Monday, December 23, 2024

Latest Posts

ಪ್ರಜಾಪ್ರಭುತ್ವ ವ್ಯವಸ್ಥೆಗೆ ಇದು ದೊಡ್ಡ ಅವಮಾನ..?!

- Advertisement -

State News: ಪ್ರಧಾನಿ ನರೇಂದ್ರ ಮೋದಿ ಸರ್ ನೇಮ್ ವಿಚಾರವಾಗಿ  ಮಾನನಷ್ಟ ಮೊಕದ್ದಮೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಹುಲ್ ಗಾಂಧಿ ಸಲ್ಲಿಸಿದ್ದ ಅರ್ಜಿ ವಿಚಾರವಾಗಿ ದೇಶದಲ್ಲಿ ಮಾತು ಪ್ರಾರಂಭವಾಗಿದೆ. ಇಂದು ಜು.7 ಗುಜರಾತ್ ಕೋರ್ಟ್​ ರಾಗಾ ಸಲ್ಲಿಸಿದ್ದ ಅರ್ಜಿಯನ್ನು ವಜಾ ಗೊಳಿಸಿ ಆದೇಶ ಹೊರಡಿಸಿದೆ. ಇದು ಕಾಂಗ್ರೆಸ್ಸಿಗರ ಕೆಂಗಣ್ಣಿಗೆ ಕಾರಣವಾಗಿದೆ.

ಒಂದೆಡೆ ಕಾಂಗ್ರೆಸ್ಸಿಗರು  ಇದರ ವಿರುದ್ಧವಾಗಿ ಪ್ರತಿಭಟಣೆ ಕೈಗೊಂಡು ತಮ್ಮ ಆಕ್ರೋಶವನ್ನು ಹೊರ ಹಾಕಿದರೆ, ಮತ್ತೆ ಕೆಲವರು ತಮ್ಮ ಅಭಿಪ್ರಾಯಗಳನ್ನು ಮಾಧ್ಯಮದ ಮುಂದೆ ಬಿಚ್ಚಿಟ್ಟಿದ್ದಾರೆ.

ಇನ್ನು ರಾಜ್ಯದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಈ ಬಗ್ಗೆ ಮಾತನಾಡಿ, ಇದು ಕೇವಲ ರಾಹುಲ್ ಗಾಂಧಿಗೆ ಆಗಿರುವಂತಹ ಹಿನ್ನಡೆಯಲ್ಲ, ಇದೊಂದು ಪ್ರಜಾಪ್ರಭುತ್ವ ವ್ಯವಸ್ಥೆಗೆ ಆಗಿರುವಂತಹ ದೊಡ್ಡ ಅವಮಾನ ಎಂಬುವುದಾಗಿ ಮಾಧ್ಯಮದ ಮುಂದೆ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು.

ಹುಬ್ಬಳ್ಳಿಯಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ

ರಾಜ್ಯದ ಜನರ ಸರ್ವಾಂಗೀಣ ಏಳಿಗೆಗೆ ಪೂರಕವಾದ ಬಜೆಟ್…!

#ATMSarkara #ಸಾಲರಾಮಯ್ಯ…! ಏನಿದು ಫೇಸ್ ಬುಕ್ ಪೋಸ್ಟ್..?!

- Advertisement -

Latest Posts

Don't Miss