ರಾಮನಗರ ಜಿಲ್ಲೆ ಪೂರ್ತಿ ಸ್ಯಾನಿಟೈಸರ್, ಮಾಸ್ಕ್ ಹಂಚಿಕೆ..!

ರಾಮನಗರ : ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹಾಗೂ ಸಂಸದ ಡಿ.ಕೆ. ಸುರೇಶ್ ಅವರು ಡಿಕೆಎಸ್ ಚಾರಿಟಬಲ್ ಟ್ರಸ್ಟ್ ವತಿಯಿಂದ ಬೆಂಗಳೂರು ಗ್ರಾಮಾಂತರ ಲೋಕಸಭೆ ಕ್ಷೇತ್ರದ ಜನರಿಗೆ ಉಚಿತವಾಗಿ ವಿತರಿಸಲು ರಾಮನಗರ ಜಿಲ್ಲಾಧಿಕಾರಿ ಅರ್ಚನಾ ಅವರಿಗೆ ಶನಿವಾರ ಸ್ಯಾನಿಟೈಸರ್ ಹಾಗೂ ಮಾಸ್ಕ್ ಗಳನ್ನು ಹಸ್ತಾಂತರಿಸಿದರು. ಜಿಲ್ಲಾಧಿಕಾರಿಗಳು ಜಿಲ್ಲಾಡಳಿತದ ಮೂಲಕ ಇವುಗಳನ್ನು ಜನರಿಗೆ ವಿತರಿಸಲಿದ್ದಾರೆ. ಈ ವೇಳೆ ವಿಧಾನ ಪರಿಷತ್ ಸದಸ್ಯ ಸಿ.ಎಂ ಲಿಂಗಪ್ಪ, ಎಸ್. ರವಿ, ಮಾಜಿ ಶಾಸಕ ಬಾಲಕೃಷ್ಣ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಜಿಯಾವುಲ್ಲಾ, ರಾಮನಗರ ಎಸ್ ಪಿ ಅನೂಪ್ ಶೆಟ್ಟಿ, ಉಪಸ್ಥಿತರಿದ್ದರು.

ಕರ್ನಾಟಕ ಟಿವಿ, ರಾಮನಗರ

https://www.youtube.com/watch?v=RzkFEotDje8

About The Author