Doddaballapura News: ಬೆಂಗಳೂರು ಹಾಲು ಒಕ್ಕೂಟ, ಬಮೂಲ್ ನಿರ್ದೇಶನ ಸ್ಥಾನಗಳಿಗೆ ಚುನಾವಣೆ ನಡೆಯುತ್ತಿದೆ. ಬೆಂಗಳೂರು ಗ್ರಾಮಾಂತರ ದೊಡ್ಡಬಳ್ಳಾಪುರ ಬಮೂಲ್ ನಿರ್ದೇಶಕ ಚುನಾವಣೆಯಲ್ಲಿ ಬದ್ಧ ವೈರಿಗಳು ಮೈತ್ರಿ ಮಾಡಿಕೋಂಡಿದ್ದಾರೆ.
ರಾಜ್ಯ ರಾಜಕಾರಣದಲ್ಲಿ ಜೆಡಿಎಸ್ ಮತ್ತು ಕಾಂಗ್ರೆಸ್ ಬದ್ಧ ವೈರಿಗಳು. ಆದರೆ ಬಮೂಲ್ ಚುನಾವಣೆಯಲ್ಲಿ ಜೆಡಿಎಸ್ ಬೆಂಬಲಿತ ಅಭ್ಯರ್ಥಿ ಹುಸ್ಕೂರ್ ಆನಂದ್ಗೆ ಕಾಂಗ್ರೆಸ್ ಬಾಹ್ಯ ಬೆಂಬಲ ನೀಡುತ್ತಿದೆ. ದೊಡ್ಡಬಳ್ಳಾಪುರ ಮಾಜಿ ಶಾಸಕ ವೆಂಕ”ರಮಣಯ್ಯ ಬಾಹ್ಯ ಬೆಂಬಲ ಘೋಷಿಸಿದ್ದು, ಬಿಜೆಪಿ ಬೆಂಬಲಿತ ಅಭ್ಯರ್ಥಿ ಬಿ.ಸಿ.ಆನಂದ್ ಅವರನ್ನು ಸೋಲಿಸಲು, ದೊಡ್ಡಬಳ್ಳಾಪುರದಲ್ಲಿ ಜೆಡಿಎಸ್ ಕಾಂಗ್ರೆಸ್ ಮೈತ್ರಿ ಮಾಡಿಕ“ಂಡಿದೆ ಎಂದು ವೆಂಕ”ರಮಣಯ್ಯ ಹೇಳಿದ್ದಾರೆ.
ಕಳೆದ ಬಾರಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಯಾಗಿ ಬಿ.ಸಿ.ಆನಂದ್ ಸ್ಪರ್ಧಿಸಿದ್ದರು. ಆದರೆ ಈ ಬಾರಿ ಬಿಜೆಪಿ ಬೆಂಬಲಿತ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ. ಹಾಗಾಗಿ ಇವರನ್ನು ಸೋಲಿಸಲು ಜೆಡಿಎಸ್ ಮತ್ತು ಕಾಂಗ್ರೆಸ್ ಮೈತ್ರಿ ಮಾಡಿಕೋಂಡಿದೆ.