ಕೇಂದ್ರದ ಬಿಜೆಪಿ ಸರ್ಕಾರದ ದ್ವೇಷ ರಾಜಕಾರಣದ ಫಲವಾಗಿ ಜಾರಿ ನಿರ್ದೇಶನಾಲಯವು (ಇ.ಡಿ.) ಎಐಸಿಸಿ ಅಧ್ಯಕ್ಷರಾದ ಶ್ರೀಮತಿ ಸೋನಿಯಾ ಗಾಂಧಿ ಹಾಗೂ ಮುಖಂಡ ರಾಹುಲ್ ಗಾಂಧಿ ಅವರಿಗೆ ಅನಗತ್ಯ ಕಿರುಕುಳ ನೀಡುತ್ತಿರುವುದು ಹಾಗೂ ಇದನ್ನು ವಿರೋಧಿಸಿ ದಿಲ್ಲಿಯಲ್ಲಿ ಪ್ರತಿಭಟನೆ ನಡೆಸಿದ ಕಾಂಗ್ರೆಸ್ ಮುಖಂಡರ ಮೇಲೆ ಪೊಲೀಸ್ ದೌರ್ಜನ್ಯ ಖಂಡಿಸಿ ಬೆಂಗಳೂರಿನ ಕೆಪಿಸಿಸಿ ಕಚೇರಿಯಿಂದ ಗುರುವಾರ ನಡೆಸಿದ ರಾಜಭವನ ಮುತ್ತಿಗೆ ಪ್ರತಿಭಟನೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಬಿ. ಕೆ ಹರಿಪ್ರಸಾದ್, ಮಾಜಿ ಸಿಎಂ ವೀರಪ್ಪ ಮೊಯ್ಲಿ, ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್, ಧ್ರುವನಾರಾಯಣ್, ಮಾಜಿ ಡಿಸಿಎಂ ಡಾ. ಜಿ. ಪರಮೇಶ್ವರ, ಮಾಜಿ ಸಚಿವರಾದ ಪಿ ಟಿ ಪರಮೇಶ್ವರ ನಾಯಕ್, ಎಚ್ ಸಿ ಮಹದೇವಪ್ಪ ಮತ್ತಿತರ ಮುಖಂಡರು ಭಾಗವಹಿಸಿದ್ದರು.
ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಬಿ. ಕೆ. ಹರಿಪ್ರಸಾದ್ ಸೇರಿದಂತೆ ರಾಜಭವನಕ್ಕೆ ಮುತ್ತಿಗೆ ಹಾಕಲು ಹೊರಟ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರನ್ನು ಕ್ವೀನ್ಸ್ ರಸ್ತೆಯ ಬಾಳೆಕುಂದ್ರಿ ವೃತ್ತದ ಬಳಿ ಪೊಲೀಸರು ಗುರುವಾರ ವಶಕ್ಕೆ ಪಡೆದರು.