ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮದಿಂದ ವಿವಿಧ ತರಬೇತಿಗೆ ಅರ್ಜಿ ಆಹ್ವಾನ

ಹಾವೇರಿ: ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮದಿಂದ ವಿವಿಧ ತರಬೇತಿಗೆ ಪರಿಶಿಷ್ಟ ಜಾತಿಯ ಸಮುದಾಯದ ಯುವಕ ಹಾಗೂ ಯುವತಿಯರಿಂದ ಅರ್ಜಿ ಆಹ್ವಾನಿಸಲಾಗಿದೆ.

ಟೆಲಿವಿಷನ್ ಜರ್ನಲಿಸಂ, ವಿಡಿಯೋ ಜರ್ನಲಿಸಂ, ಕ್ಯಾಮರಮನ್, ನಿರೂಪಣೆ, ವರದಿಗಾರಿಕೆ,ಕಾಪಿ ಎಡಿಟರ್ ಹಾಗೂ ಬುಲೆಟಿಂಗ್ ಪ್ರೊಡ್ಯೂಸರ್ ತರಬೇತಿ ನೀಡಲಾಗುವುದು. ಆಸಕ್ತ ಅಭ್ಯರ್ಥಿಗಳು ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮದ ಹಾವೇರಿ ಕಚೇರಿಯಲ್ಲಿ ಅರ್ಜಿ ನಮೂನೆ ಪಡೆಯಬಹುದಾಗಿದೆ.

ಈ ಅರ್ಜಿಯನ್ನು ಭರ್ತಿ ಮಾಡಿ, ಅಗತ್ಯ ದಾಖಲೆಗಳೊಂದಿಗೆ ಭರ್ತಿಮಾಡಿದ ಅರ್ಜಿಯನ್ನು ದಿನಾಂಕ 10-08-2022ರೊಳಗಾಗಿ ಡಾ.ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮದ ಹಾವೇರಿ ಕಚೇರಿಗೆ ಸಲ್ಲಿಸಬೇಕು ಎಂದು ಕರ್ನಾಟಕ ಆದಿಜಾಂಬವ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

About The Author