Hassan News: ಹಾಸನ : ಹಾಸನದಲ್ಲಿ ಬಿಜೆಪಿ ರಾಜ್ಯ ಚುನಾವಣೆ ಉಸ್ತುವಾರಿ ರಾಧಮೋಹನ್‌ದಾಸ್ ಅರ್ಗವಾಲ್ ಮಾತನಾಡಿದ್ದು, ಕರ್ನಾಟಕ ರಾಜ್ಯದಲ್ಲಿ 28 ಕ್ಕೆ 28 ಸೀಟ್ ಗೆದ್ದಾಗಿದೆ. 25 ಸೀಟ್ ಬಿಜೆಪಿ ಹಾಗೂ 3 ಸೀಟ್ ಜೆಡಿಎಸ್ ಕೊಟ್ಟಿದ್ದೇವೆ. ಕಾಂಗ್ರೆಸ್‌ಗೆ ಯಾವುದೇ ಉಳಿದಿಲ್ಲ. ಕಾಂಗ್ರೆಸ್‌ನವರು ಒಂದೇ ಒಂದು ಸೀಟ್ ಗೆಲ್ಲಲ್ಲ. ನಾನು ಕರ್ನಾಟಕದ ಎಲ್ಲಾ ಕ್ಷೇತ್ರಗಳಲ್ಲಿ ಒಂದು ತಿಂಗಳಿನಿಂದ ಪ್ರವಾಸ ನಡೆಸುತ್ತಿದ್ದೇನೆ. ಹಾಸನಕ್ಕೂ ಅದೇ ಉದ್ದೇಶದಿಂದ ವಾಸ್ತವ ಸ್ಥಿತಿ ತಿಳಿಯಲು ಬಂದಿದ್ದೇನೆ. ಎಲ್ಲಾ ಕಡೆ ಮೋದಿಯವರಿಗೆ ಅಭೂತಪೂರ್ವ ಬೆಂಬಲ ದೊರೆಕಿದೆ ಎಂದಿದ್ದಾರೆ.
ಅಲ್ಲದೇ, ಜನರು ಮೋದಿಜಿಯವರಿಗೆ ಮತ ಹಾಕಲು ಹಾತೊರೆಯುತ್ತಿದ್ದಾರೆ. ಬಿಜೆಪಿ ಅಭ್ಯರ್ಥಿಗಳು ಗೆಲ್ಲುವ ಅಂತರ ತುಂಬಾ ದೊಡ್ಡಮಟ್ಟದಲ್ಲಿ. ನಮಗೂ ಕಾಂಗ್ರೆಸ್ ದೊಡ್ಡಮಟ್ಟದಲ್ಲಿ ಅಂತರವಿರುತ್ತದೆ. ಪ್ರೀತಂಗೌಡ ಹಿಂದೆ ಎಂಎಲ್‌ಎ ಆಗಿದ್ದರು, ಈಗ ರಾಜ್ಯ ಪ್ರಧಾನ ಕಾರ್ಯದರ್ಶಿ ಇದ್ದಾರೆ. ತುಂಬಾ ಪಕ್ಷ ಸಂಘಟನೆಗೆ ಒತ್ತುಕೊಟ್ಟು ಕೆಲಸ ಮಾಡುತ್ತಿದ್ದಾರೆ. ಈ ಭಾರಿ ಶಾಸಕರಾಗಿ ಆಯ್ಕೆಯಾಗದಿದ್ದರು ಅವರ ಶಕ್ತಿ ಹಾಸನ ವಿಧಾನಸಭಾ ಕ್ಷೇತ್ರದಲ್ಲಿದೆ. ನಮ್ಮ ಕಾರ್ಯಕರ್ತರು ಬಹಳ ತಿಳುವಳಿಕೆ ಉಳ್ಳವರು. ನಮ್ಮ ರಾಷ್ಟ್ರದ ಹಿತಾಸಕ್ತಿಗೆ ಬದ್ದವಾಗಿ ಕೆಲಸ ಮಾಡ್ತಾರೆ. ನಾನು ಕಾರ್ಯಕರ್ತರ ಜೊತೆ ಸಭೆ ಮಾಡಿದ್ದೇನೆ. ಎಲ್ಲಾ ಕಾರ್ಯಕರ್ತರ ಮನದಲ್ಲಿ ಮೋದಿಜಿ ಅವರ ಬಗ್ಗೆ ಅಗಾಧವಾದ ಅಭಿಮಾನವಿದೆ. ಮೋದಿಜಿ, ಅಮಿತ್ ಶಾ ಏನು ನಿರ್ಧಾರ ಕೈಗೊಂಡಿದ್ದಾರೆ ಕರ್ನಾಟಕ ಭವಿಷ್ಯಕ್ಕೆ ಎಂದು ಕಾರ್ಯಕರ್ತರು ತಿಳಿದುಕೊಂಡಿದ್ದಾರೆ ಎಂದಿದ್ದಾರೆ.
ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಆಡಳಿತದಲ್ಲಿದೆ. ಹಿಂದೂಗಳ ಮೇಲೆ ದೌರ್ಜನ್ಯ, ದಬ್ಬಾಳಿಕೆ ನಡೆಯುತ್ತಿದೆ. ಹಿಂದೆ ಔರಂಗಜೇಬ್ ಮಾಡುತ್ತಿದ್ದ ಈಗ ಕಾಂಗ್ರೆಸ್ ಮಾಡುತ್ತಿದೆ. ಸಿಎಂ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಹಿಂದೂಗಳ ಮೇಲೆ ದಬ್ಬಾಳಿಕೆ ಮಾಡುತ್ತಿದ್ದಾರೆ. ರಾಜ್ಯಸಭೆ ಅವರ ಅಭ್ಯರ್ಥಿ ಆಯ್ಕೆಯಾದರೆ ವಿಧಾನಸೌಧದಲ್ಲಿ ಪಾಕಿಸ್ತಾನದ ಪರ ಘೋಷಣೆ ಕೂಗ್ತಾರೆ. ಬೆಂಗಳೂರಿನ ಕೆಫೆಯಲ್ಲಿ ಬಾಂಬದ ಸ್ಫೋಟ ಆಗುತ್ತೆ, ಹನುಮಾನ್ ಚಾಲಿಸ್ ಹಾಕಿದರೆ ಗೂಂಡಾಗಳು ಬಂದು ಹೊಡಿತರೆ. ಇಂತಹ ಸರ್ಕಾರದ ಬಗ್ಗೆ ಜನರಿಗೆ ಅರಿವಿದೆ. ಇಂತಹ ಸರ್ಕಾರ ಆಯ್ಕೆ ಮಾಡಿದ್ದಕ್ಕೆ ಜನಗಳಿಗೆ ಅವರ ತಪ್ಪಿನ ಅರಿವಾಗಿದೆ. 2023 ರ ಚುನಾವಣೆಯಲ್ಲಿ ಜನರಿಂದ ತಪ್ಪಾಗಿದೆ. ಆ ತಪ್ಪನ್ನು ಈಗ ಸರಿ ಮಾಡುತ್ತಾರೆ. ಜನರ ದೃಷ್ಟಿಯಲ್ಲಿ ಲೋಕಸಭಾ ಚುನಾವಣೆ ನಂತರ ಈ ಸರ್ಕಾರ ಬಿದ್ದು ಹೋಗುತ್ತೆ ಎಂದು ಬಿಜೆಪಿ ರಾಜ್ಯ ಚುನಾವಣಾ ಉಸ್ತುವಾರಿ ರಾಧಾಮೋಹನ್‌ದಾಸ್ ಅಗರ್ವಾಲ್ ಹೇಳಿದ್ದಾರೆ.
ಕಾಂಗ್ರೆಸ್ ನಾಯಕಿಯ ವಿವಾದಾತ್ಮಕ ಹೇಳಿಕೆಗೆ ತಿರುಗೇಟು ಕೊಟ್ಟ ಕಂಗನಾ ರಾಣಾವತ್
ಕಸದ ಟ್ರಕ್ ಡಿಕ್ಕಿ ಲಂಡನ್‌ನಲ್ಲಿ ಭಾರತೀಯ ಪಿಎಚ್‌ಡಿ ವಿದ್ಯಾರ್ಥಿನಿ ಸಾವು