ಡಿಕೆಶಿ ಹೊರಗಿಟ್ಟು ಕೈ ನಾಯಕರ ಡಿನ್ನರ್ ಪಾಲಿಟಿಕ್ಸ್; ಆಪ್ತ ಸಚಿವರ ಜತೆ ಸಿದ್ದರಾಮಯ್ಯ ಚರ್ಚೆ

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಅವರನ್ನು ಹೊರಗಿಟ್ಟು ಕೈ ನಾಯಕರು ಔತಣಕೂಟದಲ್ಲಿ ಚರ್ಚೆ ನಡೆಸಿದ್ದಾರೆ. ಡಿಕೆಶಿ ಮನೆ ಪಕ್ಕದಲ್ಲಿಯೇ ಇದ್ದರೂ ಅವರಿಗೆ ಆಹ್ವಾನ ನೀಡದೆ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಸಚಿವರು ಸಭೆ ನಡೆಸಿರುವುದು ಕುತೂಹಲ ಮೂಡಿಸಿದೆ. ಈ ಮೂಲಕ ಅಧಿಕಾರ ಹಂಚಿಕೆಯ 50-50 ಫಾರ್ಮುಲಾ ಬಗ್ಗೆ ಮಾತನಾಡುತ್ತಿರುವ ಡಿ.ಕೆ. ಶಿವಕುಮಾರ್‌ ಆಪ್ತ ಶಾಸಕರಿಗೆ ಸಿಎಂ ಸಿದ್ದರಾಮಯ್ಯ ಎಚ್ಚರಿಕೆಯ ಸಂದೇಶ ರವಾನಿಸಿದ್ದಾರೆ ಎನ್ನಲಾಗುತ್ತಿದೆ. ಗೃಹ ಸಚಿವ ಡಾ.ಜಿ. ಪರಮೇಶ್ವರ್ ಅವರ ಸದಾಶಿವನಗರದ ನಿವಾಸದಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಸಚಿವರ … Continue reading ಡಿಕೆಶಿ ಹೊರಗಿಟ್ಟು ಕೈ ನಾಯಕರ ಡಿನ್ನರ್ ಪಾಲಿಟಿಕ್ಸ್; ಆಪ್ತ ಸಚಿವರ ಜತೆ ಸಿದ್ದರಾಮಯ್ಯ ಚರ್ಚೆ