Friday, March 14, 2025

Latest Posts

ಅನಗತ್ಯ ಮಾತನಾಡಬೇಡಿ, ಇದು ನಾಚಿಕೆಗೇಡಿನ ಸಂಗತಿ: ರನ್ಯಾ ಕೇಸ್ ಬಗ್ಗೆ ಜೋಶಿ ವಾಗ್ದಾಳಿ

- Advertisement -

Hubli News: ಹುಬ್ಬಳ್ಳಿಯಲ್ಲಿಂದು ಮಾತನಾಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ರನ್ಯಾ ರಾವ್ ಪ್ರಕರಣದಲ್ಲಿ ರಾಜ್ಯ ಸರ್ಕಾರದ ನಿರ್ವಹಣೆ ನೋಡಿದ್ರೆ ಯಾರನ್ನೋ ರಕ್ಷಣೆ ಮಾಡಲು ಪ್ರಯತ್ನ ಮಾಡುತ್ತಿದ್ದಂತೆ ಕಾಣುತ್ತಿದೆ ಎಂದು ಆರೋಪಿಸಿದ್ದಾರೆ.

ಪುಂಕಾನು ಪುಂಕವಾಗಿ ಇಷ್ಟು ಆರೋಪಗಳು ಬರುತ್ತಿರುವುದು ನೋಡಿದ್ರೆ ಇದರಲ್ಲಿ ರಾಜಕಾರಣಿಗಳು ಇರುವುದು ಸ್ಪಷ್ಟವಾಗುತ್ತಿದೆ. ಇದು ದೇಶದ್ರೋಹದ ಕೆಲಸ. ಅಕ್ರಮವಾಗಿ ತಂದ ಬಂಗಾರ ಎಲ್ಲಿಗೆ ಹೋಗುತ್ತಿತ್ತು. ದೇಶದ್ರೋಹಿಗಳಿಗಾ , ನಕ್ಸಲ್ ಗಳಿಗಾ, ಎಲ್ಲಿಗೆ ಹೋಗುತ್ತಿತ್ತು ?. ಇದರಲ್ಲಿ ಯಾರನ್ನು ರಕ್ಷಣೆ ಮಾಡಲು ಹೊರಟಿದೆ. ಯಾರೋ ಮಂತ್ರಿಯನ್ನು ರಕ್ಷಣೆ ಮಾಡುವ ಕಾರ್ಯ ನಡೆದಿದೆ. ಇದರಲ್ಲಿ ರಾಜ್ಯ ಸರ್ಕಾರದ ಪಾತ್ರ ಇದೆ ಅನ್ನಿಸುತ್ತಿದೆ. ಡಿಐಜಿ ಮಗಳು ಇದ್ದಾರೆ ಎನ್ನುವ ಆರೋಪಯಿದೆ. ಹೀಗಾಗಿ ಸಿಐಡಿಗೆ ಯಾಕೆ ತನಿಖೆಗೆ ಕೊಟ್ಟ್ರಿ ಒಬ್ಬ ಡಿಐಜಿ ನಾ ಒಬ್ಬ ಸಿಐಡಿ ಎಸ್ಪಿ ತನಿಖೆ ಮಾಡಲು ಆಗುತ್ತಾ?. ಗೃಹ ಸಚಿವ ಪರಮೇಶ್ವರ ಅವರೇ ಯಾರದ್ದೋ ಒತ್ತಡದಿಂದ ಹೇಳಿಕೆ ನೀಡಬೇಡಿ ಎಂದು ಜೋಶಿ ಹೇಳಿದ್ದಾರೆ.

