Sunday, July 6, 2025

Latest Posts

ಡಿ.ಕೆ.ಶಿವಕುಮಾರ್, ಸಿದ್ದರಾಮಯ್ಯ ನೇತೃತ್ವದಲ್ಲಿ ಜನವರಿ 11ರಿಂದ ಬಸ್ ಯಾತ್ರೆ

- Advertisement -

ಬೆಳಗಾವಿ: ಕಾಂಗ್ರೆಸ್ ನಾಯಕರೆಲ್ಲರೂ ಸೇರಿ ಬಸ್ ಯಾತ್ರೆ ನಡೆಸಲಿದ್ದಾರೆ. ಮಾಜಿ ಸಿಎಂ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ಬಸ್ ಯಾತ್ರೆಯನ್ನು ನಡೆಸಲಾಗುವುದು ಎಂದು ಡಿ.ಕೆ. ಶಿವಕುಮಾರ್ ತಿಳಸಿದ್ದಾರೆ. ಬೆಳಗಾವಿ ಕಾಂಗ್ರೆಸ್ ಕಚೇರಿಯಲ್ಲಿ ಸೋಮವಾರ ಇದರ ಬಗ್ಗೆ ಮಾತನಾಡಿದರು. ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ನೇತೃತ್ವದಲ್ಲಿ ನಡೆದ ಸಭೆಯ ನಂತರ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಮಾಧ್ಯಮಗಳ ಜೊತೆಗೆ ಮಾತನಾಡಿ ತಿಳಿಸಿದರು.

ಡೊನಾಲ್ಡ್ ಟ್ರಂಪ್ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಲು ಶಿಫಾರಸು

ಡಿಸೆಂಬರ್ 30 ರಂದು ಯಾತ್ರೆ ಶುರುಮಾಡಲಿದ್ದೇವೆ. ಆವತ್ತು ವಿಜಯಪುರದಲ್ಲಿ ಕೃಷ್ಣಾ ನೀರು ಹಂಚಿಕೆ ವಿಚಾರವಾಗಿ, ಮುಂದಿನ ತಿಂಗಳು 2 ರಂದು ಹುಬ್ಬಳ್ಳಿಯಲ್ಲಿ ಮಹದಾಯಿ ಯೋಜನೆ ವಿಚಾರವಾಗಿ ಹೋರಾಟ ಹಮ್ಮಿಕೊಂಡಿದ್ದೇವೆ. ಜ. 8 ರಂದು ಪರಿಶಿಷ್ಟ ಜಾತಿ ಹಾಗೂ ಪಂಗಡದ ಸಮಾವೇಶವನ್ನು ಚಿತ್ರದುರ್ಗದಲ್ಲಿ ಹಮ್ಮಿಕೊಂಡಿದ್ದೇವೆ. ಬೆಳಗಾವಿಯಿಂದ ಕಾಂಗ್ರೆಸ್ ನಾಯಕರೆಲ್ಲರೂ ಸೇರಿ ಬಸ್ ಯಾತ್ರೆ ಆರಂಭಿಸುತ್ತಿದ್ದೇವೆ. ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಿ ಗಾಂಧೀಜಿ ಅವರು ಇಲ್ಲಿ ಎಐಸಿಸಿ ಸಭೆ ಮಾಡಿದ್ದರು. ಈ ಜಾಗದಲ್ಲಿ ಒಂದು ಇತಿಹಾಸವಿದೆ. ರಾಜ್ಯದಲ್ಲಿ ಜನಪರ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರಬೇಕು ಎಂದು ಬೆಳಗಾವಿಗೆ ಜ.10 ರಂದು ಆಗಮಿಸಿ 11 ರಿಂದ ಚಿಕ್ಕೋಡಿ ಹಾಗೂ ಬೆಳಗಾವಿಯಲ್ಲಿ ಸಭೆ ಮಾಡಲಿದ್ದೇವೆ ಎಂದು ಹೇಳಿದರು.

ಪಾಟ್ನಾ ರೈಲ್ವೆ ಸ್ಟೇಷನ್ ನಲ್ಲಿ ಬಾಂಬ್ ಇರಿಸಿರುವ ಬೆದರಿಕೆ : ವದಂತಿ ಹರಡಿದವರ ಬಂಧನ

ನಂತರ ನಾಲ್ಕು ದಿನ ವಿರಾಮ ತೆಗೆದುಕೊಂಡು ಜ. 17 ರಂದು ಹೊಸಪೇಟೆ ಹಾಗೂ ಕೊಪ್ಪಳ, 18 ರಂದು ಬಾಗಲಕೋಟೆ ಮತ್ತು ಗದಗ. 19ರಂದು ಹಾವೇರಿ ಮತ್ತು ದಾವಣಗೆರೆಯಲ್ಲಿ ಯಾತ್ರೆ ನಡೆಯಲಿದೆ. ಜನವರಿ 20 ರಂದು ವಿರಾಮ ದಿನ.  21ರಂದು ಹಾಸನ ಮತ್ತು ಚಿಕ್ಕಮಗಳೂರು, 22ರಂದು ಉಡುಪಿ ಮತ್ತು ದಕ್ಷಿಣ ಕನ್ನಡ, 23ರಂದು ಕೋಲಾರ ಮತ್ತು ಚಿಕ್ಕಬಳ್ಳಾಪುರದಲ್ಲಿ ಪ್ರವಾಸ ನಡೆಯಲಿದೆ. 24 ರಂದು ತುಮಕೂರು ಮತ್ತು ಬೆಂಗಳೂರು ಗ್ರಾಮಾಂತರದಲ್ಲಿ ನಡೆಯಲಿದೆ. 25 ವಿರಾಮದ ದಿನ. 26 ರಂದು ಮೈಸೂರು ಹಾಗೂ ಚಾಮರಾಜನಗರ, 27 ರಂದು ಮಂಡ್ಯ ಹಾಗೂ ರಾಮನಗರ, 28 ರಂದು ಯಾದಗಿರಿ ಹಾಗೂ ಬೀದರ್ ನಲ್ಲಿ ನಡೆಯಲಿದೆ. ಉಳಿದಂತೆ ಉತ್ತರ ಕನ್ನಡ, ರಾಯಚೂರು, ಕೊಡಗು ಹಾಗೂ ಬಳ್ಳಾರಿ ಭಾಗದ ಪ್ರವಾಸದ ಬಗ್ಗೆ ಪ್ರತ್ಯೇಕವಾಗಿ ಮಾಹಿತಿ ನೀಡುತ್ತೇವೆ ಎಂದು ತಿಳಿಸಿದರು.

ಮಕ್ಕಳ ರಕ್ಷಣೆ ನಮ್ಮೆಲ್ಲರ ಹೊಣೆ : ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ ಕೆ. ನಾಗಣ್ಣಗೌಡ

ಶಿಕ್ಷಣ ಕ್ಷೇತ್ರದಲ್ಲೂ ಕಾಂತಾರದ ಹವಾ..!

- Advertisement -

Latest Posts

Don't Miss