ಬೆಳಗಾವಿ: ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿಯನ್ನು ಸಿದ್ಧಪಡಿಸಿ, ಜನವೆರಿ 1ರೊಳಗೆ ಪ್ರಕಟಿಸಲಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ತಿಳಿಸಿದರು. ಮಾಧ್ಯಮದವರ ಜೊತೆ ಮಾತನಾಡಿ, ಜಿಲ್ಲಾ ಕಾಂಗ್ರೆಸ್ ಮತ್ತು ವಿವಿಧ ಘಟಕಗಳ ಮುಖಂಡರ ಜೊತೆ ಚರ್ಚಿಸಿ ಅಬಿಪ್ರಾಯ ಪಡೆಯಲಾಗುವುದು. ಜಿಲ್ಲಾ ಕೇಂದ್ರಗಳಲ್ಲಿ ಪ್ರತಿ ಬ್ಲಾಕ್ ಮಟ್ಟದ ನಾಯಕರನ್ನು ಕರೆಸಿ ಚರ್ಚೆ ಮಾಡಲಾಗುವುದು. ಪಕ್ಷದ ಕಾರ್ಯಕರ್ತರು ಹಾಗೂ ಮುಖಂಡರ ಧ್ವನಿ ಪಕ್ಷದ ಧ್ವನಿಯಾಗಬೇಕು ಎಂಬುದು ಈ ಸಮಿತಿಯ ತೀರ್ಮಾನವಾಗಿದೆ ಎಂದು ಅವರು ತಿಳಿಸಿದರು.
ಚಳಿಗಾಲ ಅಧಿವೇಶನದಲ್ಲಿ ಪಾಲ್ಗೊಳ್ಳಲು ಸಿಎಂ ಬೊಮ್ಮಾಯಿ ಬೆಳಗಾವಿಗೆ ಆಗಮನ
ರಾಜ್ಯಮಟ್ಟದ ಚುನಾವಣಾ ಸಮಿತಿಯಿಂದ ಇಬ್ಬರು ಸದಸ್ಯರಿಗೆ ಒಂದೊಂದು ಜಿಲ್ಲೆಯ ಜವಾಬ್ದಾರಿ ನೀಡಲಾಗುವುದು. ಪಕ್ಷದ 5 ಕಾರ್ಯಾಧ್ಯಕ್ಷರು ಹಾಗೂ ಎಐಸಿಸಿ ಕಾರ್ಯದರ್ಶಿಗಳು, ಚುನಾವಣಾ ಸಮಿತಿ ಸದಸ್ಯರು, ಜಿಲ್ಲಾ ಕಾಂಗ್ರೆಸ್ ಸದಸ್ಯರು, ಪಕ್ಷದ ಪದಾಧಿಕಾರಿಗಳು ಎಲ್ಲರೂ ಸೇರಿ ಚರ್ಚೆ ಮಾಡುತ್ತಾರೆ . ಎಲ್ಲಾ ಕ್ಷೇತ್ರಗಳಲ್ಲಿ ಎಲ್ಲಾ ಟಿಕೆಟ್ ಆಕಾಂಕ್ಷಿಗಳನ್ನು ಸೇರಿಸಿ ಒಮ್ಮತದ ಅಭ್ಯರ್ಥಿಯನ್ನು ಆಯ್ಕೆ ಮಾಡಲು ನಿರ್ಧರಿಸಲಾಗುವುದು. ಪ್ರತಿ ಕ್ಷೇತ್ರಗಳಲ್ಲಿ 1 ರಿಂದ 3 ಆಕಾಂಕ್ಷಿಗಳ ಹೆಸರನ್ನು ಪರಿಷ್ಕರಿಸಿ ಕೆಪಿಸಿಸಿಗೆ ಕಳುಹಿಸುವಂತೆ ಸೂಚಿಸಿದ್ದೇವೆ. ಜನವರಿ 1ರೊಳಗೆ ಎಲ್ಲಾ ಜಿಲ್ಲೆಗಳ ಕ್ಷೇತ್ರದ ಪರಿಷ್ಕೃತ ಅರ್ಜಿಗಳ ಪಟ್ಟಿ ನೀಡಬೇಕು ನಂತರ ರಾಜ್ಯ ಮಟ್ಟದ ಚುನಾವಣಾ ಸಮಿತಿ ಮತ್ತೆ ಸಭೆ ಸೇರಿ ಎಲ್ಲ ಮಾನದಂಡಗಳನ್ನು ಅನುಸರಿಸಿ ನಂತರದ ಪ್ರಕ್ರಿಯೆ ನಡೆಸಲಾಗುವುದು ಎಂದು ಡಿಕೆ ಶಿವಕುಮಾರ್ ಬೆಳಗಾವಿಯಲ್ಲಿ ಹೇಳಿದರು.
ಚಳಿಗಾಲ ಅಧಿವೇಶನದಲ್ಲಿ ಪಾಲ್ಗೊಳ್ಳಲು ಸಿಎಂ ಬೊಮ್ಮಾಯಿ ಬೆಳಗಾವಿಗೆ ಆಗಮನ