Political News: ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳ ಸಮರ್ಪಕ ಜಾರಿಗೆ ಆಗ್ರಹಿಸಿ ಕರ್ನಾಟಕ ಬಿಜೆಪಿ ವತಿಯಿಂದ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ನಡೆದ ಪ್ರತಿಭಟನೆಯಲ್ಲಿ ದೊಡ್ಡಬಳ್ಳಾಪುರ ಬಿಜೆಪಿ ಶಾಸಕ ಧೀರಜ್ ಮುನಿರಾಜು ಭಾಗಿಯಾಗಿದ್ರು. ಈ ವೇಳೆ ಮಾತ್ನಾಡಿದ ಧೀರಜ್ ಮುನಿರಾಜು, ಕಾಂಗ್ರೆಸ್ ಅಧಿಕಾರಕ್ಕೆ ಬರಲು 5 ಗ್ಯಾರೆಂಟಿ ಯೋಜನೆ ಘೋಷಣೆ ಮಾಡಿತ್ತು. ಇದೀಗ ಅಧಿಕಾರಕ್ಕೆ ಬಂದ ಮೇಲೆ, ಯಾವ ಯೋಜನೆಯನ್ನೂ ಸರಿಯಾಗಿ ಜಾರಿ ಮಾಡ್ತಿಲ್ಲ. ಕರ್ನಾಟಕ ಜನರನ್ನ ಕಾಂಗ್ರೆಸ್ ವಂಚಿಸಿ, ಮೋಸ ಹಾಗೂ ದ್ರೋಹ ಮಾಡಿದೆ ಅಂತ ಆಕ್ರೋಶ ವ್ಯಕ್ತಪಡಿಸಿದ್ರು.
ಕಾಂಗ್ರೆಸ್ ವಂಚನೆ ವಿರುದ್ಧ ಬಿಜೆಪಿ ಹೋರಾಟ ಮಾಡಿ ಜನರಿಗೆ ನ್ಯಾಯ ದೊರಕಿಸಿಕೊಡಲಿದೆ ಎಂದು ಶಾಸಕ ಧೀರಜ್ ಮುನಿರಾಜು ಹೇಳಿದ್ರು. ಫ್ರೀಡಂಪಾರ್ಕ್ ನಲ್ಲಿ ನಡೆದ ಪ್ರತಿಭಟನೆ ನೇತೃತ್ವವನ್ನ ಮಾಜಿ ಸಿಎಂ ಯಡಿಯೂರಪ್ಪ ವಹಿಸಿದ್ರೆ, ಅಧ್ಯಕ್ಷ ನಳೀನ್ ಕುಮಾರ್ ಕಟೀಲ್ ಸೇರಿದಂತೆ ಬಿಜೆಪಿ ಮುಖಂಡರು, ಕಾರ್ಯಕರ್ತರು ಭಾಗಿಯಾಗಿದ್ರು..
ಕುಮಾರಸ್ವಾಮಿಯಿಂದ ಸಿದ್ದರಾಮಯ್ಯನವರು ಕಲಿಯುವ ಅವಶ್ಯಕತೆಯಿಲ್ಲ- ಸಚಿವ ಡಾ.ಎಂ.ಸಿ.ಸುಧಾಕರ್ ಪ್ರತಿಕ್ರಿಯಿಸಿದ್ದಾರೆ.
ಯಾವ ಜೈಲಿನಲ್ಲಿ ಬ್ರಿಟೀಷರು ಸ್ವಾತಂತ್ರ ಹೋರಾಟಗಾರರನ್ನು ಬಂದಿಸಿ ಇಡುತಿದ್ದರು ?