Dharwad News: ಧಾರವಾಡದಲ್ಲಿ ವೈದ್ಯ ಡಾ. ಕಿರಣ್ ಹೊನ್ನಣ್ಣವರ ಹತ್ಯೆ ಪ್ರಕರಣದ ತನಿಖೆ ಮುಂದುವರಿದಿದೆ. ಪ್ರಕರಣದ ಆರೋಪಿ ಪತ್ನಿ ಪ್ರಿಯಾಂಕಾ ಚಿಕಿತ್ಸೆ ಪಡೆಯುತ್ತಿದ್ದು, ಆಕೆಯ ಆರೋಗ್ಯ ಸ್ಥಿರವಾದ ಬಳಿಕವೇ ವಿಚಾರಣೆ ನಡೆಸಲಾಗುವುದು ಎಂದು ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ತಿಳಿಸಿದ್ದಾರೆ. ಇದೇ ವೇಳೆ ಹಲ್ಲೆಗೆ ಒಳಗಾಗಿದ್ದ ಮಗುವಿನ ಆರೋಗ್ಯದಲ್ಲೂ ಚೇತರಿಕೆ ಕಂಡುಬಂದಿದ್ದು, ಪ್ರಾಣಾಪಾಯದಿಂದ ಪಾರಾಗಿದೆ ಎಂದು ಮಾಹಿತಿ ನೀಡಿದ್ದಾರೆ.
ಧಾರವಾಡದ ವೈದ್ಯ ಡಾ. ಕಿರಣ್ ಹೊನ್ನಣ್ಣವರ ಹತ್ಯೆ ಪ್ರಕರಣದ ತನಿಖೆ ಕುರಿತು ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಮಾಹಿತಿ ನೀಡಿದ್ದಾರೆ.
ಪ್ರಕರಣದ ಆರೋಪಿ ಪ್ರಿಯಾಂಕಾ ಸದ್ಯ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಗ್ಲೂಕೋಸ್ ಮಟ್ಟ ಕಡಿಮೆಯಾಗಿದ್ದ ಹಿನ್ನೆಲೆಯಲ್ಲಿ ವೈದ್ಯಕೀಯ ನಿಗಾದಲ್ಲಿದ್ದಾರೆ. ಆರೋಪಿ ಸಂಪೂರ್ಣ ದೈಹಿಕ ಹಾಗೂ ಮಾನಸಿಕವಾಗಿ ಚೇತರಿಸಿಕೊಂಡ ನಂತರವೇ ವಶಕ್ಕೆ ಪಡೆದು ಪ್ರಕರಣ ಸಂಬಂಧ ಸುದೀರ್ಘ ವಿಚಾರಣೆ ನಡೆಸಲಾಗುವುದು ಎಂದು ಅವರು ತಿಳಿಸಿದ್ದಾರೆ.
ಇದೇ ಪ್ರಕರಣದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಎಂಟು ವರ್ಷದ ಮಗುವಿನ ಆರೋಗ್ಯದಲ್ಲೂ ಗಮನಾರ್ಹ ಸುಧಾರಣೆ ಕಂಡುಬಂದಿದ್ದು, ಮಗು ಪ್ರಾಣಾಪಾಯದಿಂದ ಪಾರಾಗಿದೆ. ಪ್ರಕರಣದ ಎಲ್ಲಾ ಆಯಾಮಗಳ ಕುರಿತು ಪೊಲೀಸರು ತನಿಖೆ ಮುಂದುವರಿಸಿದ್ದು, ವಿಚಾರಣೆ ಬಳಿಕ ಹೆಚ್ಚಿನ ಮಾಹಿತಿ ಬಹಿರಂಗವಾಗುವ ಸಾಧ್ಯತೆ ಇದೆ.




