ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಟೆಂಪಲ್ ರನ್ ಮುಂದುವರಿಸಿದ್ದಾರೆ. ಮುಖ್ಯಮಂತ್ರಿ ಸ್ಥಾನಕ್ಕೇರುವ ಮಹತ್ವಾಕಾಂಕ್ಷೆ ಹೊಂದಿರುವ ಡಿಕೆಶಿ, ಹೋದ ಕಡೆಯಲ್ಲಾ ಸಮಯ ಮಾಡಿಕೊಂಡು, ದೇವರ ದರ್ಶನ ಪಡೆಯುತ್ತಿದ್ದಾರೆ.

ಮಹಾನ್ ದೈವ ಭಕ್ತರಾಗಿರುವ ಡಿ.ಕೆ. ಶಿವಕುಮಾರ್, ಪ್ರಯತ್ನ ವಿಫಲವಾದ್ರೂ ಪ್ರಾರ್ಥನೆ ವಿಫಲವಾಗಲ್ಲ ಅನ್ನೋ ಅಗಾಧ ನಂಬಿಕೆ ಇಟ್ಟುಕೊಂಡಿದ್ದಾರೆ. ಹಲವು ಬಾರಿ ಈ ಮಾತನ್ನ ಹೇಳಿದ್ದಾರೆ.
ಡಿಸೆಂಬರ್ 27ರಂದು ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆ ನಿಗದಿಯಾಗಿದೆ. ಎಐಸಿಸಿ ಅಧ್ಯಕ್ಷರಾದ ಖರ್ಗೆಯವರು, ಸಿದ್ದರಾಮಯ್ಯ, ಪರಮೇಶ್ವರ್, ಹರಿಪ್ರಸಾದ್‌ರಿಗೆ ಆಹ್ವಾನ ಕೊಟ್ಟಿದ್ದಾರೆ. ನಾಯಕತ್ವ ಬದಲಾವಣೆ ಬಗ್ಗೆ ಮಹತ್ವದ ಚರ್ಚೆ ನಡೆಯಲಿದೆ. ಎಲ್ಲವೂ ಫೈನಲ್ ಆದ್ರೂ ಆಶ್ಚರ್ಯವಿಲ್ಲ.
ಹೀಗಾಗಿ ಡಿಕೆಶಿ ತಮ್ಮ ಇಷ್ಟಾರ್ಥ ಸಿದ್ಧಿಗಾಗಿ ಉತ್ತರ ಕನ್ನಡ ಜಿಲ್ಲೆಯ ಗೋಕರ್ಣದ ಶ್ರೀ ಮಹಾಬಲೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ. ದೇವರ ದರ್ಶನ ಪಡೆದು ಆತ್ಮಲಿಂಗದ ವಿಶೇಷ ಪೂಜೆ ಸಲ್ಲಿಸಿ ನಾಡಿನ ಒಳಿತಿಗಾಗಿ ಪ್ರಾರ್ಥನೆ ಸಲ್ಲಿಸಿದ್ದಾರೆ.

ಅಭಿಷೇಕ ಪ್ರಿಯ ಈಶ್ವರನಿಗೆ ಜಲಾಭಿಷೇಕ ನೆರವೇರಿಸಿ, ಬಿಲ್ವಪತ್ರೆ, ಹೂವುಗಳನ್ನಿಟ್ಟು ತಮ್ಮ ಕೈಯ್ಯಾರೆ ವಿಶೇಷ ಪೂಜೆ ನೆರವೇರಿಸಿದ್ದಾರೆ. ಇನ್ನು ಗಣೇಶನ ವಿಗ್ರಹಕ್ಕೂ ತಾವೇ ಆರತಿ ಬೆಳಗಿ ಪ್ರಾರ್ಥನೆ ಸಲ್ಲಿಸಿದ್ದಾರೆ.
dk shiva
ಒಟ್ನಲ್ಲಿ, ಡಿಕೆಶಿ ಹಿಡಿದ ಹಠ ಸಾಧಿಸ್ತಾರಾ. ಮನದಾಸೆ ಈಡೇರಿಕೊಳ್ತಾರಾ ಅನ್ನೋದು ಕೆಲವೇ ದಿನಗಳಲ್ಲಿ ಗೊತ್ತಾಗಲಿದೆ.




