ಈ ನಿರ್ಧಾರವನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ. ಏಕೆಂದರೆ, ಹೈಕಮಾಂಡ್ ತೀರ್ಮಾನವೇ ಕೊನೆ. ನಾವೆಲ್ಲರೂ ಅದನ್ನು ಗೌರವಿಸಬೇಕಾಗುತ್ತದೆ ಎಂದು ಶಿವರಾಮೇಗೌಡ ಪುನರುಚ್ಚರಿಸಿದರು.
ರಾಜ್ಯ ಸರ್ಕಾರ ಕೈಗೊಂಡಿರುವ ಕಾವೇರಿ ಆರತಿ ಕಾರ್ಯಕ್ರಮದ ಬಗ್ಗೆ ಕೂಡ ಶಿವರಾಮೇಗೌಡ ಪ್ರತಿಕ್ರಿಯಿಸಿರು. ಇದು ಒಳ್ಳೆಯ ಕಾರ್ಯ. ಇಂತಹ ಧಾರ್ಮಿಕ ಸಂಸ್ಕೃತಿಕ ಆಚರಣೆಗಳ ಬಗ್ಗೆ ಪರ–ವಿರೋಧಗಳು ಸಹಜ. ಆದರೆ ರೈತರಿಗೆ ಯಾವುದೇ ತೊಂದರೆ ಆಗುವ ಪ್ರಶ್ನೆಯೇ ಇಲ್ಲ ಎಂದಿದ್ದಾರೆ.
ವರದಿ : ಲಾವಣ್ಯ ಅನಿಗೋಳ