ಬೆಂಗಳೂರು: 1837 ರಲ್ಲಿ ನಡೆದ ಅಮರ ಸುಳ್ಯ ಹೋರಾಟ ಈ ದೇಶದ ಮೊದಲ ಸ್ವಾತಂತ್ರ್ಯ ಸಂಗ್ರಾಮ. 13 ದಿನಗಳ ಕಾಲ ಮಂಗಳೂರು ಸೇರಿದಂತೆ ಒಂದಷ್ಟು ಭಾಗಗಳನ್ನು ಹೋರಾಟಗಾರರು ಹಿಡಿತದಲ್ಲಿ ಇಟ್ಟು ಕೊಂಡಿದ್ದರು. ದುರಾದೃಷ್ಟವಶಾತ್ ಅಕ್ಟೋಬರ್ 31, 1837 ರಂದು ಈ ದಂಗೆಯ ಪ್ರಮುಖ ಹೋರಾಟಗಾರರನ್ನ ಗಲ್ಲಿಗೇರಿಸಲಾಯಿತು.
ಶಿವಮೊಗ್ಗ ಜಿಲ್ಲೆಯ ಈಸೂರು ಸ್ವಾತಂತ್ರ್ಯವನ್ನು ಘೋಷಿಸಿದ ದೇಶದ ಮೊದಲ ಗ್ರಾಮ.ಏಪ್ರಿಲ್ 25, 1938 ರಂದು ವಿದುರಾಶ್ವಥದಲ್ಲಿ ನಡೆದ ಗೋಲಿಬಾರ್ ಅನ್ನು ದಕ್ಷಿಣ ಭಾರತದ ಜಲಿಯನ್ ವಾಲಾಭಾಗ್ ಹತ್ಯಾಕಾಂಡ ಎನ್ನಬಹುದು.ಕಾಂಗ್ರೆಸ್ ಮುಖಂಡ ಹನುಮಂತ ರಾವ್ ಅವರ ನೇತೃತ್ವದಲ್ಲಿ 1930 ರಲ್ಲಿ ಅಂಕೋಲಾದಲ್ಲಿ ಉಪ್ಪಿನ ಸತ್ಯಾಗ್ರಹ ನಡೆಯುತ್ತದೆ.
ಹೀಗೆ ಸ್ವಾತಂತ್ರ್ಯ ಹೋರಾಟಕ್ಕೆ ವೇದಿಕೆಯಾಗಿದ್ದ ಕರ್ನಾಟಕದಲ್ಲೇ ಈಗ ಹೊಸ “ಇಂಡಿಯಾ” ಕೂಡ ಉದಯವಾಗಿದೆ. ಈ ಇಂಡಿಯಾಗೆ ಶಕ್ತಿ ತುಂಬಿ ದೇಶವನ್ನು ರಕ್ಷಣೆ ಮಾಡಿಕೊಳ್ಳುವ ಮಹತ್ತರ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ.
Siddaramaiah: ಬ್ರಿಟಿಷರು ಕೈಗಳಿಗೆ ನಿರುದ್ಯೋಗವನ್ನು, ಹೊಟ್ಟೆಗೆ ಹಸಿವನ್ನು ಬಳುವಳಿಯಾಗಿ ಬಿಟ್ಟು ಹೋಗಿದ್ದಾರೆ..!
Independence Day: ನಾಡಿನ ಸಮಸ್ತ ಜನತೆಗೆ ಸ್ವಾತಂತ್ರ್ಯ ದಿನಾಚರಣೆಯ ಶುಭಾಶಯಗಳು