ಬೆಂಗಳೂರು: ಮತದಾರರ ಪಟ್ಟಿ ನವೀಕರಣಕ್ಕೆ ನೀಡಿದ್ದ ಅನುಮತಿ ದುರ್ಬಳಕೆ ಮಾಡಿಕೊಂಡಿರುವುದರ ಬಗ್ಗೆ ಕೆಪಿಸಿಸಿ ಕಚೇರಿಯಲ್ಲಿ ಇಂದು ಸುದ್ದಿಗೋಷ್ಠಿ ನಡೆಸಲಾಯಿತು. ಬಿಬಿಎಂಪಿ ಮತ್ತು ರಾಜ್ಯ ಸರ್ಕಾರದ ವಿರುದ್ಧ ಡಿಕೆ ಶಿವಕುಮಾರ್ ಆಕ್ರೋಶ ವ್ಯಕ್ತ ಪಡಿಸಿದ್ದಾರೆ. ಸರ್ಕಾರ ತಮಗೆ ಬೇಕಾದವರನ್ನು ಕೆಲಸಕ್ಕೆ ಇಟ್ಟುಕೊಂಡಿದ್ದಾರೆ ಚಿಲುಮೆ ಸಂಸ್ಥೆಗೆ ನೀಡಿದ್ದ ಅನುಮತಿ ಆದೇಶವನ್ನು ಬಿಬಿಎಂಪಿ ಹಿಂಪಡೆದಿದ್ದಾರೆ. ಇದರಿಂದ ಚಿಲುಮೆ ಸಂಸ್ಥೆ ನಿಯಮ ಉಲ್ಲಂಘನೆ ಮಾಡಿದೆ ಎಂಬುವುದು ಸ್ಪಷ್ಟವಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಆಕ್ರೋಶ ವ್ಯಕ್ತಪಡಿಸಿದರು.
ಸಿಎಂ ಬೊಮ್ಮಾಯಿ ರಾಜೀನಾಮೆಗೆ ಸಿದ್ದರಾಮಯ್ಯ ಒತ್ತಾಯ
ವೊಟರ್ ಮಾಹಿತಿ ಕದಿಯುವ ಕೆಲಸ ಸರ್ಕಾರ ಮಾಡಿದೆ. ವಾಮಮಾರ್ಗದಲ್ಲಿ ಚುನಾವಣೆಯಲ್ಲಿ ಗೆಲ್ಲಲು ಯತ್ನಿಸಿದ್ದಾರೆ. ಇದು ದೇಶದಲ್ಲಿಯೇ ಚರ್ಚೆಯಾಗಬೇಕಿರುವ ವಿಷಯ ತಕ್ಷಣ ಚುನಾವಣಾ ಆಯೋಗ ಸಮಗ್ರ ತನಿಖೆ ಮಾಡಲಿ ಅಕ್ರಮದಲ್ಲಿ ಭಾಗಿಯಾದವರ ಮೇಲೆ ಎಫ್ಐಆರ್ ದಾಖಲಿಸಬೇಕು ಸಿಎಂ ಅವರನ್ನೂ ಅರೆಸ್ಟ್ ಮಾಡಬೇಕು ಎಂದು ಡಿಕೆಶಿ ಆಗ್ರಹಿಸಿದ್ದಾರೆ. ವೋಟರ್ ಐಡಿ ಅಕ್ರಮದಲ್ಲಿ ಡಾ. ಅಶ್ವತ್ಥ ನಾರಾಯಣ ಅವರದ್ದುಕೈವಾಡವಿದೆ ಇವರ ಸಹಕಾರವಿಲ್ಲದೆ ಇದೆಲ್ಲ ನಡೆಯಲು ಸಾಧ್ಯವಿಲ್ಲ. ಮಾಹಿತಿ ಸಂಗ್ರಿಹಿಸಿದ ಕಂಪನಿ ಮಾಲೀಕರ ವಿರುದ್ಧ ದೂರು ನೀಡುತ್ತೇವೆ ಮತ್ತು ಕ್ರಮ ತೆಗೆದುಕೊಳ್ಳಲು ಚುನಾವಣಾ ಆಯೋಗಕ್ಕೂ ದೂರು ನೀಡುತ್ತೇವೆ ಎಂದು ಡಿಕೆ ಶಿವಕುಮಾರ್ ಸುದ್ದಿಗೋಷ್ಠಿಯಲ್ಲಿ ಹೇಳಿದ್ದಾರೆ.
ಸ್ಪೀಡ್ ರೈಲುಗಳಿಗೆ ಜಾನುವಾರುಗಳು ಬಲಿ : ಹಳಿಗಳ ಪಕ್ಕದಲ್ಲಿ ಬೇಲಿ ಹಾಕಲು ರೈಲ್ವೆ ಇಲಾಖೆ ಚಿಂತನೆ
RBI ಜೊತೆ ವ್ಯಾಪಕ ಮಾತುಕತೆ ನಂತರ ನೋಟುಗಳ ನಿಷೇಧ ಜಾರಿ : ಕೋರ್ಟ್ ಗೆ ತನ್ನ ನಿರ್ಧಾರ ಸಮರ್ಥಿಸಿಕೊಂಡ ಕೇಂದ್ರ

