Tuesday, April 15, 2025

Latest Posts

DK Shiva kumar: ಸ್ಪಂದನಾ ವಿಜಯ್ ರಾಘವೇಂದ್ರ ಅವರ ನಿಧನಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್ ಸಂತಾಪ:

- Advertisement -

ಬೆಂಗಳೂರು:ಕನ್ನಡದ ಖ್ಯಾತ ನಟ ವಿಜಯ ರಾಘವೇಂದ್ರ ಅವರ ಧರ್ಮಪತ್ನಿ ಸ್ಪಂದನಾ ಅವರ ನಿಧನಕ್ಕೆ ಡಿಸಿಎಂ ಡಿ.ಕೆ ಶಿವಕುಮಾರ್ ಸಂತಾಪ ಸೂಚಿಸಿದ್ದಾರೆ.

“ಸ್ಪಂದನಾ ಅವರ ನಿಧನದ ಸುದ್ದಿ ಕೇಳಿ ಆಘಾತವಾಗಿದೆ. ಇದು ಸಾಯುವ ವಯಸ್ಸಲ್ಲ. ಮನುಷ್ಯನ ಜೀವನ ಎಷ್ಟು ಅನಿಶ್ಚಿತ ಎಂಬುದಕ್ಕೆ ಈ ಅಗಲಿಕೆಯೂ ಸಾಕ್ಷಿ. ತೀರಾ ಇತ್ತೀಚಿಗಷ್ಟೇ ವಿಜಯ ರಾಘವೇಂದ್ರ ಹಾಗೂ ಸ್ಪಂದನಾ ಅವರು ನನ್ನನ್ನು ಭೇಟಿ ಮಾಡಿದ್ದರು. ಈಗ ಅವರು ಇಲ್ಲ ಎಂಬುದನ್ನು ಊಹಿಸಿಕೊಳ್ಳುವುದು ಕಷ್ಟವಾಗುತ್ತಿದೆ.

ಸ್ಪಂದನಾ ಅವರ ಆತ್ಮಕ್ಕೆ ಶಾಂತಿ ಸಿಗಲಿ, ಅವರ ಅಗಲಿಕೆ ನೋವು ಭರಿಸುವ ಶಕ್ತಿ ಪತಿ ವಿಜಯ ರಾಘವೇಂದ್ರ ಹಾಗೂ ಅವರ ಕುಟುಂಬ ಸದಸ್ಯರಿಗೆ ಕರುಣಿಸಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ” ಎಂದು ಶಿವಕುಮಾರ್ ಅವರು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.

Hubli Protest: ಮಣಿಪುರ ಹಿಂಸಾಚಾರವನ್ನು ಖಂಡಿಸಿ ಹುಬ್ಬಳ್ಳಿಯಲ್ಲಿ ಪ್ರತಿಭಟನೆ

Praladh joshi: ರಾಜ್ಯ ಸರ್ಕಾರ ಭ್ರಷ್ಟಾಚಾರ ಮಾಡುವವರಿಗೆ ಸಾಥ್ ಕೊಟ್ಟಿದೆ..!

Viral video: ಕುಡಿದ ಮತ್ತಿನಲ್ಲಿ ಹೆಂಡತಿಗೆ ಹೊಡೆದು ಸಾರ್ವಜನಿಕರಿಂದ ಗೂಸಾ…!

- Advertisement -

Latest Posts

Don't Miss