ಗ್ಯಾರಂಟಿ ಅನುಷ್ಠಾನ ಕಾರ್ಯಕರ್ತರಿಗೇನು ಕೆಲಸ..? ಜನರಿಂದ ಆಯ್ಕೆಯಾದ ಜನಪತ್ರಿನಿಧಿಗಳು, ಮಂತ್ರಿಗಳು, ಅಧಿಕಾರಿಗಳು ಏನು ಕತ್ತೆ ಕಾಯುತ್ತಾರಾ?. ಗ್ಯಾರಂಟಿ ಅನುಷ್ಠಾನಕ್ಕೆ ನೇಮಕಮಾಡಿರುವ ಸದಸ್ಯರಿಗೆ ಸರ್ಕಾರ ಕೋಟಿ ಕೋಟಿ ಸಂಬಳ ನೀಡುತ್ತಿದೆ. ಇದು ಜನರ ಹಣ ಇವರಿಗೆ ಯಾಕೆ ಹಣ ನೀಡಲಾಗುತ್ತಿದೆ. ರಾಜ್ಯ ಸರ್ಕಾರ ಹಗಲು ದರೋಡೆ ಮಾಡುತ್ತಿದೆ. ಜನರು ಇದಕ್ಕೆ ಪತ್ರ , ಇಮೇಲ್, ಸೋಷಿಯಲ್‌ ಮೀಡಿಯಾದಲ್ಲಿ ಪ್ರಶ್ನೆ ಮಾಡಬೇಕು. ವಿರೋಧ ವ್ಯಕ್ತಪಡಿಸಬೇಕು. ಸಿದ್ದರಾಮಯ್ಯ ಅಂದ್ರೆ ಸುಳ್ಳುರಾಮಯ್ಯ. ಬರೀ ಹಸಿ ಸುಳ್ಳು ಹೇಳತ್ತಾರೆ.

ಕಾಂಗ್ರೆಸ್ ಶಾಸಕರು, ಸಚಿವರು ಸಂತೋಷವಾಗಿಲ್ಲ. ಮುಖ್ಯ ಮಂತ್ರಿ ಮುಂದೆ ಸಚಿವರಿಗೆ ಹೇಳಲು ತಾಕತ್ತು ಇಲ್ಲ. ಕಾಂಗ್ರೆಸ್ ಕಾರ್ಯಕರ್ತರಿಗೆ ದುಡ್ಡುಕೊಟ್ಟು , ಸರ್ಕಾರಿ ಕಚೇರಿ ಕರೆಂಟ್ ಬಿಲ್ ತುಂಬಿಲ್ಲ. ನಿಮ್ಮ ಯೋಗ್ಯತೆ, ನಿಮ್ಮ ಸ್ಥಿತಿಯಿದೆ ಇಷ್ಟೆ ಇದೆ. ಜನ ನಿಮ್ಮನ್ನಾ ಹಾರಿಸಿ ತಂದಿದ್ದಾರೆ, ನಿಮ್ಮ ಕಾರ್ಯಕರ್ತರು ನಿಮ್ಮ ಪರವಾಗಿ ಕೆಲಸ ಮಾಡಿದ್ದಾರೆ ಅಷ್ಟೇ. ಇದು ರಾಜ್ಯ ಸರ್ಕಾರ ಜನರಿಗೆ ಬಗೆಯುತ್ತಿರುವ ದ್ರೋಹ. ಈಶ್ವರ, ಸಂವಿಧಾನದ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿಕಾರಿ ಜನಕ್ಕೆ ದ್ರೋಹ ಮಾಡುತ್ತಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಆರೋಪಿಸಿದ್ದಾರೆ.

ಧರ್ಮಾಧಾರಿತ ಮೀಸಲಾತಿ ಒಪ್ಪಲು ಸಾಧ್ಯವಿಲ್ಲ. ಈ ಬಗ್ಗೆ ದೇಶಾದ್ಯಂತ ವಿರೋಧ ವ್ಯಕ್ತವಾಗುತ್ತಿದೆ. ನಾವು ಈ ಬಗ್ಗೆ ನಾವು ಕಾನೂನು ಹೋರಾಟ ಮಾಡುತ್ತೆವೆ. ಯಾವ ಜಮೀರ್ ಅಹ್ಮದ್ ಹೇಳಿದ್ರೇನು ಆಗಲ್ಲ. ಈ ಹಿಂದೆ ಜಮೀರ್ ನೀಡಿದ್ದ ಒಂದು ಹೇಳಿಕೆನಿಂದ ಏನಾಗಿದೆ ಗೊತ್ತು. ಎಷ್ಟು ಆತ್ಮಹತ್ಯೆಗಳಾಗಿವೆ ಎಂದು ಕಾಂಗ್ರೆಸ್ ವಿರುದ್ಧ ಜೋಶಿ ವಾಗ್ದಾಳಿ ನಡೆಸಿದ್ದಾರೆ.

- Advertisement -

Latest Posts

Don't Miss