Wednesday, May 29, 2024

Latest Posts

ಈ ಸವಾಲು ಸ್ವೀಕರಿಸುವ ದಮ್ಮು ತಾಕತ್ತು ನಿಮಗಿದೆಯಾ?: ಬಿಜೆಪಿಗೆ ಸಿಎಂ ಸಿದ್ದರಾಮಯ್ಯ ಪ್ರಶ್ನೆ

- Advertisement -

Political News: ಸಿಎಂ ಸಿದ್ದರಾಮಯ್ಯ ಕೇಂದ್ರಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದು, ಪ್ರತಿ ವರ್ಷ ಕನ್ನಡಿಗರ ಬೆವರಗಳಿಕೆಯ ರೂ. 4.30 ಲಕ್ಷ ಕೋಟಿ ತೆರಿಗೆ ಸಂಗ್ರಹಿಸುವ ಕೇಂದ್ರ ಸರ್ಕಾರ ನಮಗೆ ವಾಪಾಸು ಕೊಟ್ಟಿರುವುದು ಕೇವಲ 50,257 ಕೋಟಿ ರೂಪಾಯಿ. ಅಂದರೆ ನಾವು 100 ರೂಪಾಯಿ ತೆರಿಗೆ ಪಾವತಿ ಮಾಡಿದರೆ ನಮಗೆ 12 ರಿಂದ 13 ರೂಪಾಯಿ ಮರಳಿ ಬರುತ್ತಿದೆ ಎಂದಿದ್ದಾರೆ.

ಕರ್ನಾಟಕಕ್ಕೆ ಜಿಎಸ್‌ಟಿಯಲ್ಲಿ, ವಿಶೇಷ ಅನುದಾನದಲ್ಲಿ, ಬರ ಪರಿಹಾರದಲ್ಲಿ, ಭದ್ರಾ ಮೇಲ್ದಂಡೆ ಯೋಜನೆಯ ಅನುದಾನದಲ್ಲಿ, ಗೃಹನಿರ್ಮಾಣ ಯೋಜನೆಯಲ್ಲಿ, ಅನ್ನಭಾಗ್ಯದ ಅಕ್ಕಿಯಲ್ಲಿ ಹೀಗೆ ಸಾಲು ಸಾಲು ಅನ್ಯಾಯವಾಗಿದೆ. ಈ ಅನ್ಯಾಯದ ವಿರುದ್ಧ ಪ್ರತಿಯೊಬ್ಬ ಕನ್ನಡಿಗನು ದನಿ ಎತ್ತಬೇಕಾಗಿದೆ. ಇದು ಕನ್ನಡಿಗರಾದ ನಮ್ಮೆಲ್ಲರ ಸ್ವಾಭಿಮಾನದ ಪ್ರಶ್ನೆಯೂ ಹೌದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ವಿತ್ತ ಸಚಿವರಾದ ನಿರ್ಮಲಾ ಸೀತಾರಾಮನ್ ಅವರೇ, ಮಾನ್ಯ ಪ್ರಹ್ಲಾದ್ ಜೋಶಿ ಅವರೇ, ಕೇಂದ್ರ ಸರ್ಕಾರದಿಂದ ಕರ್ನಾಟಕಕ್ಕೆ ಅನ್ಯಾಯವಾಗಿಲ್ಲ ಎಂದು ಹಾರಿಕೆ ಉತ್ತರ ನೀಡಿ ಜನರ ಕಣ್ಣಿಗೆ ಮಣ್ಣೆರೆಚುವ ಕೆಲಸ ಬಿಡಿ, ನಾನು ಹೇಳಿದ ಇಷ್ಟೂ ವಿಚಾರಗಳಲ್ಲಿ ಕರ್ನಾಟಕಕ್ಕೆ ನ್ಯಾಯ ಕೊಡಿಸುವ ಕೆಲಸವನ್ನು ನಿಮ್ಮ ಸರ್ಕಾರ ಮಾಡಿದ್ದರೆ ದಾಖಲೆಗಳನ್ನಿಟ್ಟು ಮಾತನಾಡಿ. ಈ ಸವಾಲು ಸ್ವೀಕರಿಸುವ ದಮ್ಮು ತಾಕತ್ತು ನಿಮಗಿದೆಯಾ? ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ಜೂನ್ 4ರ ನಂತರ ಡಿಕೆಶಿ- ಸಿದ್ದರಾಮಯ್ಯ ಈ ಕಾರಣಕ್ಕಾಗಿ ಪರಸ್ಪರ ಹೊಡೆದಾಡಿಕೊಳ್ಳುತ್ತಾರೆ: ಅಗರ್ವಾಲ್

ಮಂಡ್ಯದಲ್ಲಿ NDA ಗೆಲ್ಲಬೇಕು: ಮಂಡ್ಯ ಗೆಲುವಿಗೆ ವಿಜಯೇಂದ್ರ ಕಾರ್ಯತಂತ್ರ

ಜೆಡಿಎಸ್ ಪಕ್ಷದ ಯುವ ಮುಖಂಡ ಚಂದನ್‌ಗೆ ಸಾಮಾಜಿಕ ಜಾಲತಾಣ ವಿಭಾಗದ ರಾಜ್ಯಾಧ್ಯಕ್ಷ ಪಟ್ಟ

- Advertisement -

Latest Posts

Don't Miss