Sunday, September 8, 2024

Latest Posts

Doddaballapura : ಅಧಿಕಾರಿಗಳ ಗೈರು, ಹಾಡೋನಹಳ್ಳಿ ಗ್ರಾ.ಪಂ. ಸಭೆ ಮುಂದೂಡಿಕೆ..!

- Advertisement -

ದೊಡ್ಡಬಳ್ಳಾಪುರ : ಬೆಂಗಳೂರು ಗ್ರಾಮಾಂತರ(Bangalore Rural) ಜಿಲ್ಲೆಯ ದೊಡ್ಡಬಳ್ಳಾಪುರ(DoddaBullapur) ತಾಲ್ಲೂಕಿನ ತೂಬಗೆರೆ ಹೋಬಳಿಯ ಹಾಡೋನಹಳ್ಳಿ ಗ್ರಾಮಪಂಚಾಯ್ತಿ(Hodonahalli Gram Panchayat)ಗ್ರಾಮ ಸಭೆಯನ್ನು ಆಯೋಜನೆ ಮಾಡಲಾಗಿತ್ತು. ಈ ಗ್ರಾಮ ಸಭೆಗೆ ದೇವನಹಳ್ಳಿ ಶಾಸಕ ನಿಸರ್ಗ ನಾರಾಯಣಸ್ವಾಮಿ(Mla Nisarga Narayanaswamy) ಆಗಮಿಸಿದ್ದು ಗ್ರಾಮಸಭೆ ಪ್ರಾರಂಭಕ್ಕೂ ಮುನ್ನ ಹಾಡೋನಹಳ್ಳಿ ಗ್ರಾಮದ ಕಾಂಕ್ರೀಟ್ ರಸ್ತೆ ಕಾಮಗಾರಿಯ ಗುದ್ದಲಿಪೂಜೆಯನ್ನು ಶಾಸಕ ನಿಸರ್ಗ ನಾರಾಯಣಸ್ವಾಮಿ ಹಾಗೂ ಗ್ರಾಮಪಂಚಾಯ್ತಿ ಅದ್ಯಕ್ಷರು ಸದಸ್ಯರು ಗುದ್ದಲಿ ಪೂಜೆ ನೆರವೇರಿಸಿದರು. ನಂತರ ಗ್ರಾಮಸಭೆ ವೇದಿಕೆಗೆ ಆಗಮಿಸಿ ಗ್ರಾಮಸಭೆ ಕಾರ್ಯಕ್ರಮವನ್ನು ಶಾಸನ ನಿಸರ್ಗ ನಾರಾಯಣಸ್ವಾಮಿ ಉದ್ಘಾಟಿಸಿದರು.ಸ್ವಾಗತ ಭಾಷಣದ ನಂತರ ಅಧಿಕಾರಿಗಳು ಗ್ರಾಮಸಭೆಗೆ ಗೈರು ಹಾಜರಾಗಿದ್ದನ್ನ ಗಮನಿಸಿದ ಶಾಸಕ ನಿಸರ್ಗ ನಾರಾಯಣಸ್ವಾಮಿ ಗೈರು ಹಾಜರಾಗಿದ್ದ ತಾಲೂಕು ತಹಶಿಲ್ದಾರ್ ಸೇರಿದಂತೆ ಅಧಿಕಾರಿಗಳಿಗೆ ಪೋನ್ ಮಾಡಿ ಪೋನಿನಲ್ಲೆ ಅಧಿಕಾರಿಗಳಿಗೆ ತರಾಟೆಗೆ ತೆಗೆದುಕೊಂಡರು. ಗ್ರಾಮಸಭೆಗೆ ಅಧಿಕಾರಿಗಳು ಗೈರು ಹಾಜರಾದ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ ದೇವನಹಳ್ಳಿ ಶಾಸಕ ನಿಸರ್ಗ ನಾರಾಯಣಸ್ವಾಮಿ ತೂಬಗೆರೆ ಹೋಬಳಿಯು ದೇವನಹಳ್ಳಿ ವಿಧಾನಸಭೆ ಕ್ಷೇತ್ರಕ್ಕೆ ಒಳಪಟ್ಟಿದ್ದು ದೊಡ್ಡಬಳ್ಳಾಪುರ ತಾಲ್ಲೂಕಿನ ಅಧಿಕಾರಿಗಳು ತೂಬಗೆರೆ ಹೋಬಳಿಯನ್ನು ನಿರ್ಲಕ್ಷಿಸುತ್ತಿದ್ದಾರೆ. ಮಲತಾಯಿ ದೋರಣೆ ಮಾಡುತ್ತಿದ್ದಾರೆ ಅಧಿಕಾರಿಗಳು ಗೈರುಹಾಜರಾದ ಬಗ್ಗೆ ಜಿಲ್ಲಾಧಿಕಾರಿಗಳಿಗೆ ಹಾಗೂ ಸಿ.ಇ.ಒ, ಸಂಬಂದಪಟ್ಟ ಸಚಿವರ ಗಮನಕ್ಕೆ ತಂದು ತೂಬಗೆರೆ ಹೋಬಳಿಯನ್ನು ನಿರ್ಲಕ್ಷ ಮಾಡುತ್ತಿರುವ ದೊಡ್ಡಬಳ್ಳಾಪುರ ತಾಲ್ಲೂಕಿನ ಅಧಿಕಾರಿಗಳಿಗೆ ಕಾನೂನು ರೀತಿಯ ಕ್ರಮ ಕೈಗೊಳ್ಳಬೇಕು ಅಂತ ಗ್ರಾಮಸಭೆಯನ್ನು ಮುಂದೂಡುತ್ತಿದ್ದೇವೆ ಅಂತ ಮಾತನಾಡಿದರು. ಗ್ರಾಮಪಂಚಾಯ್ತಿ ಅಭಿವೃದ್ಧಿ ಅಧಿಕಾರಿ ನರಸಿಂಹಮೂರ್ತಿ ಗ್ರಾಮಸಭೆ ಆಯೋಜನೆ ಮಾಡಿರುವ ಬಗ್ಗೆ ಗ್ರಾಮಪಂಚಾಯ್ತಿ ಸದಸ್ಯ ಆನಂದ್ ಕುಮಾರ್ ಹೆಚ್.ಕೆ(Anand Kumar HK)ಅಸಮಾಧಾನ ವ್ಯಕ್ತಪಡಿಸಿದ್ದು, ವಾಟರ್ ಮ್ಯಾನ್(Water Man) ಮೂಲಕ ಗ್ರಾಮ ಸಭೆಯ ಬಗ್ಗೆ ಮಾಹಿತಿ ನೀಡುತ್ತಾರೆ. ನಮ್ಮ ಗ್ರಾಮದಲ್ಲಿ ಆಗುವ ರಸ್ತೆ ಕಾಮಗಾರಿಯ ಬಗ್ಗೆ ನನಗೆ ಮಾಹಿತಿಯನ್ನು ನೀಡಲ್ಲ ಎಂದು ಪಿಡಿಓ ವಿರುದ್ಧ ಗ್ರಾಮ ಪಂಚಾಯತಿ ಸದಸ್ಯ ಆನಂದ್ ಕುಮಾರ್ ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದರು.

- Advertisement -

Latest Posts

Don't Miss