Saturday, July 27, 2024

Latest Posts

ಮಂಡ್ಯದಲ್ಲಿ ಡಾ.ಅಂಬರೀಷ್ ಫೌಂಡೇಷನ್ ಆರಂಭ: ವಿದ್ಯಾರ್ಥಿಗಳನ್ನು ದತ್ತು ಪಡೆದ ಸುಮಲತಾ

- Advertisement -

Movie News: ಇಂದು ದಿವಂಗತ ನಟ ಅಂಬರೀಷ್ ಅವರ ಹುಟ್ಟುಹಬ್ಬವಾಗಿದ್ದು, ಅವರ ಪತ್ನಿ ಸುಮಲತಾ ಅಂಬರೀಷ್ ಮತ್ತು ಮಗ ಅಭಿಷೇಕ್ ಅಂಬರೀಷ್ ಅಂಬರೀಷ್ ಸಮಾಧಿಗೆ ಭೇಟಿ ನೀಡಿ, ಪೂಜೆ ಸಲ್ಲಿಸಿದರು.

ಈ ವಿಶೇಷ ದಿನದಂದು ಮಂಡ್ಯದಲ್ಲಿ ಕಾರ್ಯಕ್ರಮ ಮಾಡಲಾಗಿದ್ದು, ಸುಮಲತಾ ಅಂಬರೀಷ್ ಮಂಡ್ಯದಲ್ಲಿ ಡಾ.ಅಂಬರೀಷ್ ಫೌಂಡೇಶನ್ ಆರಂಭಿಸಿದ್ದಾರೆ. ಈ ಸಂಸ್ಥೆಯ ಮೂಲಕ, ವಿದ್ಯಾರ್ಥಿಗಳನ್ನು ದತ್ತು ಪಡೆದು ಶಿಕ್ಷಣ ಕೊಡಿಸಲಿದ್ದೇವೆ ಎಂದು ಸುಮಲತಾ ಅಂಬರೀಷ್ ಹೇಳಿದ್ದಾರೆ.

ಕಾರ್ಯಕ್ರಮದಲ್ಲಿ ಮಾತನಾಡಿದ ಸುಮಲತಾ ಅಂಬರೀಷ್, ಯಾವತ್ತೂ ಓರ್ವ ವ್ಯಕ್ತಿಗೆ ಅಧಿಕಾರ ಶಾಶ್ವತವಲ್ಲ. ಜನರ ಪ್ರೀತಿ ಶಾಶ್ವತ. ಹಾಗಾಗಿ ಅಂಬರೀಷ್ ಸಾಧನೆಗಳನ್ನು ಮುಂದುವರಿಸುವ ಉದ್ದೇಶದಿಂದ ಈ ಸಂಸ್ಥೆ ನಿರ್ಮಿಸುತ್ತಿದ್ದೇವೆ. ಈ ಸಂಸ್ಥೆಯಿಂದ ಮಕ್ಕಳನ್ನು ದತ್ತು ಪಡೆದು, ಅವರಿಗೆ ವಿದ್ಯಾಭ್ಯಾಸ ಕೊಡಿಸುತ್ತೇವೆ ಎಂದು ಸುಮಲತಾ ಅಂಬರೀಷ್ ಹೇಳಿದ್ದಾರೆ.

ಲವ್ ಜಿಹಾದ್ ನಲ್ಲಿ ಸಿಲುಕಿರುವ ಹಿಂದೂ ಹೆಣ್ಣು ಮಕ್ಕಳ ರಕ್ಷಣೆಗಾಗಿ ಸಹಾಯವಾಣಿ ಆರಂಭಿಸಿದ ಶ್ರೀರಾಮಸೇನೆ

Udupi News: ದೈವದ ನುಡಿದಂತೆ ನಡೆಯಿತು ಘಟನೆ: ಕೊ* ಆರೋಪಿ ಅರೆಸ್ಟ್

- Advertisement -

Latest Posts

Don't Miss