DKS ಆಲಮಟ್ಟಿಯಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯೆ:

ರಾಜ್ಯ: ಕೃಷ್ಣಾ ಮೇಲ್ದಂಡೆ ಯೋಜನೆಯನ್ನು ಆದಷ್ಟು ಬೇಗ ಜಾರಿ ಮಾಡಲು ನಮ್ಮ ಸರ್ಕಾರ ಬದ್ಧವಾಗಿದೆ. ಅದಕ್ಕಾಗಿ ಈ ಭಾಗದ ಸಂಸದರು, ಮಂತ್ರಿಗಳು ಸೇರಿದಂತೆ ಎಲ್ಲರೂ ಇಂದು ಚರ್ಚೆ ಮಾಡಿದ್ದೇವೆ. ಆಲಮಟ್ಟಿಯಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಮಾಧ್ಯಮಗಳ ಜತೆ ಮಾತನಾಡಿದರು.

ಎರಡೂವರೆ ಗಂಟೆಗಳ ಕಾಲ ಕೃಷ್ಣಾ ಮೇಲ್ದಂಡೆ ಯೋಜನೆಯ ಬಗ್ಗೆ ಆದ್ಯತೆ ಮೇರೆಗೆ ಯಾವೆಲ್ಲಾ ಕ್ರಮ ಕೈಗೊಳ್ಳಬೇಕು ಎಂದು ಚರ್ಚೆ ಮಾಡಲಾಗಿದೆ.ನೋಟಿಫಿಕೇಶನ್, ರೈತರ ಪುನರ್ ವಸತಿ ಸಮಸ್ಯೆ, ರೈತರ ಜಮೀನಿಗೆ ನೀರು ಹೋಗಲು ಇರುವ ಸಮಸ್ಯೆ ಸೇರಿದಂತೆ ಎಲ್ಲಾ ತಾಂತ್ರಿಕ ವಿಚಾರಗಳ ಬಗ್ಗೆ ಮುಖ್ಯಮಂತ್ರಿಗಳು ಚರ್ಚೆ ಮಾಡಿದ್ದಾರೆ. ಎಲ್ಲಾ ಅಗತ್ಯ ಕ್ರಮಗಳನ್ನು ಕೂಡಲೇ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.

ಕೃಷ್ಣ ಮೇಲ್ದಂಡೆ, ಕಾವೇರಿ, ಮಹದಾಯಿ ವಿಚಾರವಾಗಿ ಸರ್ವಪಕ್ಷ ನಿಯೋಗ ಭೇಟಿಗೆ ಸಮಯ ಕೋರಿ ಮುಖ್ಯಮಂತ್ರಿಗಳು ಪ್ರಧಾನಿಗೆ ಪತ್ರ ಬರೆದಿದ್ದಾರೆ. ಭೇಟಿಯ ದಿನಾಂಕ ಕುರಿತು ಪ್ರಧಾನ ಮಂತ್ರಿಗಳ ಕಾರ್ಯಾಲಯದಿಂದ ಪ್ರತಿಕ್ರಿಯೆ ನಿರೀಕ್ಷಿಸುತ್ತಿದ್ದೇವೆ. ದಿನಾಂಕ ನಿಗದಿ ಬಳಿಕ ಎಲ್ಲರೂ ಒಟ್ಟಾಗಿ ಹೋಗುತ್ತೇವೆ.ಒಂದು ವಾರದಲ್ಲಿ ಆದ್ಯತೆ ಪಟ್ಟಿ ತಯಾರು ಮಾಡಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಅನುದಾನ ಎಷ್ಟು ಬೇಕಾಗಲಿದೆ ಎಂದು ಅಧಿಕಾರಿಗಳು ತಿಳಿಸಲಿದ್ದಾರೆ. ನಂತರ ಹಣಕಾಸು ಇಲಾಖೆ, ಕಂದಾಯ ಇಲಾಖೆ ಜತೆಗೂಡಿ ಕೆಲಸ ಮಾಡುತ್ತೇವೆ.

Royalenfield: ಹುಬ್ಬಳ್ಳಿಯಲ್ಲಿ ಬೆಳ್ಳಂಬೆಳಿಗ್ಗೆ ರಸ್ತೆ ಅಪಘಾತ..!

Asia cup: ಕ್ರಿಕೆಟ್ ಹಾಗೂ ಸೂರ್ಯಯಾನಕ್ಕೆ ಶುಭ ಹಾರೈಸಿದ ರಜತ್

ISRO: ಕಿರು ನಾಟಕದ ಮೂಲಕ ಇಸ್ರೋ ವಿಜ್ಞಾನಿಗಳಿಗೆ ಶುಭ ಹಾರೈಸಿದ ಶಾಲಾ ಮಕ್ಕಳು:

About The Author