ದೊಡ್ಡಬಳ್ಳಾಪುರ : ಖಾದಿ ಬೋರ್ಡ್ ಪರೀಕ್ಷೆಯನ್ನು (Khadi Board Exam) ಬರೆಯಲು ವಿದ್ಯಾರ್ಥಿಗಳಿಗೆ ತಾಂತ್ರಿಕ ಕಾರಣಗಳನ್ನು(Technical reason) ಹೇಳಿ ಪರೀಕ್ಷೆಯನ್ನು ಬರೆಯಲು ಅವಕಾಶ ನೀಡದ ಕಾರಣ ವಿದ್ಯಾರ್ಥಿಗಳು ಎಕ್ಸಾಮ್ ಸೆಂಟರ್ ಸಿಬ್ಬಂದಿಗಳ (Exam Center staff) ವಿರುದ್ಧ ಆಕ್ರೋಶವನ್ನು ಹೊರಹಾಕಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ (doddaballapuara) ತಾಲೂಕಿನ ನಾಗದೇನಹಳ್ಳಿ ಬಳಿಯ ಗೀತಂ ಯೂನಿವರ್ಸಿಟಿಯಲ್ಲಿ (Geetham University) 3 ಗಂಟೆಗೆ ಆರಂಭವಾಗಬೇಕಾಗಿದ್ದ ಪರೀಕ್ಷೆ ತಾಂತ್ರಿಕ ದೋಷದ ಕಾರಣ ಪರೀಕ್ಷೆ ಬರೆಯಲು ಅವಕಾಶ ನೀಡದ ಕಾರಣ ಗಿತಂ ಯುನಿವರ್ಸಿಟಿ ವಿರುದ್ಧ ನೂರಾರು ವಿದ್ಯಾರ್ಥಿಗಳು ಸಾವಿರಾರು ಕನಸು ಕಟ್ಟಿಕೊಂಡು ಬಂದಿದ್ದು ಪರೀಕ್ಷೆ ಬರೆಯಲು ಅವಕಾಶ ಕೊಟ್ಟಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದು, ಈಗಾಗಲೇ ರಾಜ್ಯದಾದ್ಯಂತ ಪರೀಕ್ಷೆಯನ್ನು ವಿದ್ಯಾರ್ಥಿಗಳು ಬರೆದಿದ್ದಾರೆ. ನಮಗೆ ಅವಕಾಶ ನೀಡಿಲ್ಲ ನಮಗೆ ನ್ಯಾಯ ಕೊಡಿಸುವಂತೆ ಗೀತಂ ಕಾಲೇಜು ಮುಂದೆ ವಿದ್ಯಾರ್ಥಿಗಳು ಪ್ರತಿಭಟನೆ (Students protest)ನಡೆಸಿ ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ. ಇನ್ನು ಎಷ್ಟೋ ಕನಸು ಕಟ್ಟಿಕೊಂಡು ತಮ್ಮ ಭವಿಷ್ಯವನ್ನು ರೂಪಿಸಿಕೊಳ್ಳಲು ಬಂದಿದ್ದ ವಿದ್ಯಾರ್ಥಿಗಳಿಗೆ ನ್ಯಾಯ ಸಿಗುವಂತಾಗಲಿ.

