ಹೈಕಮಾಂಡ್ ಹೇಳಿದವ್ರಿಗೆ ಉಳಿದ ಮತ – ಡಿಕೆಶಿ

https://www.youtube.com/watch?v=heeTOl08S0Q&t=252s

ಕರ್ನಾಟಕ ಟಿವಿ : ರಾಜ್ಯಸಭೆ ಚುನಾವಣೆಗೆ ನಮ್ಮ ಪಕ್ಷದಿಂದ ಕೇವಲ ಒಬ್ಬ ಅಭ್ಯರ್ಥಿ ಕಣಕ್ಕಿಳಿಯುತ್ತಿದ್ದಾರೆ. ಮಲ್ಲಿಕಾರ್ಜುನ ಖರ್ಗೆ ಅವರು ಜೂನ್8 ರಂದು ನಾಮಪತ್ರ ಸಲ್ಲಿಕೆ ಮಾಡಲಿದ್ದು, ಯಾವುದೇ ಕಾರ್ಯಕರ್ತರು ಈ ವೇಳೆ ಆಗಮಿಸಬಾರದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಕಾರ್ಯಕರ್ತರಿಗೆ ಮನವಿ ಮಾಡಿದ್ರು.  ಅವರು ಗೆದ್ದ ಬಳಿಕ ಅವರ ಮನೆಗೆ ಹೋಗಿ ಅಭಿನಂದನೆ ಸಲ್ಲಿಸಿ. ನಾಮಪತ್ರ ಸಲ್ಲಿಕೆ ವೇಳೆ ಹೆಚ್ಚು ಜನ ಜಮಾಯಿಸಿ ಸಾಮಾಜಿಕ ಅಂತರ ಕಾಪಾಡಲಿಲ್ಲ ಅಂತಾ ಆರೋಪ ಬರುವಂತೆ ಮಾಡಿ ಅವರ ಹಿರಿತನಕ್ಕೆ ಅಗೌರವ ತರುವುದು ಬೇಡ. ದೂರದಿಂದಲೇ ನಿಮ್ಮ ಪ್ರೀತಿ, ಅಭಿಮಾನ ತೋರಿಸಿ ಎಂದು ಮನವಿ ಮಾಡುತ್ತೇನೆ ಅಂತ ಡಿಕೆಶಿ ಹೇಳಿದ್ರು. ಮಲ್ಲಿಕಾರ್ಜುನ ಖರ್ಗೆ ಅವರನ್ನು ಹೊರತುಪಡಿಸಿ ಉಳಿದ ಮತಗಳನ್ನು ಯಾರಿಗೆ ಹಾಕಬೇಕು ಎಂಬುದನ್ನು ನಮ್ಮ ಹೈಕಮಾಂಡ್ ನಾಯಕರು ಸೂಚನೆ ನೀಡಲಿದ್ದು, ಅದನ್ನು ನಾವು ಪಾಲಿಸುತ್ತೇವೆ ದೇವೇಗೌಡರಿಗೆ ಬೆಂಬಲ ಕೊಡ್ತೀವಿ ಅನ್ನೋದನ್ನಪರೋಕ್ಷವಾಗಿ ಹೇಳಿದ್ರು.

ಶಿವಕುಮಾರ್ ಬೆಸಗರಹಳ್ಳಿ, ಕರ್ನಾಟಕ ಟಿವಿ

About The Author