Saturday, July 5, 2025

Latest Posts

ಪಕ್ಷದ ಘನತೆಗೆ ಧಕ್ಕೆ ತರದಿರಿ: ನಳಿನ್ ಕುಮಾರ್ ಕಟೀಲ್ ಸೂಚನೆ

- Advertisement -

Political News: ಬೆಂಗಳೂರು: ವಿಧಾನಸಭೆ ವಿರೋಧ ಪಕ್ಷದ ನಾಯಕನ ಸ್ಥಾನ, ಪಕ್ಷದ ರಾಜ್ಯಾಧ್ಯಕ್ಷರ ಸ್ಥಾನಕ್ಕೆ ನೇಮಕ ಕುರಿತು ಪಕ್ಷದ ನಾಯಕರು ಹೇಳಿಕೆಗಳನ್ನು ನೀಡಿ ಪಕ್ಷದ ಘನತೆಗೆ ಧಕ್ಕೆ ತರಬಾರದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಸಂಸದ ನಳಿನ್‍ಕುಮಾರ್ ಕಟೀಲ್ ಅವರು ಸೂಚಿಸಿದ್ದಾರೆ.

ವಿಪಕ್ಷ ನಾಯಕನ ಸ್ಥಾನ ಮತ್ತಿತರ ಹುದ್ದೆಗೆ ಸಂಬಂಧಿಸಿ ಪಕ್ಷದ ಕೇಂದ್ರ ಸಂಸದೀಯ ಮಂಡಳಿಯು ಸೂಕ್ತ ಸಮಯದಲ್ಲಿ ಸಮರ್ಥ ನಿರ್ಧಾರವನ್ನು ಪ್ರಕಟಿಸಲಿದೆ. ಪಕ್ಷದ ಕೆಲವು ನಾಯಕರು ಈ ನಡುವೆ ಮಾಧ್ಯಮಗಳ ಮುಂದೆ ವಿವಿಧ ಹುದ್ದೆ ಕುರಿತು ಆಕಾಂಕ್ಷೆ ವ್ಯಕ್ತಪಡಿಸುವುದು ಗಮನಕ್ಕೆ ಬಂದಿದೆ. ಅಲ್ಲದೆ, ಪಕ್ಷದ ಸಭೆಗಳಲ್ಲಿ ಈ ವಿಷಯವಾಗಿ ಚರ್ಚಿಸುತ್ತಿರುವುದು ಸರಿಯಲ್ಲ ಎಂದು ಅವರು ತಿಳಿಸಿದ್ದಾರೆ.

ಪಕ್ಷದ ಘನತೆಗೆ ಧಕ್ಕೆ ಉಂಟಾಗದಂತೆ ನಾಯಕರು ನೋಡಿಕೊಳ್ಳಬೇಕು. ಪಕ್ಷದ ಆಂತರಿಕ ವಿಚಾರಗಳನ್ನು ಮಾಧ್ಯಮಗಳ ಮುಂದೆ ಚರ್ಚಿಸುವುದು ಸೂಕ್ತವಲ್ಲ ಎಂದು ಅವರು ಸೂಚಿಸಿದ್ದಾರೆ.

ವಂದೇ ಭಾರತ್ ರೈಲು ಸಂಚಾರ; ಇಲ್ಲಿದೆ ರೇಟ್ ಬೋರ್ಡ್…!

ದೇವನಹಳ್ಳಿ ವಿಮಾನ ನಿಲ್ದಾಣಕ್ಕೂ ಕೆಂಪೇಗೌಡ ವಿಮಾನ ನಿಲ್ದಾಣ ಅಂತ ಹೆಸರಿಟ್ಟವರು ನಾವು

‘ಅಕ್ಕಿ ಸಿಕ್ಕಿದ ಕೂಡಲೇ ಅನ್ನ ಭಾಗ್ಯ ಯೋಜನೆ ಜಾರಿಯಾಗತ್ತೆ’

- Advertisement -

Latest Posts

Don't Miss