ಬೆಂಗಳೂರು: “ನಾವು ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆಗೆ ಪರಿಹಾರ ಎಂದು 500 ರೂ ಸೇರಿಸಿ ಮಹಿಳೆಯರಿಗೆ 2 ಸಾವಿರ ನೀಡುತ್ತಿದ್ದೇವೆ. ನಮ್ಮ ಒತ್ತಡಕ್ಕೆ ಮಣಿದು ಪ್ರಧಾನಿ ಮೋದಿಯವರು ಗ್ಯಾಸ್ ಸಿಲಿಂಡರ್ ಬೆಲೆಯನ್ನ 200 ರೂಪಾಯಿ ಕಡಿಮೆ ಮಾಡಿದ್ದಾರೆ” ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು.
ಉಚಿತ ಕೊಡುಗೆಯಿಂದ ದಿವಾಳಿಯಾಗಲಿದ್ದೇವೆ ಎಂದವರು ಏಕೆ ಮಧ್ಯಪ್ರದೇಶದಲ್ಲಿ 1,500 ಕೊಡುತ್ತಿದ್ದಾರೆ, 200 ರೂಪಾಯಿ ಸಿಲಿಂಡರ್ ಬೆಲೆ ಏಕೆ ಇಳಿಸಿದ್ದಾರೆ. ಬಿಜೆಪಿ ಆಡಳಿತವಿರುವ ರಾಜ್ಯಗಳ ಮಹಿಳೆಯರು ಕಾಂಗ್ರೆಸ್‌ನವರು ಕೊಡುತ್ತಿದ್ದಾರೆ ನಿಮಗೆ ಏಕೆ ಆಗುತ್ತಿಲ್ಲ ಎಂದು ಬೈಯ್ಯುತ್ತಿದ್ದಾರೆ, ಅದಕ್ಕೆ ಬಿಜೆಪಿ ಸರ್ಕಾರ ಕರ್ನಾಟಕ ಮಾದರಿ ಅನುಸರಿಸುತ್ತಿದೆ.
ಈ ದೇಶದ ಜನರಿಗೆ ಹಣ ಕೊಡಲು ನಮ್ಮದೇನು ತಕರಾರಿಲ್ಲ. ಆದರೆ “ಕರ್ನಾಟಕ ಮಾದರಿ”ಯಿಂದ ಹೆದರಿಕೊಂಡಿದ್ದಾರೆ ಎಂಬುದು ಸತ್ಯ.
Womens : ಗೃಹಲಕ್ಷ್ಮಿ ಯೋಜನೆ ಉದ್ಘಾಟನೆಗೆ ಸಾಗರೋಪಾದಿಯಲ್ಲಿ ಸೇರಿದ ನಾರಿಯರು
Raksha Bandhan: ಬಿಡುವು ಮಾಡಿಕೊಂಡು ರಾಕಿ ಕಟ್ಟಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್..!